ETV Bharat / state

ಚಾಮರಾಜನಗರದ ಬದನಗುಪ್ಪೆಯಲ್ಲಿ ಮುತ್ತಯ್ಯ ಮುರಳೀಧರನ್ 1,400 ಕೋಟಿ ರೂ. ಹೂಡಿಕೆ: ಸಚಿವ ಎಂ.ಬಿ.ಪಾಟೀಲ್ - Muttiah Muralitharan - MUTTIAH MURALITHARAN

ಮುತ್ತಯ್ಯ ಮುರಳೀಧರನ್ ಬದನಗುಪ್ಪೆಯಲ್ಲಿ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ.

Muttiah Muralitharan with M.B Patil
ಸಚಿವ ಎಂ.ಬಿ.ಪಾಟೀಲ್ ಭೇಟಿಯಾದ ಮುತ್ತಯ್ಯ ಮುರಳೀಧರನ್ (ETV Bharat)
author img

By ETV Bharat Karnataka Team

Published : Jun 18, 2024, 7:54 PM IST

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬದನಗುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಮಾಜಿ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದಾರೆ. ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಮಂಗಳವಾರ ತಮ್ಮನ್ನು ಇಲ್ಲಿ ಭೇಟಿಯಾದ ಮುತ್ತಯ್ಯ ಮುರಳೀಧರನ್ ಅವರೊಂದಿಗೆ ಸಚಿವರು ಈ ಸಂಬಂಧ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಸಚಿವರು, ಬದನಗುಪ್ಪೆಯಲ್ಲಿ ಮುರಳೀಧರನ್ ಅವರು 'ಮುತ್ತಯ್ಯ ಬ್ರಿವರೇಜಸ್ ಆ್ಯಂಡ್ ಕನ್ಫೆಕ್ಷನರೀಸ್' ಎನ್ನುವ ಬ್ರ್ಯಾಂಡ್​ನಲ್ಲಿ ತಮ್ಮ ಉದ್ಯಮ ಆರಂಭಿಸುತ್ತಿದ್ದು, ಆರಂಭದಲ್ಲಿ 230 ಕೋಟಿ ರೂಪಾಯಿ ಹೂಡಿಕೆಗೆ ಯೋಜನೆ ರೂಪಿಸಲಾಗಿತ್ತು. ಇದೀಗ ಅದು ಸಾವಿರ ಕೋಟಿ ರೂ. ಮುಟ್ಟುತ್ತಿದೆ. ಮುಂದಿನ ದಿನಗಳಲ್ಲಿ 1,400 ಕೋಟಿ ಆಗಲಿದೆ ಎಂದು ಮುತ್ತಯ್ಯ ತಮಗೆ ತಿಳಿಸಿದ್ದಾರೆ ಎಂದು ವಿವರಿಸಿದರು.

ಇದಕ್ಕಾಗಿ ಅವರಿಗೆ ಈಗಾಗಲೇ 46 ಎಕರೆ ಭೂಮಿ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲ ಸಣ್ಣಪುಟ್ಟ ತೊಡಕುಗಳಿದ್ದವು. ಅವುಗಳನ್ನು ಕೂಡಲೇ ಸರಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬದನಗುಪ್ಪೆಯಲ್ಲಿ ಮುಂಬರುವ ಜನವರಿಯಲ್ಲಿ ಉತ್ಪಾದನಾ ಚಟುವಟಿಕೆ ಆರಂಭವಾಗಲಿದೆ ಎಂದು ತಿಳಿಸಿದರು.

ಮುಂಬರುವ ದಿನಗಳಲ್ಲಿ ಮುತ್ತಯ್ಯ ಧಾರವಾಡದಲ್ಲಿ ಕೂಡ ತಮ್ಮ ಉದ್ಯಮದ ಒಂದು ಘಟಕ ಸ್ಥಾಪಿಸಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಈ ವೇಳೆ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿ ಸಿಇಒ ಡಾ.ಮಹೇಶ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಡವರು, ದಲಿತರ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ನೀವು ಸೇವೆಯಲ್ಲಿರಲು ಅನ್ ಫಿಟ್: ಸಿಎಂ ಸಿದ್ದರಾಮಯ್ಯ - CM Siddaramaiah Outrage

ETV Bharat Logo

Copyright © 2025 Ushodaya Enterprises Pvt. Ltd., All Rights Reserved.