ETV Bharat / state

'ಮುನಿರತ್ನ ಇಬ್ಬರು ಮಾಜಿ ಸಿಎಂಗಳನ್ನು ಹನಿಟ್ರ್ಯಾಪ್ ಮಾಡಿ, ಬೆದರಿಸಿ ಸಚಿವ ಸ್ಥಾನ ಪಡೆದರು': ಸಂತ್ರಸ್ತ ಮಹಿಳೆಯ ಗಂಭೀರ ಆರೋಪ - ALLEGATION ON MUNIRATNA

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ವಿರುದ್ಧ ಸಂತ್ರಸ್ತ ಮಹಿಳೆ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಶಾಸಕ ಮುನಿರತ್ನ
ಶಾಸಕ ಮುನಿರತ್ನ (ETV Bharat)
author img

By ETV Bharat Karnataka Team

Published : Oct 9, 2024, 7:57 PM IST

ಬೆಂಗಳೂರು: "ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿದ್ದಾರೆ" ಎನ್ನುವ ಮೂಲಕ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಸಂತ್ರಸ್ತ ಮಹಿಳೆ ಮತ್ತಷ್ಟು ಗಂಭೀರ ಸ್ವರೂಪದ ಮಾಹಿತಿ ನೀಡಿದ್ದಾರೆ. "ಸರ್ಕಾರ ನನಗೆ ಸೂಕ್ತ ಭದ್ರತೆ ಒದಗಿಸಿದರೆ ನಾನು ಆ ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನೂ ಹಂಚಿಕೊಳ್ಳುವುದಾಗಿ" ಅವರು ತಿಳಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಮುನಿರತ್ನ ಅವರು ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್‌ ಮಾಡಿ, ಟಾರ್ಚರ್ ನೀಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಮುನಿರತ್ನ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ಅತ್ಯಾಧುನಿಕ ಕ್ಯಾಮರಾಗಳಿವೆ" ಎಂದು ಹೇಳಿದರು.

"ನಮ್ಮಂಥವರ ಅಸಹಾಯಕತೆಯ ಲಾಭ ಪಡೆದು ಮಾಜಿ ಸಿಎಂ, ಸಚಿವರು, ಶಾಸಕರು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ನನ್ನ ಹಾಗೂ ಮುನಿರತ್ನ ಅವರ ಬ್ರೈನ್ ಮ್ಯಾಪಿಂಗ್ ಮಾಡಿಸಲಿ" ಎಂದು ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹಾಗೂ ಆರ್.ಅಶೋಕ್ ಅವರಿಗೆ ಸಂತ್ರಸ್ತೆ ಸವಾಲು ಹಾಕಿದರು.

"ಹನಿಟ್ರ್ಯಾಪ್ ಮಾಡುವುದಕ್ಕೆ ಮುನಿರತ್ನ ಬೇರೆ ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಯಾವುದೇ ಸಿನಿಮಾ ನಟಿಯರಿಲ್ಲ. ಹನಿಟ್ರ್ಯಾಪ್‌ಗೆ ಬಳಸಿಕೊಳ್ಳಲಾದ ಸುಮಾರು ಐದಾರು ಸಂತ್ರಸ್ತ ಮಹಿಳೆಯರು ಹೆದರಿಕೊಂಡು ಸುಮ್ಮನಾಗಿದ್ದಾರೆ. ಅವರೂ ಕೂಡ ಬಂದು ದೂರು ನೀಡಿದರೆ ಸತ್ಯ ಹೊರಬರಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ 10 ನಿಮಿಷ ಅಪಾಯಿಂಟ್‌ಮೆಂಟ್ ಬೇಕಿದೆ, ನಿಮ್ಮೊಂದಿಗೆ ಮಾತಾಡಬೇಕು" ಎಂದು ಮನವಿ‌ ಮಾಡಿದ್ದಾರೆ ಎಂದು ಸಂತ್ರಸ್ತೆ ತಿಳಿಸಿದರು.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡಗೆ ಇಂದೂ ಸಿಗಲಿಲ್ಲ ಜಾಮೀನು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.