ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಲ್ಲಿಂದ ಎಲ್ಲಿಗೆ ಹೋಗಬೇಕು ಅಷ್ಟಕ್ಕೆ ಮಾತ್ರ ಟೋಲ್ ಹಣ ಕಟ್ಟುವ ವ್ಯವಸ್ಥೆ ಮಾಡಲಾಗುವುದು ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
ಮೈಸೂರಿನ ಕಾಡ ಕಚೇರಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. ಮೈಸೂರು-ಬೆಂಗಳೂರು ಹೈವೇಯಲ್ಲಿ 28 ಪ್ರವೇಶ ಮತ್ತು ನಿರ್ಗಮನ ಪಾಯಿಂಟ್, ಜೊತೆಗೆ ಟೋಲ್ ಬೂತ್ಗಳನ್ನು ನಿರ್ಮಾಣ ಮಾಡಲಾಗುತ್ತದೆ. ಪ್ರವಾಸುವಷ್ಟು ದೂರಕ್ಕೆ ಮಾತ್ರ ಟೋಲ್ಗಳನ್ನು ಕಟ್ಟುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮಂಡ್ಯಕ್ಕೆ ತೆರಳುವ ಬಳಿ ಎರಡು ಕಡೆಗಳಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡಲಾಗುವುದು. ಹೆದ್ದಾರಿಯಲ್ಲಿ ವಿವಿಧ ಕಾಮಗಾರಿಗಳು 711 ಕೋಟಿ ಅಂದಾಜು ಮೊತ್ತದಲ್ಲಿ ನಿರ್ಮಾಣವಾಗಲಿದೆ. ನಮ್ಮ ಮನವಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸ್ಪಂದಿಸಿದ್ದಾರೆ. ಮುಂದಿನ 6-8 ತಿಂಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ : ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ತೆರವು ವಿಚಾರವಾಗಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಕೇರಳ ಸರ್ಕಾರ ಕೂಡ ಐದು ಬಾರಿ ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡುವಂತೆ ಮನವಿ ಮಾಡಿದೆ. ಈ ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿದ್ದ ವೇಳೆಯೂ ಕೂಡ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದಿದ್ರು. ಈಗ ಯಾಕೆ ಈ ರೀತಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು ಗೊತ್ತಿಲ್ಲ. ಹೈಕೋರ್ಟ್ ಆದೇಶ ಕೂಡ ರಾತ್ರಿ ಸಂಚಾರ ನಿರ್ಬಂಧ ಬೇಡ ಎಂದು ಹೇಳಿದೆ. ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದರು.
ಮುಡಾ ಹಗರಣ ಕುರಿತು ಸಂಸತ್ನಲ್ಲಿ ಚರ್ಚಿಸುತ್ತೇವೆ : ಮುಡಾ ಹಗರಣ ವಿಚಾರ ಕುರಿತು ಮಾತನಾಡಿದ ಅವರು, ಈ ಹಿಂದೆ ಸಂಸತ್ನಲ್ಲಿ ಈ ವಿಚಾರ ಪ್ರಸ್ತಾಪ ಮಾಡಲಾಗಿತ್ತು. ಈ ಬಾರಿಯೂ ಕೂಡಾ ಚರ್ಚಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಈ ಕುರಿತು ಮಾತನಾಡುತ್ತೇವೆ. ಕೇವಲ ಮುಡಾ ಹಗರಣ ಅಷ್ಟೇ ಅಲ್ಲ, ವಾಲ್ಮೀಕಿ ಹಗರಣದ ವಿಚಾರವನ್ನು ಪ್ರಸ್ತಾಪ ಮಾಡುತ್ತೇವೆ ಎಂದು ಹೇಳಿದರು.
ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣದ ವಿಚಾರವಾಗಿ ಮಾತನಾಡಿದ ಅವರು, ಈ ಕುರಿತು ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಡಬೇಕು. ಬಾಣಂತಿಯರ ಆರೋಗ್ಯದ ಕುರಿತು ಕಾಳಜಿ ವಹಿಸಬೇಕು. ಪ್ರಕರಣದ ಕುರಿತು ನಮ್ಮ ನಾಯಕರ ಹೋರಾಟಕ್ಕೆ ನಾನು ಜೊತೆಯಾಗಿ ನಿಲ್ಲುತ್ತೇನೆ ಎಂದರು.
ಇದನ್ನೂ ಓದಿ : ಮುಡಾ ಕಚೇರಿಯಲ್ಲಿ ಇ.ಡಿ ಪರಿಶೀಲನೆ: ಸಂಸದ ಯದುವೀರ್, ಶಾಸಕ ಶ್ರೀವತ್ಸ ಹೇಳಿದ್ದೇನು?