ETV Bharat / state

ಮುಡಾ ಪ್ರಕರಣ: ಮೈಸೂರು ಲೋಕಾಯುಕ್ತ ಪೊಲೀಸರ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ - CM SIDDARAMAIAH

ಮುಡಾ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮೈಸೂರಿನ ಲೋಕಾಯುಕ್ತ ಪೊಲೀಸರ ಕಚೇರಿಗೆ ಹಾಜರಾದರು.

CM Siddaramaiah arrived at the Lokayukta office in a private car
ಖಾಸಗಿ ಕಾರಿನಲ್ಲಿ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Nov 6, 2024, 10:44 AM IST

Updated : Nov 6, 2024, 12:27 PM IST

ಮೈಸೂರು: ಮುಡಾ ಪ್ರಕರಣದ ವಿಚಾರಣೆಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್​ ನೀಡಿದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಂದು ಮೈಸೂರಿನ ಲೋಕಾಯುಕ್ತ ಪೊಲೀಸರ ಕಚೇರಿಗೆ ಆಗಮಿಸಿದರು.

ಬೆಂಗಳೂರಿನಿಂದ ಮೈಸೂರಿಗೆ ರಸ್ತೆ ಮೂಲಕ ಚನ್ನಪಟ್ಟಣ ಮಾರ್ಗವಾಗಿ ಆಗಮಿಸಿದ ಸಿದ್ದರಾಮಯ್ಯ ಉಪಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಸರ್ಕಾರಿ ವಾಹನ ಬಿಟ್ಟು ಖಾಸಗಿ ಕಾರಿನಲ್ಲೇ ಬಂದರು. ಅತಿಥಿ ಗೃಹದಿಂದ ಒಂದೇ ಕಾರಿನಲ್ಲಿ ನೇರವಾಗಿ ಲೋಕಾಯುಕ್ತ ಕಚೇರಿಗೆ 10.9ಕ್ಕೆ ತಲುಪಿದರು.

ಸಿದ್ದರಾಮಯ್ಯ ಅವರನ್ನು ಮೈಸೂರು ಲೋಕಾಯುಕ್ತ ಎಸ್.ಪಿ.ಉದ್ದೇಶ್‌ ವಿಚಾರಣೆ ನಡೆಸಲಿದ್ದು, ವಿಚಾರಣೆಯ ವಿಡಿಯೋ ರೆಕಾರ್ಡ್ ಮಾಡುವ ಬಗ್ಗೆ ಮೂಲಗಳು ಖಚಿತಪಡಿಸಿವೆ. 12 ಗಂಟೆಯವರೆಗೆ ಲೋಕಾಯುಕ್ತ ವಿಚಾರಣೆಯಲ್ಲಿ ಭಾಗವಹಿಸುವ ಸಿದ್ದರಾಮಯ್ಯ, ಬಳಿಕ ಚನ್ನಪಟ್ಟಣ ಉಪಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ.

ಬಿಜೆಪಿ ಪ್ರತಿಭಟನೆ, ಹಲವರ ಬಂಧನ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ವಿಚಾರಣೆಗೆ ಆಗಮಿಸುವುದು ಬೇಡ, "ಗೋ ಬ್ಯಾಕ್‌ ಸಿಎಂ" ಎಂದು ನಗರದ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ಮಾಡಲು ಆಗಮಿಸಿದ್ದ ಬಿಜೆಪಿ ಸ್ಥಳೀಯ ಮುಖಂಡರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದರು.

ಮುಡಾ ಪ್ರಕರಣ: 50:50ರ ಅನುಪಾತದಲ್ಲಿ ತಮ್ಮ ಪತ್ನಿಯ ಹೆಸರಿನಲ್ಲಿ ಮುಡಾದಲ್ಲಿ 14 ನಿವೇಶನ ಪಡೆದ ಆರೋಪ ಎದುರಿಸುತ್ತಿರುವ ಸಿಎಂ, ಈ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದಾರೆ. ಈಗಾಗಲೇ ಪ್ರಕರಣದಲ್ಲಿ ಎರಡನೇ ಆರೋಪಿಯಾದ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಮ‌ೂರನೇ ಆರೋಪಿ ಇವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು‌ ಮಾಲೀಕ ದೇವರಾಜ್ ಅವರ ವಿಚಾರಣೆ ಮುಕ್ತಾಯವಾಗಿದೆ.

