ETV Bharat / state

ಕೇಂದ್ರ ಸರ್ಕಾರಿ ಅಧಿಕಾರಿಗಳು ಮೋದಿಯ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ: ಮುಖ್ಯಮಂತ್ರಿ ಚಂದ್ರು - INDIA BLOCS RALLY - INDIA BLOCS RALLY

ಆಪ್​ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಇಡಿ ಬಂಧಿಸಿರುವುದಕ್ಕೆ ನರೇಂದ್ರ ಮೋದಿ ಅವರ ವಿರುದ್ಧ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ ನಡೆಸಿದರು.

ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು
ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು
author img

By ETV Bharat Karnataka Team

Published : Mar 31, 2024, 6:22 PM IST

ಬೆಂಗಳೂರು : ''ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ ಇಲಾಖೆ ಮತ್ತಿತರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ'' ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆರೋಪಿಸಿದರು.

ಆಮ್‌ ಆದ್ಮಿ ಪಾರ್ಟಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ 'ಇಂಡಿಯಾ' ಒಕ್ಕೂಟ ಭಾನುವಾರ ಬೃಹತ್‌ ಶಾಂತಿಯುತ ಪ್ರತಿಭಟನೆಯನ್ನು ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ''ಕಳೆದ 10 ವರ್ಷಗಳಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ವಿವಿಧತೆಯಲ್ಲಿ ಏಕತೆಯಿಂದಿರುವ ಭಾರತದ ನಾಶವಾಗಿದೆ. ಜನತಂತ್ರ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಸಂವಿಧಾನ ಬದಲಿಸುವ ಪ್ರಯತ್ನವಾಗಿದೆ. ಪಾರದರ್ಶಕತೆ ಇಲ್ಲದ ಆಡಳಿತ ನೆಡೆಯುತ್ತಿದೆ. ಕೋಮುಗಲಭೆಗಳಾಗಿವೆ'' ಎಂದು ದೂರಿದರು.

''ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳನ್ನು ರಾಜ್ಯಪಾಲರ ಮೂಲಕ ಕಡಿವಾಣ ಹಾಕಲಾಗುತ್ತಿದೆ. ದೆಹಲಿಯಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ಮೂಲಕ ರಾಜ್ಯದ ಆಡಳಿತವನ್ನು ಹತೋಟಿಯಲ್ಲಿಡಲು ಯತ್ನಿಸಲಾಗುತ್ತಿದೆ. ಜೈಲಿನಲ್ಲಿರಬೇಕಾದ ಕಡುಭ್ರಷ್ಟರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಮಂತ್ರಿ, ಮುಖ್ಯಮಂತ್ರಿಗಳನ್ನಾಗಿ ಮಾಡಲಾಗಿದೆ. ರಾಜಕೀಯ ಎದುರಾಳಿಗಳನ್ನು ಇಡಿ, ಸಿಬಿಐ, ಆದಾಯ ತೆರಿಗೆ ಇಲಾಖೆ ಮತ್ತಿತರ ತನಿಖಾ ಸಂಸ್ಥೆಗಳ ಮೂಲಕ ಸುಳ್ಳು ಪ್ರಕರಣಗಳಡಿ ಆರೋಪಿಗಳಾಗಿಸಿ ಕಿರುಕುಳ ಕೊಡಲಾಗುತ್ತಿದೆ. ಆದ್ದರಿಂದ ಈ ದೇಶ ಉಳಿಯಬೇಕೆಂದರೆ ಸರ್ವಾಧಿಕಾರಿಯ ಆಡಳಿತಕ್ಕೆ ಅಂತ್ಯಹಾಡಲೇಬೇಕಿದೆ'' ಎಂದು ಮುಖ್ಯಮಂತ್ರಿ ಚಂದ್ರು ಕರೆ ನೀಡಿದರು.

ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಶಾಂತಿಯುತ ಪ್ರತಿಭಟನೆ

ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ : ಈ ಸಂದರ್ಭದಲ್ಲಿ 'ಇಂಡಿಯಾ' ಒಕ್ಕೂಟದ ಭಾಗವಾಗಿ ಕಾಂಗ್ರೆಸ್‌ ಪ್ರತಿನಿಧಿಯಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್‌ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಿರುವುದನ್ನು ನೋಡಿ ಸ್ಫೂರ್ತಿಗೊಂಡು ನನ್ನ ಕ್ಷೇತ್ರದ 22 ಶಾಲೆಗಳನ್ನು ಅಭಿವೃದ್ಧಿಪಡಿಸಿದ್ದೇನೆ. ಮೊದಲು 4,000 ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳು ಈಗ 5,500 ಆಗಿದ್ದಾರೆ ಎಂದು ಹೇಳಿದರು.

''ಬಿಜೆಪಿಗರ ಪೂರ್ವಜರು ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್‌ನವರಾಗಿದ್ದಾರೆ. ಅವರು ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರಲ್ಲ. ಮನುವಾದಿ, ಸರ್ವಾಧಿಕಾರಿ ಧೋರಣೆಯಲ್ಲಿ ನಂಬಿಕೆ ಇಟ್ಟವರಾಗಿದ್ದಾರೆ. ಸಂವಿಧಾನ ವಿರೋಧಿಗಳಾಗಿದ್ದಾರೆ. ಭಾರತದಲ್ಲಿ ಈಗ ಸರ್ವಾಧಿಕಾರ ಚಾಲ್ತಿಯಲ್ಲಿದೆ. ಸಂವಿಧಾನ ಬದಲಾದರೆ ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ದೇಶ ಹೇಗಿತ್ತೋ ಆ ಪರಿಸ್ಥಿತಿಗೆ ಹೋಗುತ್ತದೆ'' ಎಂದು ಕಳವಳ ರಾಮಲಿಂಗರೆಡ್ಡಿ ವ್ಯಕ್ತಪಡಿಸಿದರು.

