ETV Bharat / state

ಮಾರ್ಚ್ 17ಕ್ಕೆ ಚುನಾವಣಾ ರಾಜಕೀಯದಿಂದ ನಿವೃತ್ತಿ : ಸಂಸದ ವಿ ಶ್ರೀನಿವಾಸ್ ಪ್ರಸಾದ್

ನಾನು ಇನ್ನು ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರು ತಿಳಿಸಿದ್ದಾರೆ.

ಸಂಸದ ವಿ. ಶ್ರೀನಿವಾಸ್ ಪ್ರಸಾದ್
ಸಂಸದ ವಿ. ಶ್ರೀನಿವಾಸ್ ಪ್ರಸಾದ್
author img

By ETV Bharat Karnataka Team

Published : Feb 22, 2024, 4:58 PM IST

ಸಂಸದ ವಿ ಶ್ರೀನಿವಾಸ್ ಪ್ರಸಾದ್

ಮೈಸೂರು : ಮಾರ್ಚ್ 17ಕ್ಕೆ ಚುನಾವಣಾ ರಾಜಕಾರಣಕ್ಕೆ ಬಂದು 50 ವರ್ಷ. ಅಂದೇ ದೊಡ್ಡ ಸಭೆ ಮಾಡಿ ಮತದಾರರಿಗೆ ಕೃತಜ್ಞತೆ ಹೇಳಿ, ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಚಾಮರಾಜನಗರದ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಈಟಿವಿ ಭಾರತ್​ ನಡೆಸಿದ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದಾರೆ.

ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ತಮ್ಮ ಮನೆಯಲ್ಲಿ ಈಟಿವಿ ಭಾರತ ಜೊತೆ ಮಾತನಾಡಿದ ಸಂಸದ ಶ್ರೀನಿವಾಸ್ ಪ್ರಸಾದ್, ನಾನು ಇನ್ನು ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ. ಪ್ರಚಾರ ಸಹ ಮಾಡುವುದಿಲ್ಲ ಎಂದರು. ತಮ್ಮ ಅಳಿಯ ಡಾ. ಮೋಹನ್ ಮುಂದಿನ ಚಾಮರಾಜನಗರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂಬ ಪ್ರಶ್ನೆಗೆ, ಈ ವಿವಾದದ ಬಗ್ಗೆ ನನಗೆ ಗೊತ್ತಿಲ್ಲ. ಹೈಕಮಾಂಡ್ ಯಾವ್ಯಾವ ಕ್ಷೇತ್ರಕ್ಕೆ ಯಾರು ಯಾರಿಗೆ ಟಿಕೆಟ್ ಎಂಬ ಬಗ್ಗೆ ತೀರ್ಮಾನ ಮಾಡುತ್ತದೆ. ಅದರಂತೆ ಟಿಕೆಟ್ ನೀಡುತ್ತಾರೆ. ಇದು ನನಗೆ ಗೊತ್ತಿಲ್ಲ. ನಾನು ಯಾರಿಗೂ ಟಿಕೆಟ್ ನೀಡಿ ಎಂದು ಹೇಳುವುದಿಲ್ಲ ಎಂದರು. ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ, ಇದು ಸರಿಯೇ? ಎಂಬ ಪ್ರಶ್ನೆಗೆ, ನಾನು ಈ ಬಗ್ಗೆ ಮಾತನಾಡುವುದಿಲ್ಲ ಎಂದು ತಿಳಿಸಿದರು.

ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ : ಮೋದಿ ಸಮುದ್ರದಲ್ಲಿ ಈಜುವ ಮನುಷ್ಯ. ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ. ಅವರಿಗೂ ಇವರಿಗೂ ಎಲ್ಲಿಯ ಹೋಲಿಕೆ?. ಸುಮ್ಮನೆ ಸಿದ್ದರಾಮಯ್ಯ ಬಾಯಿಗೆ ಬಂದಂತೆ ತಿರುಚುವುದನ್ನು ಕಲಿತಿದ್ದಾರೆ. ಸಿದ್ದರಾಮಯ್ಯ ಹಾಗೂ ಜಮೀರ್ ಇಬ್ಬರಿಗೂ ವ್ಯತ್ಯಾಸ ಇಲ್ಲ. ಇಬ್ಬರೂ ಕಿರುಚಾಡುತ್ತಾರೆ ಅಷ್ಟೇ. ಸಿದ್ದರಾಮಯ್ಯ ಗ್ಯಾರಂಟಿಗಳಿಂದ ಗೆದ್ದು ಅದೇ ಗುಂಗಿನಲ್ಲಿದ್ದಾರೆ. ಮೋದಿ ಸರ್ಕಾರದಲ್ಲಿರುವ ಜನಪರ ಯೋಜನೆಗಳ ಮುಂದೆ ಇವೆಲ್ಲವೂ ನಡೆಯುವುದಿಲ್ಲ, ನೋಡೋಣ ಎಂದ ಸಂಸದ ಶ್ರೀನಿವಾಸ್ ಪ್ರಸಾದ್, ನಮ್ಮ ಹಕ್ಕು ನಮ್ಮ ತೆರಿಗೆ ಎಂದು ದೆಹಲಿಗೆ ಹೋಗಿ ಪ್ರತಿಭಟನೆ ಮಾಡಿದ್ದಾರೆ. ಆದರೆ ನಮ್ಮ ತೆರಿಗೆ ಕೇಳುವ ರೀತಿ ಕೇಳಿದರೆ ಬಂದೇ ಬರುತ್ತದೆ. ಯಾವ ಸರ್ಕಾರವೂ ಅನ್ಯಾಯ ಮಾಡುವುದಿಲ್ಲ ಎಂದು ಹೇಳಿದರು.

ಶ್ರೀನಿವಾಸ್ ಪ್ರಸಾದ್ ಇಬ್ಬರು ಅಳಿಯಂದಿರು ಟಿಕೆಟ್ ಆಕಾಂಕ್ಷಿಗಳು : ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿರುವ ಸಂಸದ ಶ್ರೀನಿವಾಸ್ ಪ್ರಸಾದ್ ಮುಂದೆ ಯಾವುದೇ ಚುನಾವಣೆಗಳಿಗೆ ಸ್ಪರ್ಧೆ ಮಾಡುವುದಿಲ್ಲ ಎಂಬ ವಿಚಾರದ ಹಿನ್ನೆಲೆಯಲ್ಲಿ ಮುಂದೆ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾರು? ಎಂಬ ಪ್ರಶ್ನೆಗೆ ಶ್ರೀನಿವಾಸ್ ಪ್ರಸಾದ್ ಅವರ ಇಬ್ಬರು ಅಳಿಯಂದಿರಾದ ಡಾ. ಮೋಹನ ಹಾಗೂ ಮಾಜಿ ನಂಜನಗೂಡು ಶಾಸಕ ಹರ್ಷವರ್ಧನ್ ರೇಸ್​ನಲ್ಲಿದ್ದಾರೆ ಎಂಬುದು ತಿಳಿದುಬಂದಿದೆ. ಇಬ್ಬರು ಶ್ರೀನಿವಾಸ್ ಪ್ರಸಾದ್ ಅಳಿಯಂದಿರಾಗಿದ್ದು, ಇದರಲ್ಲಿ ಡಾ. ಮೋಹನ್ ಚುನಾವಣೆಗೆ ಸ್ಪರ್ಧೆ ಮಾಡಲು ಸರ್ಕಾರಿ ನೌಕರಿಗೆ ರಾಜೀನಾಮೆ ಕೊಟ್ಟು ಬಂದಿದ್ದಾರೆ. ಈ ವಿಚಾರವನ್ನು ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಶ್ರೀನಿವಾಸ್ ಪ್ರಸಾದ್ ಭೇಟಿ ಸಂದರ್ಭದಲ್ಲಿ ಚಾಮರಾಜನಗರದ ಟಿಕೆಟ್ ಬಗ್ಗೆ ತಮ್ಮ ಅಭಿಪ್ರಾಯವನ್ನು ಕೇಳಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ಓದಿ : ಮಾರ್ಚ್ 17ಕ್ಕೆ ರಾಜಕೀಯ ನಿವೃತ್ತಿ ಘೋಷಿಸುವೆ: ಸಂಸದ ಶ್ರೀನಿವಾಸ್ ಪ್ರಸಾದ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.