ETV Bharat / state

ಧಾರ್ಮಿಕ ಸ್ಥಳಗಳಲ್ಲಿ ಸರ್ಕಾರದ ಮಧ್ಯಪ್ರವೇಶ ಸರಿಯಲ್ಲ: ಸಂಸದ ಯದುವೀರ್‌ ಒಡೆಯರ್ - Chamundi Hill Authority

ಸಂಸದ ಯದುವೀರ್ ಒಡೆಯರ್, ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಯ ಕುರಿತು ಮಾತನಾಡಿದ್ದಾರೆ.

mp-yaduveer-wadiyar
ಸಂಸದ ಯದುವೀರ್‌ ಒಡೆಯರ್ (ETV Bharat)
author img

By ETV Bharat Karnataka Team

Published : Aug 13, 2024, 5:06 PM IST

ಸಂಸದ ಯದುವೀರ್‌ ಒಡೆಯರ್ ಹೇಳಿಕೆ (ETV Bharat)

ಮೈಸೂರು: ರಾಜ್ಯ ಸರ್ಕಾರ ರಚಿಸಿರುವ ಚಾಮುಂಡಿ ಬೆಟ್ಟ ಪ್ರಾಧಿಕಾರಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಧಾರ್ಮಿಕ ಪದ್ಧತಿಗಳಲ್ಲಿ ಸರ್ಕಾರದ ಪಾತ್ರ ಏನೂ ಇಲ್ಲ. ಧಾರ್ಮಿಕ ವಿಚಾರಗಳಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಬಾರದು ಎಂದು ಸಂಸದ ಹಾಗೂ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ 'ಈಟಿವಿ ಭಾರತ'​ಕ್ಕೆ ತಿಳಿಸಿದರು.

ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಮಾಡಿರುವುದು ಸರಿಯಲ್ಲ. ಈ ವಿಚಾರದಲ್ಲಿ ನಮ್ಮ ತಾಯಿ ಪ್ರಮೋದಾ ದೇವಿ ಹೈಕೋರ್ಟ್​ನಲ್ಲಿ ದಾವೆ ಹೂಡಿದ್ದರು. ಕಾನೂನಾತ್ಮಕವಾಗಿ ಹೈಕೋರ್ಟ್‌ ಪ್ರಾಧಿಕಾರ ರಚನೆಗೆ ತಡೆ ನೀಡಿದೆ ಎಂದರು.

ಈಗಾಗಲೇ ಚಾಮುಂಡಿ ಬೆಟ್ಟದ ವಿಚಾರದಲ್ಲಿ ಮುಜರಾಯಿ ಇಲಾಖೆ ವಿರುದ್ದ ಕೇಸ್‌ ನಡೆಯುತ್ತಿದ್ದು, ಇನ್ನೂ ಪೂರ್ಣಗೊಂಡಿಲ್ಲ. ಇದರ ನಡುವೆ ಪ್ರಾಧಿಕಾರ ರಚನೆ ಮಾಡಿರುವುದು ಕಾನೂನಾತ್ಮಕವಲ್ಲ ಎಂದು ಹೈಕೋರ್ಟ್​ಗೆ ನಮ್ಮ ವಕೀಲರು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಕೆಆರ್​ಎಸ್​ಗೆ ಆಗಸ್ಟ್​​ 15ರಂದು ಬಾಗಿನ ಅರ್ಪಿಸುತ್ತೇವೆ. ರಾಜ್ಯದಲ್ಲಿರುವ ಎಲ್ಲಾ ಡ್ಯಾಂಗಳ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ಮಾಡಬೇಕಿದೆ. ಕೆಆರ್​ಎಸ್‌ ಜಲಾಶಯ ತುಂಬಾ ಹಳೆಯದು. ಅದರ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.

ಈ ಬಾರಿ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಹಾಗೂ ಜನಸಾಮಾನ್ಯರ ದಸರಾವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು ಸ್ವಾಗತಾರ್ಹ. ಇದರಿಂದ ನಗರಕ್ಕೆ ಹೆಚ್ಚು ಪ್ರವಾಸಿಗರು, ಜನರು ಆಗಮಿಸುತ್ತಾರೆ. ಇದು ನಮಗೆ ಅನುಕೂಲವಾಗುತ್ತದೆ. ಅದೇ ರೀತಿ ಅರಮನೆಯಲ್ಲೂ ರಾಜ್ಯ ಪರಂಪರೆಯ ರೀತಿ ನವರಾತ್ರಿ ನಡೆಯುತ್ತದೆ ಎಂದು ಹೇಳಿದರು.

ಸಿಎಂ ರಾಜೀನಾಮೆ ನೀಡುವುದು ಸೂಕ್ತ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಕುಟುಂಬ ಭಾಗಿಯಾಗಿದ್ದು, ಸಿಬಿಐ ಅಥವಾ ಉನ್ನತ ಮಟ್ಟದ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಬೇಕು. ಅಲ್ಲಿಯವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಉತ್ತಮ ಎಂದು ಯದುವೀರ್‌ ಒಡೆಯರ್‌ ಹೇಳಿದರು.

ಆಗಸ್ಟ್​ 14ರಂದು ಬುಧವಾರ ಮಧ್ಯಾಹ್ನ 3 ಗಂಟೆಗೆ ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸಲು ಅರಮನೆ ಸಮೀಪದ ಕಾಡಾ ಕಚೇರಿಯ ಆವರಣದಲ್ಲಿ ನೂತನ ಕಚೇರಿ ಉದ್ಘಾಟನೆ ಮಾಡಲಾಗುವುದು. ಜನ ಸಾಮಾನ್ಯರು ತಮ್ಮ ಯಾವುದೇ ಸಮಸ್ಯೆಗಳನ್ನು ಇಲ್ಲಿಗೆ ತೆಗೆದುಕೊಂಡು ಬರಬಹುದು ಎಂದು ತಿಳಿಸಿದರು.

ಇದನ್ನೂ ಓದಿ: ಆ. 21ಕ್ಕೆ ಗಜಪಯಣ: ಅಭಿಮನ್ಯು ಸೇರಿ 14 ಆನೆಗಳು ಈ ಬಾರಿಯ ದಸರಾದಲ್ಲಿ ಭಾಗಿ - Mysuru Dasara 2024

ETV Bharat Logo

Copyright © 2024 Ushodaya Enterprises Pvt. Ltd., All Rights Reserved.