ETV Bharat / state

ಎಸ್.ಎಂ.ಕೃಷ್ಣ, ಎಂ.ಆರ್.ಸೀತಾರಾಮ್ ಸೇರಿ ಮೂವರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್​ - ಗೌರವ ಡಾಕ್ಟರೇಟ್​

ಮಾಜಿ ಸಿಎಂ ಎಸ್.ಎಂ.ಕೃಷ್ಣ, ಸುದರ್ಶನ ನರಸಿಂಹ ಕ್ಷೇತ್ರದ ಪೀಠಾಧಿಪತಿ ಭಾಷ್ಯಂ ಸ್ವಾಮೀಜಿ ಹಾಗೂ ಬೆಂಗಳೂರಿನ ಗೋಕುಲ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಆರ್.ಸೀತಾರಾಮ್​ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ತಿಳಿಸಿದ್ದಾರೆ.

mysuru-university-honorary-doctorate-for-s-m-krishna-and-2-others-dignitaries
ಮೈಸೂರು ವಿವಿಯ 104ನೇ ಘಟಿಕೋತ್ಸವ: ಮಾಜಿ ಸಿಎಂ ಎಸ್. ಎಂ.ಕೃಷ್ಣ ಸೇರಿ ಮೂವರಿಗೆ ಗೌರವ ಡಾಕ್ಟರೇಟ್​
author img

By ETV Bharat Karnataka Team

Published : Mar 1, 2024, 4:21 PM IST

Updated : Mar 1, 2024, 4:50 PM IST

ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಅವರೊಂದಿಗೆ ಸಂದರ್ಶನ

ಮೈಸೂರು: "ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವದಲ್ಲಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು" ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್‌ ತಿಳಿಸಿದರು. ವಿವಿಯ ಶೈಕ್ಷಣಿಕ ಮಂಡಳಿಯ ಸಭಾಂಗಣದಲ್ಲಿ ಇಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, "ಈ ಬಾರಿಯ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ನಾಡೋಜ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಹಾಗೂ ಬೆಂಗಳೂರಿನ ಗೋಕುಲ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಆರ್.ಸೀತಾರಾಮ್​ ಅವರಿಗೆ ನೀಡಲಾಗುತ್ತದೆ" ಎಂದು ಮಾಹಿತಿ ನೀಡಿದರು.

"ಪದ್ಮವಿಭೂಷಣ ಪುರಸ್ಕೃತರೂ ಆಗಿರುವ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ರಾಜಕೀಯ ಕ್ಷೇತ್ರ ಮತ್ತು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಕರ್ನಾಟಕದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇದನ್ನು ಪರಿಗಣಿಸಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು. ಸುದರ್ಶನ ನರಸಿಂಹ ಕ್ಷೇತ್ರದ ಪೀಠಾಧಿಪತಿ ಹಾಗೂ ನಾಡೋಜ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರು ಮೈಸೂರಿನ ಪ್ರಸಿದ್ಧ ಸರ್ಕಾರಿ ಮಹಾರಾಜ ಸಂಸ್ಕೃತ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದು, ವೇದಾಂತ ಪಾಂಡಿತ್ಯಕ್ಕೆ ರಾಷ್ಟ್ರಪತಿಗಳಿಂದ ಚಿನ್ನದ ಪದಕ ಪಡೆದಿದ್ದಾರೆ. ಹೀಗಾಗಿ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ" ಎಂದು ತಿಳಿಸಿದರು.

