ETV Bharat / state

ಮುಡಾದ 300 ಕೋಟಿ ಆಸ್ತಿ EDಯಿಂದ ಮುಟ್ಟುಗೋಲು: ಕೇಂದ್ರದ ವಿರುದ್ಧ ಸುರ್ಜೇವಾಲಾ ಕಿಡಿ - SURJEWALA ON MUDA CASE

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ 300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿರುವುದನ್ನು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.

muda-300-crore-asset-seizure-surjewala-angry-against-center
ಮುಡಾ 300 ಕೋಟಿ ಆಸ್ತಿ ಮುಟ್ಟುಗೋಲು: ಕೇಂದ್ರದ ವಿರುದ್ಧ ಸುರ್ಜೇವಾಲಾ ಕಿಡಿ (ETV Bharat)
author img

By ETV Bharat Karnataka Team

Published : Jan 17, 2025, 9:48 PM IST

ಬೆಳಗಾವಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮುಡಾಗೆ ಸೇರಿದ 300 ಕೋಟಿ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕಿಡಿಕಾರಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ ಜೊತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಂಸತ್‌ನಲ್ಲಿ ಡಾ.ಬಾಬಾಸಾಹೇಬ್​ ಅಂಬೇಡ್ಕರ್ ಬಗ್ಗೆ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಹೋರಾಡುತ್ತಿದೆ. ದಲಿತರು, ಬಡವರು, ಶೋಷಿತರ ಮೇಲೆ ಕೇಂದ್ರದ ಬಿಜೆಪಿ ಸರ್ಕಾರ ದಾಳಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮ ಮಾಡುತ್ತಿದ್ದೇವೆ. ಇದಕ್ಕೆ ಹೆದರಿ ಭಾರತ ಸರ್ಕಾರ, ಮೋದಿ ಸರ್ಕಾರ ಷಡ್ಯಂತ್ರ ಮಾಡುತ್ತಿದೆ ಎಂದು ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದರು.

ಇಡಿ ಅಧಿಕಾರಿಗಳ ಕಾರ್ಯಾಚರಣೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಹೆದರಿ ಕೇಂದ್ರ ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ರಣದೀಪ್ ಸಿಂಗ್ ಸುರ್ಜೇವಾಲಾ ಆಕ್ರೋಶ ಹೊರಹಾಕಿದರು.

300 ಕೋಟಿ ಆಸ್ತಿ ಮುಟ್ಟುಗೋಲು ಇಡಿ ಟ್ವೀಟ್​: ಸಿಎಂ ಸೇರಿದಂತೆ ಇನ್ನಿತರರ ವಿರುದ್ಧ ಕೇಳಿ ಬಂದ ಆರೋಪಗಳಿಗೆ ಸಂಬಂಧಿಸಿದ ಮೂಡಾ ನಿವೇಶನ ಹಂಚಿಕೆ ಹಗರಣ ತನಿಖೆ ನಡೆಸುತ್ತಿರುವ ಇ.ಡಿ.ಅಧಿಕಾರಿಗಳು 300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಪ್ರಕರಣ ಸಂಬಂಧ ರಿಯಲ್ ಎಸ್ಟೇಟ್ ಏಜೆಂಟ್ ಉದ್ಯಮಿ ಸೇರಿದಂತೆ ವಿವಿಧ ವ್ಯಕ್ತಿಗಳ ಹೆಸರಿನಲ್ಲಿದ್ದ ಪ್ರಾಪರ್ಟಿ, ನಿವೇಶನ, ಜಮೀನು ಸೇರಿದಂತೆ ಇನ್ನಿತರ ಆಸ್ತಿ ಒಳಗೊಂಡಂತೆ 300 ಕೋಟಿ ಮೌಲ್ಯದ 142 ಸ್ಥಿರಾಸ್ತಿಯನ್ನ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಇ.ಡಿ ತಿಳಿಸಿದೆ.

ಇದನ್ನು ಓದಿ: ಮೂಡಾ ಪ್ರಕರಣ: 300 ಕೋಟಿ ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ED

ETV Bharat Logo

Copyright © 2025 Ushodaya Enterprises Pvt. Ltd., All Rights Reserved.