ETV Bharat / state

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್,​ ಸಾರ್ವಜನಿಕ ಆಡಳಿತದ ಪರಿಶುದ್ಧತೆಗಾಗಿ ನೋಡಬೇಕು: ದೂರುದಾರರ ಪರ ವಕೀಲರ ವಾದ;  ಸೆ.9 ಕ್ಕೆ  ವಿಚಾರಣೆ ಮುಂದೂಡಿಕೆ - Siddaramaiah Prosecution - SIDDARAMAIAH PROSECUTION

ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರ ಪ್ರಾಸಿಕ್ಯೂಷನ್​ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯಿತು. ವಾದ - ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿಯನ್ನು ಸೆ.9ಕ್ಕೆ ಮುಂದೂಡಿದೆ.

ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ: ಹೈಕೋರ್ಟ್​ನಲ್ಲಿ ವಿಚಾರಣೆ ಆರಂಭ
ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ: ಹೈಕೋರ್ಟ್​ನಲ್ಲಿ ವಿಚಾರಣೆ ಆರಂಭ (ETV Bharat)
author img

By ETV Bharat Karnataka Team

Published : Sep 2, 2024, 3:22 PM IST

Updated : Sep 2, 2024, 7:52 PM IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಆದೇಶವನ್ನು ವಿರೋಧಾತ್ಮಕವಾಗಿ ನೋಡದೆ ಸಾರ್ವಜನಿಕ ಆಡಳಿತದಲ್ಲಿ ಪರಿಶುದ್ಧತೆಯ ಸಲುವಾಗಿ ನೋಡಬೇಕಾಗುತ್ತದೆ ಎಂದು ದೂರುದಾರರ ಪರ ವಕೀಲರು ಹೈಕೋರ್ಟ್​ಗೆ ತಿಳಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ತಮ್ಮನ್ನು ವಿಚಾರಣೆಗೆ ಒಳಪಡಿಸುವಂತೆ ರಾಜ್ಯಪಾಲರು ನೀಡಿದ್ದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಅವರಿದ್ದ ಪೀಠಕ್ಕೆ ವಕೀಲರು ವಿವರಿಸಿದರು.

ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಸಲ್ಲಿಸಿರುವ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪರವಾಗಿ ವಾದ ಮಂಡಿಸಿ ಹಿರಿಯ ವಕೀಲ ಕೆ.ಜಿ.ರಾಘವನ್, ಸಾರ್ವಜನಿಕ ಹಿತಾಸಕ್ತಿ ಅಡಗಿರುವುದರಿಂದ ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಉದ್ದೇಶ ಹೊಂದಲಾಗಿದೆ. ಮಾಧ್ಯಮಗಳಲ್ಲಿ ಮುಡಾ ಹಗರಣ ವರದಿಯಾದ ಬೆನ್ನಿಗೇ ರಾಜ್ಯ ಸರ್ಕಾರ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿದೆ. ಇದು ಸಾರ್ವಜನಿಕ ನಂಬಿಕೆ ಹಾಳಾಗಿರುವುದಕ್ಕೆ ಉತ್ತರವಾಗಿದೆ. ಉನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸಿರುವ ವ್ಯಕ್ತಿಯ ವಿರುದ್ಧ ತನಿಖೆ ಕೋರಲಾಗಿದೆ. ಕೊನೆಯಲ್ಲಿ ಸಿದ್ದರಾಮಯ್ಯ ಅವರು ಆರೋಪಮುಕ್ತವಾಗಬಹುದು. ಆದರೆ, ನ್ಯಾಯಾಲಯವು ಇಂಥ ವಿಚಾರಗಳಲ್ಲಿ ತನಿಖೆಗೆ ಅವಕಾಶ ನೀಡಬೇಕಾಗುತ್ತದೆ ಎಂದು ವಾದ ಮಂಡಿಸಿದರು.