"ಎಂ.ಆರ್.ಸೀತಾರಾಮ್ ಅವರು ಬೆಂಗಳೂರಿನಲ್ಲಿ ಗೋಕುಲ ಶಿಕ್ಷಣ ಪ್ರತಿಷ್ಠಾನವನ್ನು ಸ್ಥಾಪಿಸಿ ರಾಜ್ಯದಲ್ಲಿ ಶಿಕ್ಷಣ ಮತ್ತು ಆರೋಗ್ಯದ ಪ್ರವರ್ತಕರಲ್ಲಿ ಒಬ್ಬರಾದ ದಿವಂಗತ ಡಾ.ಎಂ.ಎಸ್.ರಾಮಯ್ಯನವರ ಮಗ. ಸೀತಾರಾಮ್ ರಾಜಕಾರಣಿಯಾಗಿ, ಉದ್ಯಮಿಯಾಗಿ, ಶಿಕ್ಷಣ ತಜ್ಞರಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸೇವೆಯನ್ನು ಗುರುತಿಸಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ" ಎಂದು ಹೇಳಿದರು.

32,249 ಮಂದಿಗೆ ಪದವಿ ಪ್ರದಾನ: "ಘಟಿಕೋತ್ಸವದಲ್ಲಿ 32,249 ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗುವುದು. ಇದರಲ್ಲಿ 19,992 ವಿದ್ಯಾರ್ಥಿನಿಯರು ಮತ್ತು 12,258 ವಿದ್ಯಾರ್ಥಿಗಳು ಸೇರಿದ್ದಾರೆ. ಪದವಿಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ವಿವಿಧ ವಿಷಯಗಳಲ್ಲಿ 100ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳಿಗೆ ಪಿಹೆಚ್​ಡಿ ಪದವಿ ಪ್ರದಾನ ಮಾಡಲಾಗುವುದು. ಘಟಿಕೋತ್ಸವದಲ್ಲಿ 436 ಪದಕಗಳು, 266 ಬಹುಮಾನಗಳನ್ನು 252 ಮಂದಿ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಗುವುದು. ಇದರ ಜೊತೆಗೆ 6,144 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಗುವುದು ಹಾಗೂ 26,009 ಮಂದಿ ವಿದ್ಯಾರ್ಥಿಗಳಿಗೆ ಸ್ನಾತಕ ಪದವಿ ಪ್ರದಾನ ಮಾಡಲಾಗುವುದು" ಎಂದು ಮಾಹಿತಿ ನೀಡಿದರು.

ಟಿ.ಎನ್.ಸೀತಾರಾಂಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಿಲ್ಲ: "ಖ್ಯಾತ ಕಿರುತೆರೆ ನಿರ್ದೇಶಕ ಟಿ.ಎನ್.ಸೀತಾರಾಂ ಅವರಿಗೆ ಈ ಬಾರಿ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ ಎಂಬುದು ಸುಳ್ಳು ಸುದ್ದಿ. ಈ ಬಗ್ಗೆ ಮೈಸೂರು ವಿವಿ ಅಧಿಕೃತವಾಗಿ ಯಾವುದೇ ಘೋಷಣೆ ಮಾಡಿಲ್ಲ. ಮಾಧ್ಯಮಗಳ ವರದಿಗಳಿಗೂ ಮೈಸೂರು ವಿವಿಗೂ ಯಾವುದೇ ಸಂಬಂಧವಿಲ್ಲ. ಕೇವಲ 3 ಜನರಿಗೆ ಮಾತ್ರ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಅವರಲ್ಲಿ ಟಿ.ಎನ್.‌ಸೀತಾರಾಂ ಅವರ ಹೆಸರು ಇಲ್ಲ" ಎಂದು ಕುಲಪತಿ ಪ್ರೊ.ಎನ್ ಕೆ.ಲೋಕನಾಥ್ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಉಚಿತ ಶಿಕ್ಷಣ-ಆರೋಗ್ಯ ಗ್ಯಾರಂಟಿ ತನ್ನಿ, ಹಣಕಾಸು ಇಲಾಖೆಗೆ ಪ್ರತ್ಯೇಕ ಸಚಿವರ ನೇಮಿಸಿ: ಸರ್ಕಾರಕ್ಕೆ ವಿಶ್ವನಾಥ್ ಸಲಹೆ

Last Updated : Mar 1, 2024, 4:50 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.