ಮುಖ್ಯಮಂತ್ರಿ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುತ್ತಿರುವುದು ಇದೇ ಮೊದಲ ಬಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದ್ದೇಶ್ ತನಿಖೆಗೆ ಸಂಬಂಧಿಸಿದ ಸಿದ್ಧತೆಗಳನ್ನು ಮೊದಲೇ ಪೂರ್ಣಗೊಳಿಸಿದ್ದರು.

ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಮುಡಾ ಬದಲಿ ನಿವೇಶನ ಪ್ರಕರಣವನ್ನು ಮೂರು ತಿಂಗಳೊಳಗೆ‌ ಮೈಸೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ವರದಿ ಸಲ್ಲಿಸಬೇಕಾಗಿದೆ. ಈ ಗಡುವಿನ ಕಾರಣ ಈಗಾಗಲೇ ಲೋಕಾಯುಕ್ತ ಪೊಲೀಸರು ಕೆಸರೆಯ ಸರ್ವೇ ನಂ.464ರ 3.16 ಎಕರೆ ಜಾಗವನ್ನು ಈಗಾಗಲೇ ತನಿಖೆಯ ಭಾಗವಾಗಿ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಅಳತೆ ಮಾಡಿಸಿದ್ದರು. ಇದರ ಜೊತೆಗೆ 14 ನಿವೇಶನ ಪಡೆದ ವಿಜಯನಗರದ ಮೂರು ಮತ್ತು ನಾಲ್ಕನೇ ಹಂತದಲ್ಲಿರುವ ನಿವೇಶನಗಳನ್ನು ದೂರುದಾರರ ಸಮ್ಮುಖದಲ್ಲಿ ತನಿಖೆಯ ಭಾಗವಾಗಿ ಪರಿಶೀಲನೆ ನಡೆಸಿದ್ದರು. ಹಾಗೂ ಪ್ರಕರಣದಲ್ಲಿ ಈಗಾಗಲೇ ‌ಮೂವರು ಆರೋಪಿಗಳ ವಿಚಾರಣೆ ನಡೆಸಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಅ.6ರಂದು ವಿಚಾರಣೆಗೆ ಹಾಜರಾಗುವಂತೆ ಸಿಎಂಗೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಸುಳ್ಳು ಕೇಸ್​​ನಲ್ಲಿ ಹೇಳಿಕೆ ಕೊಡುವ ಪರಿಸ್ಥಿತಿ ಬಂತಲ್ಲ- ಸಿಎಂ ಸಿದ್ದರಾಮಯ್ಯ: ಮಂಗಳವಾರ ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಹಿರೇ ಬೆಂಡಿಗೇರಿಯಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಪರ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ನಾಳೆ ನಾನು ಲೋಕಾಯುಕ್ತಕ್ಕೆ ಹೇಳಿಕೆ ಕೊಡಲು ಹೋಗುತ್ತಿದ್ದೇನೆ. ಸುಳ್ಳು ಕೇಸ್​​ನಲ್ಲಿ ಹೇಳಿಕೆ ಕೊಡುವ ಪರಿಸ್ಥಿತಿ ಬಂತಲ್ಲ ಅಂತ ಬೇಸರವಾಗುತ್ತದೆ. ರಾಜ್ಯಪಾಲರ ಮೇಲೆ ಒತ್ತಡ ತಂದು ನಮ್ಮ ಕುಟುಂಬಕ್ಕೆ ಕಿರುಕುಳ ಕೊಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಭದ್ರತೆ ಪರಿಶೀಲಿಸಿದ ನಗರ ಪೊಲೀಸ್ ಕಮಿಷನರ್: ಸಿಎಂ ಸಿದ್ದರಾಮಯ್ಯ ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಕಮಿಷನರ್ ಸಿಮಾ ಲಾಟ್ಕರ್ ಹಾಗೂ ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಾಹ್ನವಿ ನೇತೃತ್ವದಲ್ಲಿ ನಗರದ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿ ಇರುವ ಲೋಕಾಯುಕ್ತ ಕಚೇರಿ ಬಳಿ ಬಂದೋಬಸ್ತ್​ ಬಗ್ಗೆ ಮಂಗಳವಾರ ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ: ನಾಳೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತಿದ್ದೇನೆ: ಸಿಎಂ ಸಿದ್ದರಾಮಯ್ಯ

Last Updated : Nov 6, 2024, 12:27 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.