ETV Bharat / state

ಮೈಸೂರು ವಿವಿ ಘಟಿಕೋತ್ಸವ: ಎಸ್.ಎಂ.ಕೃಷ್ಣ, ಜಾವಗಲ್ ಶ್ರೀನಾಥ್ ಸೇರಿ ನಾಲ್ವರಿಗೆ ಗೌರವ ಡಾಕ್ಟರೇಟ್ - S M Krishna

ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವದಲ್ಲಿ ಮಾಜಿ ಸಿಎಂ ಎಸ್.ಎಂ.ಕೃಷ್ಣ, ಜಾವಗಲ್ ಶ್ರೀನಾಥ್ ಸೇರಿ ನಾಲ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

Mysore University Convocation  ಮೈಸೂರು ವಿವಿ ಘಟಿಕೋತ್ಸವ  ನಾಲ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ  Former CM SM Krishna  Javagal Shrinath
ಮೈಸೂರು ವಿವಿ ಘಟಿಕೋತ್ಸವ: ಮಾಜಿ ಸಿಎಂ ಎಸ್.ಎಂ. ಕೃಷ್ಣ, ಜಾವಗಲ್ ಶ್ರೀನಾಥ್ ಸೇರಿ ನಾಲ್ವರಿಗೆ ಗೌರವ ಡಾಕ್ಟರೇಟ್
author img

By ETV Bharat Karnataka Team

Published : Mar 3, 2024, 1:35 PM IST

ಮೈಸೂರು: ''ವೇದ ಕಾಲದಿಂದ ಇಂದಿನವರೆಗೂ ಭಾರತೀಯರು ಎಲ್ಲಾ ಕ್ಷೇತ್ರಗಳಲ್ಲೂ ಅನುಪಮವಾದ ಜ್ಞಾನ ಗಳಿಸಿದ್ದಾರೆ. ಖಗೋಳ ವಿಜ್ಞಾನದಿಂದ ಭೂವಿಜ್ಞಾನ, ಗಣಿತ, ವೈದ್ಯಕೀಯ ಸೇರಿದಂತೆ ಇತರ ಹಲವು ಕ್ಷೇತ್ರಗಳಲ್ಲಿ ಭಾರತೀಯರ ಕೊಡುಗೆ ಇಡೀ ಜಗತ್ತಿಗೆ ತುಂಬಾ ಮಹತ್ವದ್ದಾಗಿದೆ'' ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಇಂದು ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ''ನಮ್ಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯ ಬಹಳ ಪುರಾತನವಾಗಿದೆ. ಪ್ರಾಚೀನ ಕಾಲದಿಂದಲೂ ವಸುಧೈವ ಕುಟುಂಬಕಂ ತತ್ವಶಾಸ್ತ್ರ ಮತ್ತು ಧ್ಯಾನದ ಮೇಲೆ ಕೇಂದ್ರೀಕೃತವಾಗಿದೆ'' ಎಂದರು.

Mysore University Convocation  ಮೈಸೂರು ವಿವಿ ಘಟಿಕೋತ್ಸವ  ನಾಲ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ  Former CM SM Krishna  Javagal Shrinath
ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಹಾಗೂ ಮಾಜಿ ಸಿಎಂ ಎಸ್.ಎಂ. ಕೃಷ್ಣ ಸೇರಿ ನಾಲ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು

''ಘಟಿಕೋತ್ಸವದಲ್ಲಿ ಮಾಜಿ ಸಿಎಂ ಎಸ್.ಎಂ.ಕೃಷ್ಣ, ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್, ಪ್ರಾಧ್ಯಾಪಕ ಡಾ.ಭಾಷ್ಯಂ ಸ್ವಾಮೀಜಿ ಮತ್ತು ಎಂ.ಆರ್.ಸೀತಾರಾಮ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿಯಿತು. ಈ ಸಾಧಕರ ಸಾಧನೆ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಲಿ'' ಎಂದು ಆಶಯ ವ್ಯಕ್ತಪಡಿಸಿದರು.

''ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಭ್ರಾತೃತ್ವ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ. ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುವಂತಹ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಅವಶ್ಯಕತೆಯಿದೆ. ವೇದ- ವೇದಾಂಗದ ಹೊರತಾಗಿ, ತಕ್ಷಶಿಲಾ ಮತ್ತು ನಳಂದ ವಿಶ್ವವಿದ್ಯಾಲಯಗಳು ವಿಜ್ಞಾನ, ತಂತ್ರಜ್ಞಾನ, ಗಣಿತ, ಖಗೋಳಶಾಸ್ತ್ರ, ರಾಜ್ಯಶಾಸ್ತ್ರ, ನೀತಿಶಾಸ್ತ್ರ, ಅರ್ಥಶಾಸ್ತ್ರ, ವ್ಯಾಕರಣ ಇತ್ಯಾದಿ ಅನೇಕ ವಿಷಯಗಳಿಗೆ ಪ್ರಸಿದ್ಧವಾಗಿತ್ತು. ಈ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಪ್ರಪಂಚದಾದ್ಯಂತ ವಿದ್ಯಾರ್ಥಿಗಳು ಬರುತ್ತಿದ್ದರು. ಈ ವಿಶ್ವವಿದ್ಯಾಲಯದಲ್ಲಿ ಪ್ರಸಿದ್ದ ಭಾರತೀಯ ವಿದ್ವಾಂಸರಾದ ಚರಕ್, ಸುಶ್ರುತ, ಆರ್ಯಭಟ ಸೇರಿದಂತೆ ಮುಂತಾದವರು ಜ್ಞಾನವನ್ನು ಪಡೆದಿದ್ದಾರೆ. ಜ್ಞಾನದ ವಿವಿಧ ಕ್ಷೇತ್ರಗಳಲ್ಲಿ ಅವರ ಮಹತ್ವದ ಕೊಡುಗೆಯಿಂದಾಗಿ ಅವರನ್ನು ವಿಶ್ವಗುರು ಎಂದು ಪರಿಗಣಿಸಲ್ಪಟ್ಟಿದ್ದಾರೆ'' ಎಂದು ಹೇಳಿದರು.

''ಸ್ವಾತಂತ್ರ್ಯಾ ನಂತರ ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ. ದೇಶದ ಆರ್ಥಿಕತೆಯು ಪ್ರಬಲವಾಗಿದೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ದೇಶವನ್ನು ಮತ್ತಷ್ಟು ಬಲಪಡಿಸುವ ಮೂಲಕ ವಿಶ್ವದ ಅತಿದೊಡ್ಡ ಆರ್ಥಿಕತೆಯನ್ನು ಮಾಡಲು ನಿರ್ಧರಿಸಲಾಗಿದೆ. ಪರಿಸರ ಅಸಮತೋಲನ ಇಂದು ಜಗತ್ತಿನಲ್ಲಿ ಗಂಭೀರ ಸಮಸ್ಯೆಯಾಗಿದೆ. ಪರಿಸರ ಸಂರಕ್ಷಣೆ ಮತ್ತು ಪ್ರಚಾರ ನಮ್ಮೆಲ್ಲರ ಹೊಣೆಯಾಗಿದೆ. ನೀರು, ಅರಣ್ಯ ಮತ್ತು ವಾಯು ಸಂರಕ್ಷಣೆಗೆ ಹೆಚ್ಚಿನ ಕೆಲಸ ಮಾಡುವ ಅಗತ್ಯವಿದ್ದು, ಪ್ರತಿಯೊಬ್ಬರೂ ಸಂರಕ್ಷಣೆಗೆ ಮುಂದಾಗಬೇಕು'' ಎಂದು ಕರೆ ನೀಡಿದರು.

ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವದ ಫೋಟೋ ಸೆಷನ್

''ಮೈಸೂರು ನಗರವು ತನ್ನ ಐತಿಹಾಸಿಕ ಸ್ಮಾರಕಗಳು ಮತ್ತು ವಿಶಿಷ್ಟ ವಾಸ್ತುಶಿಲ್ಪ ಮತ್ತು ಅದರ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಗೆ ಹೆಸರುವಾಸಿಯಾಗಿದೆ. ದಕ್ಷಿಣ ಭಾರತದ ಶಿಕ್ಷಣದ ಕೇಂದ್ರವಾಗಿದೆ. ಮೈಸೂರು ವಿಶ್ವವಿದ್ಯಾಲಯವನ್ನು 1916ರ ಜುಲೈ 27ರಂದು ಸ್ಥಾಪಿಸಲಾಯಿತು. ಇದು ದೇಶದ ಆರನೇ ಅತ್ಯಂತ ಹಳೆಯ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯದ ಮೊದಲ ವಿಶ್ವವಿದ್ಯಾಲಯವಾಗಿದೆ. ಈ ವಿಶ್ವವಿದ್ಯಾಲಯವು ಈ ದೇಶಕ್ಕೆ ಅನೇಕ ವಿಜ್ಞಾನಿಗಳು, ತತ್ವಜ್ಞಾನಿಗಳು ಮತ್ತು ರಾಜಕಾರಣಿಗಳನ್ನು ನೀಡಿದೆ. ಅವರೆಲ್ಲರೂ ಕರ್ನಾಟಕ ಮತ್ತು ಭಾರತದ ನಿರ್ಮಾಣದಲ್ಲಿ ಜ್ಞಾನ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಕೊಡುಗೆ ನೀಡಿದ್ದಾರೆ'' ಎಂದು ಶ್ಲಾಘಿಸಿದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಜಯದೇವ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ಕುಲಪತಿ ಎನ್.ಕೆ.ಲೋಕನಾಥ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಇಕ್ಬಾಲ್‌ ಅನ್ಸಾರಿಗೆ ಸೂಕ್ತ ಸ್ಥಾನಮಾನದ ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.