ETV Bharat / state

ನಾನು ಭಾವಿಸಿದಷ್ಟು ಧೈರ್ಯವಂತರಲ್ಲ, ನಿಮಗೂ ಭಯವಿದೆ, ಕರ್ಮ ಹಿಟ್ ಬ್ಯಾಕ್: ಹೆಚ್​ಡಿಕೆ ಟಾಂಗ್ - Muda Case - MUDA CASE

ಕರ್ಮ ಹಿಟ್ಸ್‌ ಬ್ಯಾಕ್ ಎಂದು ಸಿದ್ದರಾಮಯ್ಯನವರನ್ನು ಟೀಕಿಸಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಿಎಂಗೆ ಹೆಚ್​ಡಿಕೆ ಟಾಂಗ್
ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Sep 27, 2024, 9:58 AM IST

ಬೆಂಗಳೂರು: 'ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೆ ಸಮಾಧಿ ಕಟ್ಟಿ ಎಸಿಬಿ ರಚಿಸಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ಅದೇ ಲೋಕಾಯುಕ್ತವೇ ಗತಿ' ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

'ಸಿದ್ದರಾಮಯ್ಯನವರೇ ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇ ಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ' ಎಂದು ಎಕ್ಸ್‌ನಲ್ಲಿ ಬರೆದಿದ್ದಾರೆ.

'Karma Hit back ಎಂದರೆ ಇದೇ ಅಲ್ಲವೇ ಸಿದ್ದರಾಮಯ್ಯನವರೇ?. ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ' ಎಂದಿದ್ದಾರೆ.

'ಸಿದ್ದಾಪರಾದ' ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ!. ಅದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರಿ' ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ - CM Siddaramaiah

ಕರ್ನಾಟಕ ಬಿಜೆಪಿಯಲ್ಲಿ ಭ್ರಷ್ಟಾಚಾರ ಕಳಂಕವಿಲ್ಲದ ಒಬ್ಬ ನಾಯಕನ ತೋರಿಸಿ: ಮೋದಿಗೆ ಸಿದ್ದರಾಮಯ್ಯ ಸವಾಲು - CM Siddaramaiah

ETV Bharat Logo

Copyright © 2025 Ushodaya Enterprises Pvt. Ltd., All Rights Reserved.