ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರ ಸ್ನೇಹಿಯಾಗಿದೆ. ತಂತ್ರಜ್ಞಾನ ಮತ್ತು ಅತ್ಯಾಧುನಿಕ ಸೌಲಭ್ಯಗಳನ್ನು ಪ್ರಯಾಣಿಕರಿಗೆ ಕೊಡುವ ಮೂಲಕ ಮೆಚ್ಚುಗೆ ಪಡೆಯುತ್ತಿದೆ. ಹಾಗೆಯೇ ವಿಮಾನ ನಿಲ್ದಾಣದ ಶೌಚಗೃಹದಲ್ಲಿ ಅಳವಡಿಸಿರುವ ಟಚ್ ಸ್ಕ್ರೀನ್ ಫ್ಲಶ್ ಬಗ್ಗೆ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಹಾಗೂ ಪರಿಸರವಾದಿ ರಿಕ್ಕಿ ಕೇಜ್ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರು. ವಿಮಾನ ನಿಲ್ದಾಣಕ್ಕೆ ಬಂದಾಗೆಲ್ಲ ಇಲ್ಲಿನ ಸೌಲಭ್ಯಗಳ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಹಾಗೆಯೇ ತಮಗಾದ ಕೆಟ್ಟ ಅನುಭವಗಳನ್ನು ಸಹ ಹಂಚಿಕೊಂಡು ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತಿದ್ದರು. ಇದೀಗ ಅವರು ಶೌಚಗೃಹದೊಳಗೆ ಟಚ್ ಸ್ಕ್ರೀನ್ ಫ್ಲಶ್ ಬಳಸುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿಕೊಂಡಿರುವ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಬೆಂಗಳೂರು ವಿಮಾನ ನಿಲ್ದಾಣದಲ್ಲಿರುವ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Touchscreen flushes at the @BLRAirport :-) Technology has reached an all time high!!! pic.twitter.com/k39t0Q9AZA
— Ricky Kej (@rickykej) November 12, 2024
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾರತದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣ ಹಾಗೂ ಅತಿ ಹೆಚ್ಚು ಪ್ರಯಾಣಿಕರು ಇಲ್ಲಿಂದ ಪ್ರಯಾಣಿಸುತ್ತಾರೆ. ಈ ಕಾರಣದಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯಗಳ ಬಗ್ಗೆ ಹೆಚ್ಚು ಗಮನ ನೀಡಲಾಗುತ್ತದೆ. ಟರ್ಮಿನಲ್ಗಳನ್ನು ಉದ್ಯಾನವನದಂತೆ ವಿನ್ಯಾಸಗೊಳಿಸಲಾಗಿದೆ. ಕರ್ನಾಟಕ ಕಲಾ ಶ್ರೀಮಂತಿಕೆಯನ್ನು ಬಿಂಬಿಸುವ ಕಲಾಕೃತಿಗಳು ಸೇರಿದಂತೆ ಚಿತ್ರಗಳನ್ನು ಅಳವಡಿಸಲಾಗಿದೆ. ಹಾಗೆಯೇ ಪ್ರಯಾಣಿಕರಿಗೆ ಆಧುನಿಕತೆಯ ಸ್ಫರ್ಶದೊಂದಿಗೆ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಶೌಚಗೃಹ, ಟರ್ಮಿನಲ್, ಶಾಪಿಂಗ್ ಮಾಲ್ ಮತ್ತು ಲಾಚ್ ಪ್ರದೇಶಗಳಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಸೌಲಭ್ಯಗಳನ್ನು ನೀಡಲಾಗಿದೆ.
ಇದನ್ನೂ ಓದಿ: ಒಂದೇ ದಿನ 7,637 ಪ್ರಯಾಣಿಕರ ನಿರ್ವಹಣೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ದಾಖಲೆ