ETV Bharat / state

ವಾಲ್ಮೀಕಿ ನಿಗಮ ಹಗರಣ: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ- ಎನ್.ರವಿಕುಮಾರ್ - Valmiki Corporation Scam

author img

By ETV Bharat Karnataka Team

Published : Jun 2, 2024, 5:43 PM IST

ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ವಾಲ್ಮೀಕಿ ನಿಗಮ ಹಗರಣದ ಕುರಿತು ಮಾತನಾಡಿದರು.

N Ravikumar
ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ (ETV Bharat)
ಎನ್. ರವಿಕುಮಾರ್ (ETV Bharat)

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಘನತೆ, ಗೌರವ, ನೈತಿಕತೆ ಇದ್ದರೆ ವಾಲ್ಮೀಕಿ ನಿಗಮ ಹಗರಣ ಪ್ರಕರಣದ ನೈತಿಕ ಹೊಣೆ ಹೊತ್ತು ಮೊದಲು ರಾಜೀನಾಮೆ ಕೊಡಬೇಕು. ಇದೊಂದು ಅಂತಾರಾಜ್ಯ ಭ್ರಷ್ಟಾಚಾರವಾದ್ದರಿಂದ ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬ್ಯಾಂಕ್ ಆಫ್ ಬರೋಡದಿಂದ 144 ಕೋಟಿ ರೂಪಾಯಿ ಓವರ್ ಡ್ರಾಫ್ಟ್ (ಸಾಲ) ಪಡೆದಿದ್ದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಗೆ ಇದನ್ನು ಪಡೆಯಲಾಯಿತೇ? ಆ ಕಂಪನಿಗಳಿಗೆ ಚುನಾವಣೆ ವೇಳೆ ಏಕೆ ಹಣ ಹಾಕಿದ್ದೀರಿ? ಆ ಕಂಪನಿಗಳ ಮಾಲೀಕರು ಯಾರು? ಆ ಕಂಪನಿಗಳು ಮತ್ತು ಡಿ.ಕೆ.ಶಿವಕುಮಾರ್‌ ಅವರಿಗೆ, ನಾಗೇಂದ್ರರಿಗೆ, ಸಿದ್ದರಾಮಯ್ಯರಿಗೆ ಏನು ಸಂಬಂಧ? ಎಂದು ಕೇಳಿದರು.

ಈ ಓವರ್ ಡ್ರಾಫ್ಟ್ ಪಡೆಯಲು ಕ್ಯಾಬಿನೆಟ್ ನಿರ್ಣಯ ಮಾಡಿಲ್ಲವೇಕೆ? ಇದರೊಳಗೆ ನಾಗೇಂದ್ರ ಮಾತ್ರವಲ್ಲದೆ ಅನೇಕ ಅಧಿಕಾರಿಗಳಿದ್ದಾರೆ. ತೆಲಂಗಾಣದಲ್ಲಿ ಚುನಾವಣೆಗೆ ನಿಂತ ಅನೇಕ ಅಭ್ಯರ್ಥಿಗಳೂ ಇದರಲ್ಲಿದ್ದಾರೆ. ಹಣ ಕೊಟ್ಟ ಅನೇಕ ಮಂತ್ರಿಗಳೂ ಕರ್ನಾಟಕದಲ್ಲಿದ್ದಾರೆ. ಇದೊಂದು ಅಂತಾರಾಜ್ಯ ಭ್ರಷ್ಟಾಚಾರ. ಆದ್ದರಿಂದ ಸಿಬಿಐ ತನಿಖೆ ನಡೆಸಬೇಕಿದೆ ಎಂದರು.

ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗಾಗಿ ಇರುವ ವಾಲ್ಮೀಕಿ ಅಭಿವೃದ್ಧಿ ನಿಗಮವು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ವ್ಯಾಪಾರ ಮಾಡುವ ನಿಗಮವಾಗಿ ಪರಿವರ್ತನೆಯಾಗಿದೆ ಎಂದು ಟೀಕಿಸಿದರು. ನಿಗಮವು ಐಟಿ ಕಂಪನಿಗೆ ಸಾಲ ಕೊಡುವ ಕೆಲಸ ಮಾಡುವುದಿಲ್ಲ. ಆದರೆ, ಈ ನಿಗಮವು 6+9 ಕಂಪನಿಗಳಿಗೆ ಹಣ ಕೊಟ್ಟಿದೆ. ಆ ಕಂಪನಿಗಳು ಯಾವುವು? ಅವರ ಟ್ರ್ಯಾಕ್ ರೆಕಾರ್ಡ್ ಏನು? ಅವರಿಗೆ ಏಕೆ ಹಣ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದರು.

ಸಾಲ ಕೊಡಲು ಅನುಮತಿ ಕೊಟ್ಟವರು ಯಾರು?. ಸಚಿವ ಸಂಪುಟದಲ್ಲಿ ನಿರ್ಧಾರ ಆಗಿತ್ತೇ? ಎಂದು ಮುಖ್ಯಮಂತ್ರಿ ಮತ್ತು ಸಚಿವ ನಾಗೇಂದ್ರರನ್ನು ಕೇಳಿದ ರವಿಕುಮಾರ್ ಸಿಎಂ, ಡಿಸಿಎಂಗೆ ಗೊತ್ತಿದ್ದೇ ಇದು ನಡೆದಿದೆ. ಅದನ್ನು ಮುಚ್ಚಿಡುತ್ತಿದ್ದಾರೆ ಎಂದರಲ್ಲದೆ, ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರನ್ ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಇದು ಹೊರಕ್ಕೆ ಬಂದಿದೆ. ಈ ಸರ್ಕಾರ ಒಬ್ಬ ಪ್ರಾಮಾಣಿಕ ಅಧಿಕಾರಿಯ ಬಲಿ ಪಡೆದಿದೆ ಎಂದು ಟೀಕಿಸಿದರು.

ಇದನ್ನೂ ಓದಿ: ಪರಿಷತ್​ನ 3 ಸ್ಥಾನಕ್ಕೆ ಅಭ್ಯರ್ಥಿಗಳ ಹೆಸರು ಅಂತಿಮ: ನಾಳೆ ಪಟ್ಟಿ ಪ್ರಕಟಿಸಲಿರುವ ಬಿಜೆಪಿ ಹೈಕಮಾಂಡ್ - Council Election

ETV Bharat Logo

Copyright © 2024 Ushodaya Enterprises Pvt. Ltd., All Rights Reserved.