ETV Bharat / state

ಮುರುಘಾ ಶರಣರ ಪೋಕ್ಸೊ ಪ್ರಕರಣ: ಹೈಕೋರ್ಟ್​ನಿಂದ ಪಡೆದ ಜಾಮೀನು ಅಮಾನತ್ತಿನಲ್ಲಿಟ್ಟ ಸುಪ್ರೀಂ - Muruga Sharan POCSO case

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶರಣರು ಹೈಕೋರ್ಟ್​ನಿಂದ ಪಡೆದಿದ್ದ ಜಾಮೀನು ಅನ್ನು ಸುಪ್ರೀಂ ಕೋರ್ಟ್​ ಅಮಾನತಿನಲ್ಲಿಟ್ಟಿದೆ.

SUPREME COURT  MURUGA SRI BAIL  HIGH COURT  BENGALURU
ಮುರುಘಾ ಶರಣರ ಪೋಕ್ಸೊ ಪ್ರಕರಣ
author img

By ETV Bharat Karnataka Team

Published : Apr 23, 2024, 4:21 PM IST

Updated : Apr 23, 2024, 5:38 PM IST

ನವದೆಹಲಿ/ಬೆಂಗಳೂರು : ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಚಿತ್ರದುರ್ಗ ಮುರುಘ ರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನು ಆದೇಶವನ್ನು ಸುಪ್ರೀಂಕೋರ್ಟ್ ಅಮಾನತ್ತಿನಲ್ಲಿಟ್ಟಿದೆ. ಇದರಿಂದಾಗಿ ಶ್ರೀಗಳು ಮತ್ತೆ ಜೈಲು ಸೇರಬೇಕಿದೆ.

ಅತ್ಯಾಚಾರ ಪ್ರಕರಣದ ಸಂತ್ರಸ್ತೆಯರ ಪರ ವಕೀಲೆ ಅಪರ್ಣಾ ಭಟ್ ವಾದ ಮಂಡಿಸಿ, ಸಂತ್ರಸ್ತರು ಅಪ್ರಾಪ್ತ ಬಾಲಕಿಯರಾಗಿರುವುದರಿಂದ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್​ ಗಮನಕ್ಕೆ ತಂದರು. ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ಪೀಠ, ಪ್ರತಿವಾದಿ ನ್ಯಾಯಾಂಗ ಬಂಧನದಲ್ಲಿರುವಾಗಲೇ ಸಾಕ್ಷಿಗಳ ವಿಚಾರಣೆ ಸೂಕ್ತ ಎಂದು ಹೇಳಿದೆ. ಐಪಿಸಿ, ಪೋಕ್ಸೋ ಮತ್ತು ಇತರ ಕಾನೂನುಗಳ ಅಡಿಯಲ್ಲಿ ವಿವಿಧ ಅಪರಾಧಗಳಿಗೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂಬುದನ್ನು ಪೀಠವು ಗಮನಿಸಿತು.

ಅಲ್ಲದೆ, ಮುರುಘಾ ಮಠದ ಆಡಳಿತ ಮಂಡಳಿ ವಿಚಾರಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರಿಗೆ ಜಾಮೀನು ಮಂಜೂರು ಮಾಡಿದ್ದ ಕರ್ನಾಟಕ ಹೈಕೋರ್ಟ್ ಕ್ರಮ ಪ್ರಶ್ನಿಸಿ ಮಾಜಿ ಶಾಸಕ ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಂನಾಥ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಈ ಪ್ರಕರಣದಲ್ಲಿ ಆರೋಪಿಯಾಗಿರುವ ಶಿವಮೂರ್ತಿ ಶರಣರು ಮುಂದಿನ ಒಂದು ವಾರದಲ್ಲಿ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗಿ ನ್ಯಾಯಾಂಗ ಬಂಧನಕ್ಕೆ ಒಳಗಾಗಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರು ಹಾಗೂ ಪೋಷಕರ ವಿಚಾರಣೆ ಮುಗಿಸುವವರೆಗೂ ಶ್ರೀಗಳು ಬಂಧನದಲ್ಲಿರಬೇಕು ಎಂದು ಪೀಠ ತಿಳಿಸಿದೆ. ಅಲ್ಲದೆ, ವಿಚಾರಣಾ ನ್ಯಾಯಾಲಯ ಮುಂದಿನ ನಾಲ್ಕು ತಿಂಗಳಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸಬೇಕು ಎಂದು ಸುಪೀಂಕೋರ್ಟ್ ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಆರೋಪಿಯಾಗಿರುವ ಮುರುಘಾ ಶರಣರು ಅತ್ಯಂತ ಪ್ರಭಾವಿಯಾಗಿದ್ದಾರೆ. ಪ್ರಕರಣ ಸಂಬಂಧ ಆರೋಪ ಪಟ್ಟಿ ಸಲ್ಲಿಸಿದ್ದರೂ, ವಿಚಾರಣೆ ಸಂದರ್ಭದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರಲಿದ್ದಾರೆ. ಅಲ್ಲದೆ, ಇದರಿಂದ ಪ್ರಕರಣದ ವಿಚಾರಣೆ ವೇಳೆ ಸತ್ಯಾಂಶಗಳು ಹೊರ ಬರದೇ ಇರಬಹುದು. ಆದ್ದರಿಂದ ಪೋಕ್ಸೋ ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೂ ಪ್ರಸ್ತುತ ಮಂಜೂರಾಗಿರುವ ಜಾಮೀನು ರದ್ದುಪಡಿಸಬೇಕು ಎಂದು ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ : ಮುರುಘಾ ಮಠದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ನಡೆಸುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯರು ತಮ್ಮ ಮೇಲೆ ಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ 2022 ರ ಆ. 26ರಂದು ದೂರು ದಾಖಲಿಸಿದ್ದರು. ನಂತರ ಶರಣರನ್ನು 2022 ರ ಸೆ. 1ರಂದು ಪೊಲೀಸರು ಬಂಧಿಸಿದ್ದರು. ಬಳಿಕ ಹೈಕೋರ್ಟ್‌ನಿಂದ ಜಾಮೀನು ಪಡೆದುಕೊಂಡಿದ್ದರು.

ಓದಿ: ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ವಿರುದ್ಧ ಆರೋಪ ಮರು ನಿಗದಿಗೆ ಸೂಚಿಸಿದ ಹೈಕೋರ್ಟ್

Last Updated : Apr 23, 2024, 5:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.