ಮುಡಾದಲ್ಲಿ 2003-09ರ ನಡುವೆ 60:40 ಯೋಜನೆ ಜಾರಿಯಲ್ಲಿತ್ತು. ಆದರೆ, ಪಾರ್ವತಿ ಅವರಿಗೆ ನಿವೇಶನ ಹಂಚಲು 2015ರಲ್ಲಿ 50:50 ಯೋಜನೆಯನ್ನು ಮುಡಾ ಅಳವಡಿಸಿಕೊಂಡಿದೆ. ಯಾವ ನಿಬಂಧನೆಯಡಿ 14 ನಿವೇಶನಗಳನ್ನು ನೀಡಲಾಗಿದೆ? ಹಲವು ಸಂದರ್ಭದಲ್ಲಿ ವಾಸ್ತವಿಕ ಅಂಶಗಳನ್ನು ಮರೆಮಾಚುವುದು ದುರುದ್ದೇಶಕ್ಕೆ ಆಧಾರ ಒದಗಿಸಲಿದೆ. ಮುಡಾ ಆಕ್ಷೇಪಾರ್ಹವಾದ 3.16 ಎಕರೆ ಭೂಮಿಯನ್ನು ವಶಪಡಿಸಿಕೊಂಡಾಗ, ಆ ಜಮೀನಿನ ಮೌಲ್ಯ 3.24 ಲಕ್ಷ ರೂಪಾಯಿ ಆಗಿತ್ತು. ಹೀಗಿರುವಾಗ ಯಾವ ಮೌಲ್ಯ ಆಧರಿಸಿ 14 ನಿವೇಶನಗಳನ್ನು ನೀಡಲಾಗಿದೆ? ಮುಡಾ ಯಾವುದೇ ರೀತಿಯಲ್ಲಿಯೂ ವಿವೇಚನ ಬಳಸಿಲ್ಲ. ಸುಣ್ಣಕ್ಕೆ ಬೆಣ್ಣೆ ವಿನಿಮಯವೇ? ಈ ಪ್ರಕರಣದಲ್ಲಿ ಅದನ್ನೇ ಮಾಡಲಾಗಿದ್ದು, ಅದೇ ಆರೋಪವಾಗಿದೆ. ದುಬಾರಿ ಮೌಲ್ಯ ಹೊಂದಿರದ 3.16 ಎಕರೆ ಜಮೀನಿಗೆ ಪ್ರತಿಷ್ಠಿತ ಬಡಾವಣೆಯಲ್ಲಿ 14 ನಿವೇಶನ ಹಂಚಿಕೆ ಮಾಡಲಾಗಿದೆ. ಇದು ಸರಿಯೋ, ತಪ್ಪೋ ಅದರ ತನಿಖೆ ಆಗಬೇಕು ಎಂದು ಪೀಠಕ್ಕೆ ವಿವರಿಸಿದರು.

ಇದನ್ನೂ ಓದಿ: ಧಾರವಾಡ, ಕಲಬುರಗಿ ಪೀಠಗಳಲ್ಲಿಯೂ ಪಿಐಎಲ್ ಸಲ್ಲಿಸಲು ಅವಕಾಶ ನೀಡಿದ ಹೈಕೋರ್ಟ್ - PIL In High Court Bench

ಸಾರ್ವಜನಿಕ ಸೇವಕರ ನಡತೆಯು ಅತ್ಯಂತ ಕರಾರುವಕ್ಕಾಗಿರಬೇಕು. ಪ್ರಮಾದ ಆಗಿರುವುದರಲ್ಲಿ ಸಾರ್ವಜನಿಕ ಸೇವಕನ ಸಣ್ಣ ಪಾತ್ರವಿದ್ದರೂ ಭ್ರಷ್ಟಾಚಾರ ನಿರೋಧಕ ಕಾಯಿದೆ ಅನ್ವಯವಾಗುತ್ತದೆ ಎಂದು ಹೈಕೋರ್ಟ್​​ನ ಪೀಠ ತೀರ್ಪು ಹೇಳುತ್ತದೆ. ಮುಡಾ ನಿರ್ಣಯ ಅಥವಾ ನಿರ್ಧಾರದಲ್ಲಿ ಮುಖ್ಯಮಂತ್ರಿ ಪಾತ್ರವಿದೆಯೇ ಎಂಬುದನ್ನು ಪರಿಶೀಲಿಸಬೇಕಿದೆ. ಅಲ್ಲಿ ಮುಖ್ಯಮಂತ್ರಿಯ ಸಣ್ಣಮಟ್ಟದ ಪಾತ್ರ ಇದ್ದರೂ ಅದರ ತನಿಖೆಯಾಗಬೇಕು. ಇನ್ನು ಸೆಕ್ಷನ್‌ 17ಎ ಹಂತದಲ್ಲಿ ಸಹಜ ನ್ಯಾಯತತ್ವ ಅನ್ವಯಿಸುವುದಿಲ್ಲ ಎಂದರು.

