ಬೆಂಗಳೂರು: ಮೂಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಮೂಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ - ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಬಿಜೆಪಿ ಸದಸ್ಯರು ಮೂಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್ ಅವರನ್ನು ಒತ್ತಾಯಿಸಿದ್ದರು. ಆದರೆ ಸ್ಪೀಕರ್ ನಿಲುವಳಿ ಸೂಚನೆಯನ್ನು ತಿರಸ್ಕರಿಸಿದ್ದರು. ಈ ಹಿನ್ನೆಲೆ ಪ್ರತಿಪಕ್ಷಗಳು ಸದನದ ಬಾವಿಗಿಳಿದು ರಾಜ್ಯ ಸರ್ಕಾರ ಹಾಗೂ ಸ್ಪೀಕರ್ ವಿರುದ್ಧ ಧರಣಿ ನಡೆಸಿದರು. ಬಳಿಕ ಸ್ಪೀಕರ್ ಸದನ ಕಲಾಪವನ್ನು ನಾಳೆಗೆ ಮುಂದೂಡಿದರು.
ಇತ್ತ ಚರ್ಚೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಸದನದಲ್ಲೇ ಅಹೋರಾತ್ರಿ ಧರಣಿ ನಡೆಸಲು ಆರಂಭಿಸಿದರು. ಈ ವೇಳೆ, ಬಿಜೆಪಿ ಸದಸ್ಯರು ಹನುಮಾನ್ ಚಾಲೀಸಾ ಮತ್ತು ಭಜನೆ ಪಠಿಸುವ ಮೂಲಕ ಗಮನ ಸೆಳೆದರು.
ಈ ಸಂದರ್ಭ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರತಿಭಟನಾ ನಿರತ ಸದಸ್ಯರಿಗೆ ಭೋಜನ ವ್ಯವಸ್ಥೆ ಬಗ್ಗೆ ವಿಚಾರಿಸಿದರು. ಈ ವೇಳೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮೂಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಣದಲ್ಲಿ ಊಟ ಮಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಓದಿ: ಮುಡಾ ಹಗರಣದ ಚರ್ಚೆಗೆ ಆಗ್ರಹ: ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿಗೆ ಬಿಜೆಪಿ, ಜೆಡಿಎಸ್ ನಿರ್ಧಾರ - Night Protest