ETV Bharat / state

ಕೊಲೆ ಆರೋಪಿಗಳಿಂದಲೇ ಚಂದ್ರಶೇಖರ ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ: ಪ್ರಕರಣ ದಾಖಲು - threatened by murder accused - THREATENED BY MURDER ACCUSED

ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣದ ಆರೋಪಿಗಳಿಂದ ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆ ಆರೋಪಿಗಳ ವಿರುದ್ಧ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Etv Bharat
Etv Bharat (Etv Bharat)
author img

By ETV Bharat Karnataka Team

Published : Sep 10, 2024, 10:23 PM IST

ಪೊಲೀಸ್ ಕಮಿಷನರ್​ ಎನ್.​ ಶಶಿಕುಮಾರ್ (ETV Bharat)

ಹುಬ್ಬಳ್ಳಿ: ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳು, ನ್ಯಾಯಾಂಗ ಬಂಧನದಲ್ಲಿ ಇದ್ದಾಗಲೇ ಗುರೂಜಿ ಅವರ ಸಂಬಂಧಿಕರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಸಂಬಂಧ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ನಗರದಲ್ಲಿ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮಿಷನರ್​ ಎನ್​ ಶಶಿಕುಮಾರ್ ಮಾತನಾಡಿ, "ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಚಂದ್ರಶೇಖರ ಗುರೂಜಿ ಅವರ ಸಂಬಂಧಿಕರಿಗೆ ಕೊಲೆ ಬೆದರಿಕೆ ಹಾಕಿರುವವರ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ" ಎಂದರು.

"ಗುರೂಜಿ ಕೊಲೆ ಪ್ರಕರಣದ ಆರೋಪಿಗಳಾದ ಮಹಾಂತೇಶ ಶಿರೂರು ಮತ್ತು ಮಂಜುನಾಥ ಮರೇವಾಡ ವಿರುದ್ಧ ದೂರು ದಾಖಲಾಗಿದ್ದು, ಗುರೂಜಿ ಸಂಬಂಧಿಕರಾದ ಉದ್ಯಮಿ ಸಂಜಯ ಅಂಗಡಿ ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ. ಅಗತ್ಯ ಇದ್ದರೆ ನ್ಯಾಯಾಂಗ ಬಂಧನದಲ್ಲಿರುವ ಅವರನ್ನು ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗುವುದು" ಎಂದು ತಿಳಿಸಿದರು.

ಇದನ್ನೂ ಓದಿ: ವಾಣಿಜ್ಯ ನಗರಿಗೆ ಮೆತ್ತಿದ್ದ ಗಾಂಜಾ ಘಾಟು: ಡ್ರಗ್ಸ್, ಗಾಂಜಾ ಮಾಫಿಯಾ ಬಗ್ಗೆ ಕಮಿಷನರ್ ಶಶಿಕುಮಾರ್ ಸ್ಪಷ್ಟನೆ ಹೀಗಿದೆ - Drug Sales

ETV Bharat Logo

Copyright © 2025 Ushodaya Enterprises Pvt. Ltd., All Rights Reserved.