''2ಜಿ ಹಗರಣದಲ್ಲಿ, ಕಲ್ಲಿದ್ದಲು ಹಗರಣದಲ್ಲಿ ಅಕ್ರಮ ನಡೆದಿರುವುದನ್ನು ಸಾಬೀತು ಪಡಿಸಲಾಗಲಿಲ್ಲ. ಆದರೂ ಅವುಗಳು ಭಾರತದ ಅತಿದೊಡ್ಡ ಹಗರಣಗಳು ಎಂದು ಸುಳ್ಳನ್ನು ಬಿತ್ತಿದರು. ಅಬಕಾರಿ ನೀತಿ ಹಗರಣದಲ್ಲಿಯೂ ಎಎಪಿ ಪಾತ್ರದ ಬಗ್ಗೆ ನಿರಂತರವಾಗಿ ಸುಳ್ಳು ಹಬ್ಬಿಸಲಾಗುತ್ತಿದೆ. ಆದರೆ ಎರಡು ವರ್ಷಗಳೇ ಕಳೆದರೂ ಒಂದು ರೂಪಾಯಿ ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿಲ್ಲ. ಚುನಾವಣೆ ಬಾಂಡ್‌ ಮೂಲಕ ಸಾವಿರಾರು ಕೋಟಿ ಅಕ್ರಮ ಎಸಗಿರುವುದು ಕಣ್ಮುಂದೆ ಇದ್ದರೂ ಬಿಜೆಪಿ ವಿರುದ್ಧ ತನಿಖಾ ಸಂಸ್ಥೆಗಳು ಕ್ರಮ ಕೈಗೊಳ್ಳುತ್ತಿಲ್ಲ. ಮುಂದೆ ಒಳ್ಳೆಯ ದಿನಗಳು ಬರಲಿವೆ. ಕೇಜ್ರಿವಾಲ್‌ ಆರೋಪ ಮುಕ್ತರಾಗಲಿದ್ದಾರೆ. ಬಿಜೆಪಿಯ ಎಲ್ಲ ಭ್ರಷ್ಟರು ಜೈಲು ಸೇರಲಿದ್ದಾರೆ'' ಎಂದು ರಾಮಲಿಂಗರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐಎಂ ಮುಖಂಡ ಜಿ.ಎನ್‌. ನಾಗರಾಜ್‌ ಮಾತನಾಡಿ, ''ಭಾರತ ದೇಶದಲ್ಲಿ ಅಧಿಕಾರದಲ್ಲಿರುವುದು ನರೇಂದ್ರ ಮೋದಿ. ಆದರೆ ಮೋದಿ ಹಿಂದಿರುವ ಆರ್‌ಎಸ್‌ಎಸ್‌ ಈ ದೇಶವನ್ನು ನಿಯಂತ್ರಿಸುತ್ತಿದೆ. ಮನುವಾದಿ, ಕೋಮು ದ್ವೇಷದ ಚಿಂತನೆಗಳನ್ನು ಹೊಂದಿರುವ, ಸರ್ವಾಧಿಕಾರಿ ಧೋರಣೆಯ ಆರ್‌ಎಸ್‌ಎಸ್‌ ಕಳೆದ ನೂರು ವರ್ಷಗಳಿಂದ ವ್ಯವಸ್ಥಿತವಾಗಿ ಭಾರತವನ್ನು ತನ್ನ ಕೈವಶ ಮಾಡಿಕೊಳ್ಳುತ್ತ ಬಂದಿದೆ. ಇದೀಗ ಆರ್‌ಎಸ್‌ಎಸ್‌ ಉಚ್ಛ್ರಾಯಸ್ಥಿತಿಯಲ್ಲಿರುವುದು ಆತಂಕಕಾರಿ ವಿಚಾರವಾಗಿದೆ. ಚುನಾವಣೆ ಸಂದರ್ಭದಲ್ಲಿ ಕೇಜ್ರಿವಾಲ್‌ ಬಂಧನ, ಕಾಂಗ್ರೆಸ್‌ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ'' ಎಂದರು.

ಎಸ್‌ಡಿಪಿಐ ಮುಖ್ಯಸ್ಥ ಅಬ್ದುಲ್‌ ಮಜಿದ್‌, ಸಾಮಾಜಿಕ ಹೋರಾಟಗಾರ ನೂರ್‌ ಶ್ರೀಧರ್‌, ಸಲೀಲ್‌ ಶೆಟ್ಟಿ, ಎಎಪಿ ರಾಜ್ಯ ಉಪಾಧ್ಯಕ್ಷ ಮೋಹನ್‌ ದಾಸರಿ ಸೇರಿದಂತೆ ಅನೇಕ ಇಂಡಿಯಾ ಒಕ್ಕೂಟದ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಕಾಂಗ್ರೆಸ್ ಕೋಟ್ಯಂತರ ಹಣ ಲೂಟಿ ಮಾಡಿದೆ, ಹೀಗಾಗಿ ಐಟಿ ನೋಟಿಸ್ ಕೊಟ್ಟಿದೆ: ಪ್ರಹ್ಲಾದ್​ ಜೋಶಿ - IT NOTICE

ETV Bharat Logo

Copyright © 2024 Ushodaya Enterprises Pvt. Ltd., All Rights Reserved.