ETV Bharat / state

ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್​ನಲ್ಲಿ ಯುವತಿಯ ಭೀಕರ ಕೊಲೆ; ಯುವಕನ ಬಂಧನ - Corporator Daughter Murder

author img

By ETV Bharat Karnataka Team

Published : Apr 18, 2024, 6:30 PM IST

Updated : Apr 18, 2024, 10:39 PM IST

ಹುಬ್ಬಳ್ಳಿಯ ಕಾರ್ಪೊರೇಟರ್​ ಮಗಳನ್ನು ಯುವಕನೊಬ್ಬ ಭೀಕರವಾಗಿ ಕೊಲೆಗೈದಿರುವ ಘಟನೆ ನಡೆದಿದೆ.

ಕಾರ್ಪೋರೆಟರ್ ಪುತ್ರಿಯ ಭೀಕರ ಕೊಲೆ
ಕಾರ್ಪೋರೆಟರ್ ಪುತ್ರಿಯ ಭೀಕರ ಕೊಲೆ

ಯುವತಿಯ ಭೀಕರ ಕೊಲೆ

ಹುಬ್ಬಳ್ಳಿ: ನಗರದ ಪಾಲಿಕೆ ಸದಸ್ಯರೊಬ್ಬರ ಪುತ್ರಿಯನ್ನು ಯುವಕನೊಬ್ಬ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈದಿರುವ ಘಟನೆ ನಗರದ ಬಿವಿಬಿ ಕಾಲೇಜು ಕ್ಯಾಂಪಸ್​ನಲ್ಲಿ ಇಂದು ಸಂಜೆ ನಡೆದಿದೆ. ನೇಹಾ ಹಿರೇಮಠ (24) ಕೊಲೆಗೀಡಾದ ಯುವತಿ. ಮೃತ ನೇಹಾ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಮಗಳು. ನಗರದ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಪ್ರಥಮ‌ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇಂದು ಪರೀಕ್ಷೆ ಇತ್ತು. ಕಾಲೇಜಿಗೆ ತೆರಳಿದ್ದ ವೇಳೆ ಯುವಕ ಏಕಾಏಕಿ ದಾಳಿ ಮಾಡಿ ಕೊಲೆ ಮಾಡಿದ್ದಾನೆ.

ದಾಳಿಯಿಂದ ನೇಹಾ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಕೂಡಲೇ ಸ್ಥಳೀಯ ಸಹಪಾಠಿಗಳು ಹಾಗೂ ಕಾಲೇಜಿನ ಸಿಬ್ಬಂದಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೇ ನೇಹಾ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಿಮ್ಸ್ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ವಿದ್ಯಾನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ವಿಷಯ ತಿಳಿದು ಶಾಸಕ ಪ್ರಸಾದ್ ಅಬ್ಬಯ್ಯ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದ್ದಾರೆ.

ಆರೋಪಿ ಬಂಧನ: ಪ್ರಕರಣ ಸಂಬಂಧ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವನನ್ನು ಬಂಧಿಸಲಾಗಿದೆ. ಹುಬ್ಬಳ್ಳಿಯ ವಿದ್ಯಾನಗರದ ಪೊಲೀಸರು ಆರೋಪಿ ಫಯಾಜ್​ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಫಯಾಜ್​ ಸವದತ್ತಿ ಮೂಲದವನೆಂದು ತಿಳಿದು ಬಂದಿದ್ದು, ಅದೇ ಕಾಲೇಜಿನ ವಿದ್ಯಾರ್ಥಿಯಾಗಿದ್ದಾನೆ.

ಹಲವು ಬಾರಿ ಇರಿದ ಯುವಕ; ವಿದ್ಯಾರ್ಥಿನಿ ನೇಹಾ ಕ್ಯಾಂಪಸ್​ನಲ್ಲಿದ್ದ ವೇಳೆ ಫಯಾಜ್​ ಆಕೆ ಮೇಲೆ ದಿಢೀರ್​ ಚಾಕುವಿನಿಂದ ದಾಳಿ ಮಾಡಿ ಹಲವು ಬಾರಿ ಇರಿದಿದ್ದಾನೆ. ಇದರಿಂದ ನೇಹಾ ಸ್ಥಳದಲ್ಲೇ ಕುಸಿದುಬಿದ್ದಳು. ಕ್ಯಾಂಪಸ್​​ನಲ್ಲಿದ್ದವರು ವಿದ್ಯಾರ್ಥಿನಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವಾಗಲೇ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಯುವಕನ ಈ ಕೃತ್ಯ ಕಾಲೇಜ್​ ಕ್ಯಾಂಪಸ್​ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೊಲೆ ಖಂಡಿಸಿ ಕಾಲೇಜು ಎದುರು ಎಬಿವಿಪಿ ಪ್ರತಿಭಟನೆ ನಡೆಸಿತು. ಹು-ಧಾ ಮುಖ್ಯ ರಸ್ತೆ ಬಂದ್ ಮಾಡಿ, ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು.

ಇದನ್ನೂ ಓದಿ: ಕೊಪ್ಪಳ: ಲಿವಿಂಗ್‌ ಟುಗೆದರ್‌ನಲ್ಲಿದ್ದ ವ್ಯಕ್ತಿ ಕೊಂದ ಮಹಿಳೆ, ಪತಿಯನ್ನೇ ಕೊಂದ ಪತ್ನಿ ಸೆರೆ - Koppal Murder Case

Last Updated : Apr 18, 2024, 10:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.