ಕಾನೂನು ಬಾಹಿರವಾಗಿ ಲಾಭ ಪಡೆಯದಿದ್ದರೂ ಪ್ರಭಾವ ಬಳಸಿ ಲಾಭ ಗಳಿಸುವುದು ಭ್ರಷ್ಟಾಚಾರಕ್ಕೆ ಸಮಾನವಾದದ್ದು. ಸಾರ್ವಜನಿಕರಿಗೆ ಶುದ್ಧ ಆಡಳಿತದಲ್ಲಿ ನಂಬಿಕೆ ಇರುವಂತಿರಬೇಕು. ಈ ಹಗರಣ ಕೇವಲ ಇಬ್ಬರ ನಡುವಿನ ಪ್ರಕರಣವಲ್ಲ. ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ್ದಾಗಿದೆ. ಈ ಪ್ರಕರಣದಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್ 17ಎ ಅಡಿ ಪ್ರಾಸಿಕ್ಯೂಷನ್‌ಗೆ ಕೋರುವ ಅಗತ್ಯವಿಲ್ಲ. ಆದರೂ ಅನುಮತಿ ಕೋರಲಾಗಿದೆ. ಅರ್ಜಿದಾರರ ವಿರುದ್ಧ ಯಾವುದೇ ಆರೋಪ ಇಲ್ಲವಾದಲ್ಲಿ ಈ ಪ್ರಕ್ರಿಯೆ ಅಗತ್ಯವೇ ಇರುವುದಿಲ್ಲ ಎಂದು ತಿಳಿಸಿದರು.

ಅಲ್ಲದೇ, ಪ್ರಕರಣ ಸಂಬಂಧ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದೆ. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರಾದ ಮುಖ್ಯಮಂತ್ರಿ ಆರೋಪ ಮುಕ್ತರಾಗಬಹುದಾಗಿದೆ. 1998 - 99ರಲ್ಲಿ ಅರ್ಜಿದಾರರು ಉಪ ಮುಖ್ಯಮಂತ್ರಿಯಾಗಿದ್ದರು. 2013ರಿಂದ 18ರವರೆಗೆ ಸಿಎಂ ಆಗಿದ್ದರು, ಇದೀಗ 2024 ರಿಂದ ಮತ್ತೆ ಸಿಎಂ ಆಗಿದ್ದಾರೆ. ಮೂಡಾ ಹಗರಣದ ಪ್ರತಿಯೊಂದು ಹಂತದಲ್ಲಿ ಮುಖ್ಯಮಂತ್ರಿಗಳು ಅಧಿಕಾರದಲ್ಲಿದ್ದರು ಎಂದು ಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ನ್ಯಾಯಾಲಯವು ಮಧ್ಯಂತರ ಆದೇಶ ವಿಸ್ತರಿಸಿ, ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಅವರ ಕೋರಿಕೆಯಂತೆ ವಿಚಾರಣೆಯನ್ನು ಸೆಪ್ಟೆಂಬರ್‌ 9ಕ್ಕೆ ಮುಂದೂಡಿತು.

ಇದನ್ನೂ ಓದಿ: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರಿಂದ ವಿವೇಚನೆ ಬಳಸಿ ಅನುಮತಿ; ತುಷಾರ ಮೆಹ್ತಾ ವಾದ - CM Siddaramaiah Petition Hearing

Last Updated : Sep 2, 2024, 7:52 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.