ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಲ್ಲಿ ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಬದಲಾಯಿಸುವ ಮತ್ತೊಂದು ಪ್ರವೇಶ ದ್ವಾರವನ್ನು ಸೋಮವಾರ ತೆರೆಯಲಾಗಿದೆ.
ಬೆಂಗಳೂರಿನ ನಮ್ಮ ಮೆಟ್ರೋ 73 ಕಿ.ಮೀ. ಜಾಲ ಹೊಂದಿದ್ದು, ದೇಶದ ಎರಡನೇ ಅತೀ ದೊಡ್ಡ ಮೆಟ್ರೋ ನಗರಗಳ ಸಾಲಿಗೆ ಸೇರಿದೆ. ದಿನೇ ದಿನೇ ಹೆಚ್ಚಾಗುತ್ತಿರುವ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಮೆಟ್ರೋ ಹೊಸ ಉಪಕ್ರಮ ತರುತ್ತಿದ್ದು, ಇದೀಗ ಮೆಜೆಸ್ಟಿಕ್ ಇಂಟರ್ ಚೇಂಜ್ ನಿಲ್ದಾಣದಲ್ಲಿ ಹೊಸ ಸೌಲಭ್ಯ ಕಲ್ಪಿಸಲಾಗಿದೆ.
ಮೇ 21ರಂದು ಮೊದಲ ಮೆಜೆಸ್ಟಿಕ್ ನಿಲ್ದಾಣದಲ್ಲಿ ಪ್ರವೇಶ ದ್ವಾರ ತೆರೆಯಲಾಗಿತ್ತು. ಇದೀಗ ಮತ್ತೊಂದು ಪ್ರವೇಶ ದ್ವಾರ ತೆರೆಯುವ ಮೂಲಕ ನಿಲ್ದಾಣದಲ್ಲಿ ದಟ್ಟಣೆ ತಪ್ಪಿಸಲು ಮತ್ತಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಇಂದು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಲ್ಲಿ ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಬದಲಾಯಿಸುವ ಮತ್ತೊಂದು ಪ್ರವೇಶ ದ್ವಾರವನ್ನು ತೆರೆಯಲಾಗಿದೆ. ಈ ಸೌಲಭ್ಯ ವನ್ನು ಬಳಸಿಕೊಳ್ಳಲು ಕೋರಿದೆ.
— ನಮ್ಮ ಮೆಟ್ರೋ (@OfficialBMRCL) September 2, 2024
56 ರೈಲುಗಳು, 7 ಲಕ್ಷಕ್ಕೂ ಅಧಿಕ ಪ್ರಯಾಣಿಕರು: ನಮ್ಮ ಮೆಟ್ರೋದ ಹಸಿರು ಮಾರ್ಗ ಹಾಗೂ ನೇರಳೆ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚು. ಈ ಮಾರ್ಗದಲ್ಲಿ 56 ರೈಲುಗಳು ನಿತ್ಯ ಓಡಾಡುತ್ತಿವೆ. 7 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಪ್ರತಿನಿತ್ಯ ಮೆಟ್ರೋ ಅವಲಂಬಿಸಿದ್ದಾರೆ.
ಇದನ್ನೂ ಓದಿ: 12 ವರ್ಷಗಳಲ್ಲೇ ನಮ್ಮ ಮೆಟ್ರೋದಲ್ಲಿ ದಾಖಲೆ ಪ್ರಯಾಣಿಕರ ಸಂಚಾರ - Namma Metro Record