ETV Bharat / state

ಮುಡಾ ಪ್ರಕರಣ; ಪಾರ್ವತಿ ಸಿದ್ದರಾಮಯ್ಯ, ಸಚಿವ ಬೈರತಿ ಸುರೇಶ್​ಗೆ ಇ.ಡಿ ನೋಟಿಸ್​​ - MUDA CASE

ಮುಡಾ ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಇ.ಡಿ ನೋಟಿಸ್ ಜಾರಿಮಾಡಿದೆ.

MUDA CASE
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ETV Bharat)
author img

By ETV Bharat Karnataka Team

Published : Jan 27, 2025, 2:29 PM IST

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಸಿದ್ದರಾಮಯ್ಯ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್​ ಅವರಿಗೆ ನೋಟಿಸ್​​ ಜಾರಿಗೊಳಿಸಿದ್ದಾರೆ. ಜನವರಿ 27 ಅಥವಾ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಜನವರಿ 9 ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಜನವರಿ 3ರಂದು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮೊದಲ ನೋಟಿಸ್ ನೀಡಿತ್ತು. ನೋಟಿಸ್​ಗೆ ಪ್ರತಿಯಾಗಿ ಉತ್ತರಿಸಿದ್ದ ಪಾರ್ವತಿ ಸಿದ್ದರಾಮಯ್ಯ, ದಾಖಲೆ ಸಂಗ್ರಹಿಸಲು ಎರಡು ವಾರ ಕಾಲಾವಕಾಶ ನೀಡುವಂತೆ ಹಾಗೂ ವಯಸ್ಸಾಗಿರುವುದರಿಂದ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದರು. ಈಗ ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ಸೂಚಿಸಲಾಗಿದ್ದು, ಬೆಳಗ್ಗೆ 11 ಗಂಟೆಗೆ ಶಾಂತಿನಗರದ ಕಚೇರಿಯಲ್ಲಿ ವಿಚಾರಣೆಗೆ ಖುದ್ದು ಹಾಜರಾಗಿ, ಪ್ರಕರಣ ಸಂಬಂಧ ಸಾಕ್ಷಿಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಆರೋಗ್ಯ ವಿಚಾರಣೆ - CM MEETS SHIVANNA

ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪಡೆದು ಭಾನುವಾರವಷ್ಟೇ ಬೆಂಗಳೂರಿಗೆ ಆಗಮಿಸಿರುವ ನಟ ಶಿವರಾಜ್ ಕುಮಾರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ವೇಳೆ ಸಚಿವ ಬೈರತಿ ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜಕೀಯ ಪಿತೂರಿ ಎಂದ ಡಿಕೆಶಿ: ರಾಜಕೀಯ ಪಿತೂರಿ ಮಾಡಿ ಸಿಎಂ ಪತ್ನಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಇ.ಡಿ (ಜಾರಿ ನಿರ್ದೇಶನಾಲಯ) ನೋಟಿಸ್ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆಯೇ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ. ಲೋಕಾಯುಕ್ತ ಸಂಸ್ಥೆ ಈಗಾಗಲೇ ತನಿಖೆ ಮಾಡುತ್ತಿದೆ. ಲೋಕಾಯುಕ್ತ ತನಿಖೆ ನಡೆಸುತ್ತಿರುವಾಗ ಬೇರೆ ಸಂಸ್ಥೆಗಳು ತನಿಖೆ ನಡೆಸಲು ಆಗುವುದಿಲ್ಲ ಎಂದು ನ್ಯಾಯಾಲಯಗಳು ಅನೇಕ ತೀರ್ಪು ನೀಡಿವೆ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದ ನಂತರ ಮಾತನಾಡುತ್ತೇನೆ ಎಂದರು.

ಮುಡಾ ಪ್ರಕರಣ ಸಿಬಿಐ ತನಿಖೆ ನೀಡಬೇಕು ಎಂಬ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಯಾವುದೇ ಸಂಸ್ಥೆಗಳಾಗಲಿ ಒಟ್ಟಿಗೆ ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ತನಿಖೆ ಮಾಡುವಂತಿಲ್ಲ. ಈ ಕುರಿತಾಗಿ ಬಂದಿರುವ ನ್ಯಾಯಾಲಯದ ತೀರ್ಪುಗಳನ್ನು ನನ್ನ ಪ್ರಕರಣದಲ್ಲಿ ನ್ಯಾಯಾಲಯದ ಮುಂದೆ ಪ್ರಸ್ತಾಪ ಮಾಡಿದ್ದೆ ಎಂದು ಡಿಕೆಶಿ ತಿಳಿಸಿದರು.

ಇದೇ ವೇಳೆ, ಸಿಎಂ ಹುದ್ದೆ ವಿಚಾರವಾಗಿ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿ, ಸರ್ಕಾರ ಸುಭದ್ರವಾಗಿದೆ. ನಾವೆಲ್ಲರೂ ಸಿಎಂ ಅವರ ಕೆಳಗೆ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಮುಡಾ ಪ್ರಕರಣ: ಹೈಕೋರ್ಟ್​​​ಗೆ ತನಿಖಾ ವರದಿ ಸಲ್ಲಿಸಿದ ಲೋಕಾಯುಕ್ತ ಅಧಿಕಾರಿಗಳು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.