ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಮುಡಾ ಪ್ರಕರಣ: ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿದ್ದ ಸಿಎಂ ಅರ್ಜಿ ವಜಾ - LIVE Updates - Muda Case - MUDA CASE
Published : Sep 24, 2024, 12:01 PM IST
|Updated : Sep 24, 2024, 3:09 PM IST
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ತಮ್ಮ ಕುಟುಂಬಸ್ಥರಿಗೆ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ಅಂತಿಮ ಆದೇಶ ಹೊರಬಿದ್ದಿದೆ. ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಅರ್ಜಿ ವಜಾಗೊಳಿಸಿ ತೀರ್ಪು ಪ್ರಕಟಿಸಿದ್ದಾರೆ.
LIVE FEED
ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆ ಬಿಡುಗಡೆ
ಸಿಎಂ ನಿವಾಸಕ್ಕೆ ಡಿಕೆಶಿ ಆಗಮನ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿಎಂ ನಿವಾಸಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರದ ಎಜಿ ಶಶಿಕರಣ್ ಶೆಟ್ಟಿ, ಪ್ರೊ. ರವಿವರ್ಮ ಕುಮಾರ್ ಸೇರಿ ಕಾನೂನು ತಜ್ಞರು ಆಗಮಿಸಿದ್ದಾರೆ. ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಹೋಗುವ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿಎಂ ನಿವಾಸದಲ್ಲಿ ಸಮಾಲೋಚನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆಪ್ತ ಸಚಿವರು, ಕಾನೂನು ಸಲಹೆಗಾರರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚಿಸುತ್ತಿದ್ದಾರೆ. ಕಾವೇರಿ ನಿವಾಸದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಡಿ.ಸುಧಾಕರ್, ಎಂ.ಸಿ.ಸುಧಾಕರ್, ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದಾರೆ.
ಬಿ ವೈ ವಿಜಯೇಂದ್ರ ತುರ್ತು ಮಾಧ್ಯಮಗೋಷ್ಟಿ
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಂಡ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ತುರ್ತು ಮಾಧ್ಯಮಗೋಷ್ಟಿ ಕರೆದಿದ್ದಾರೆ.
ಸಿಎಂ ಅರ್ಜಿ ವಜಾ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ತಮ್ಮ ಕುಟುಂಬಸ್ಥರಿಗೆ ನಿಯಮ ಬಾಹಿರವಾಗಿ ನಿವೇಶನಗಳನ್ನು ಪಡೆದ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಆದೇಶದ ವಿಸ್ತೃತವಾದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
ವಿಚಾರಣೆ ವೇಳೆ ಮುಖ್ಯಮಂತ್ರಿಗಳ ಪರವಾಗಿ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಪ್ರೊ. ರವಿವರ್ಮಕುಮಾರ್ ಸುದೀರ್ಘ ವಾದ ಮಂಡಿಸಿದ್ದರು. ರಾಜ್ಯಪಾರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೂರುದಾರರ ಪರವಾಗಿ ಹಿರಿಯ ವಕೀಲರಾದ ಕೆ.ಜಿ. ರಾಘವನ್ ಮತ್ತಿತರ ವಕೀಲರು ವಾದ ಮಂಡಿಸಿದ್ದರು.
ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ
ತೀರ್ಪು ಪ್ರಕಟಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ಕಮಿಷನರೇಟ್ ವ್ಯಾಪ್ತಿಗಳಲ್ಲಿ ಹೆಚ್ಚಿನ ಭದ್ರತೆ ವಹಿಸುವಂತೆ ಎಸ್ಪಿ ಹಾಗೂ ಡಿಸಿಪಿಗಳಿಗೆ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಸೂಚಿಸಿದ್ದಾರೆ.