ETV Bharat / state

ಹೈಕೋರ್ಟ್‌ ಕಚೇರಿಗಳಿಗೆ ಹೆಚ್ಚುವರಿ ಸ್ಥಳಾವಕಾಶ: 10 ಮಹಡಿಗಳ ಕಟ್ಟಡ ನಿರ್ಮಾಣ ಪ್ರಸ್ತಾವ ಅಂತಿಮ - ಹೈಕೋರ್ಟ್

ಹೈಕೋರ್ಟ್​ ಕಚೇರಿಗೆ ಹೆಚ್ಚುವರಿ ಕಟ್ಟಡ ಸ್ಥಳಾವಕಾಶ ಒದಗಿಸಲು ರಾಜ್ಯ ಚುನಾವಣಾ ಆಯೋಗದ ಹಳೆಯ ಕಟ್ಟಡವಿರುವಲ್ಲಿ 10 ಮಹಡಿಯ ಬೃಹತ್​ ಕಟ್ಟಡ ನಿರ್ಮಾಣ ಕುರಿತ ಪ್ರಸ್ತಾವ ಅಂತಿಮವಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ ತಿಳಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By ETV Bharat Karnataka Team

Published : Feb 6, 2024, 10:13 PM IST

ಬೆಂಗಳೂರು: ಹೈಕೋರ್ಟ್​ನ ಕಚೇರಿಗಳಿಗೆ ಹೆಚ್ಚುವರಿ ಕಟ್ಟಡ ಸ್ಥಳಾವಕಾಶ ಒದಗಿಸುವ ಸಲುವಾಗಿ ರಾಜ್ಯ ಚುನಾವಣಾ ಆಯೋಗದ ಹಳೆಯ ಕಚೇರಿಯಿರುವ ಸ್ಥಳದಲ್ಲಿ, ತಳ ಮಹಡಿ ಸೇರಿದಂತೆ 10 ಮಹಡಿಗಳ ಕಟ್ಟಡ ನಿರ್ಮಾಣ ಕುರಿತ ಪ್ರಸ್ತಾವ ಅಂತಿಮವಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಹೈಕೋರ್ಟ್​ನ ನೆಲಮಹಡಿಯ ಕಚೇರಿಗಳನ್ನು ಸ್ಥಳಾಂತರಿಸುವಂತೆ ಕೋರಿ ತುಮಕೂರು ಮೂಲದ ವಕೀಲ ರಮೇಶ್​ ನಾಯಕ್​ ಮತ್ತು ವಕೀಲರಾದ ಶರಣ್​ ದೇಸಾಯಿ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್​ ಕುಮಾರ್​ ಮತ್ತು ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್​ ಜನರಲ್​ ಪ್ರತಿಮಾ ಹೊನ್ನಾಪುರ, ಹೈಕೋರ್ಟ್​ನ ಕಚೇರಿಗಳಿಗೆ ಹೊಸದಾಗಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರಸ್ತಾವಗಳನ್ನು ಸಲ್ಲಿಸಲಾಗಿತ್ತು. ಇದರಲ್ಲಿ ನಾಲ್ಕನೇ ಪ್ರಸ್ತಾವ (ತಳ ಮಹಡಿ ಸೇರಿದಂತೆ 10 ಮಹಡಿಗಳ ಕಟ್ಟಡ) ನಿರ್ಮಾಣ ಪ್ರಸ್ತಾವ ಅಂತಿಮವಾಗಿದೆ. ಈ ಸಂಬಂಧ ಹೈಕೋರ್ಟ್‌ ಕಟ್ಟಡ ಸಮಿತಿಯೊಂದಿಗೆ ಮುಂದಿನ ವಾರ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿ ಇತ್ಯರ್ಥಪಡಿಸಿತು.

ಇದಕ್ಕೂ ಮುನ್ನ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಹೈಕೋರ್ಟ್​ಗೆ ಕಟ್ಟಡ ಒದಗಿಸುವುದು ಸರ್ಕಾರದ ಕರ್ತವ್ಯ. ಈ ವಿಚಾರದಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ. ಅಲ್ಲದೆ, ಅರ್ಜಿದಾರರು ಯಾವುದೇ ನಿರ್ದೇಶನಗಳನ್ನು ಜಾರಿ ಮಾಡುವ ಸಂಸ್ಥೆಯಲ್ಲ ಎಂದು ಪೀಠ ತಿಳಿಸಿತು. ಅಲ್ಲದೆ, ಹೈಕೋರ್ಟ್​ಗೆ ಕಟ್ಟಡ ಒದಗಿಸುವುದು ಸರ್ಕಾರದ ಕೆಲಸವಾಗಿದೆ. ಸರ್ಕಾರ ತನ್ನ ಕೆಲಸವನ್ನು ತಾನು ಮಾಡುತ್ತಿದೆ. ಹೀಗಿರುವ ಸಂದರ್ಭದಲ್ಲಿ ಅರ್ಜಿಯನ್ನು ಮುಂದುವರೆಸುವ ಅಗತ್ಯವಿಲ್ಲ ಎಂದು ತಿಳಿಸಿ ಇತ್ಯರ್ಥಪಡಿಸಿ ಆದೇಶಿಸಿತು.

ಇದನ್ನೂ ಓದಿ: 2023-24ನೇ ಸಾಲಿನ ಗಂಗಾ ಗಲ್ಯಾಣ ಯೋಜನೆಗೆ ಕರೆದಿದ್ದ ಟೆಂಡರ್ ರದ್ದುಪಡಿಸಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.