ಬೆಂಗಳೂರು: ನಮ್ಮ ಮೆಟ್ರೋ ಗ್ರೀನ್ ಲೈನ್ ವಿಸ್ತೃತ ನಾಗಸಂದ್ರ - ಮಾದವಾರ (3.7ಕಿಮೀ) ಮಾರ್ಗದಲ್ಲಿ ಗುರುವಾರ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಂಡ (ಸಿಎಂಆರ್‌ಎಸ್) ತಪಾಸಣೆ ಪೂರ್ಣಗೊಳಿಸಿದೆ. ಇನ್ನೆರಡು ವಾರದಲ್ಲಿ ವರದಿ ನೀಡುವ ನಿರೀಕ್ಷೆಯಿದೆ. ಶೀಘ್ರದಲ್ಲಿಯೇ ಪ್ರಯಾಣಿಕರ ಸಂಚಾರ ಪ್ರಾರಂಭವಾಗಲಿದೆ.
ಮೋಟಾರ್ ಟ್ರಾಲಿ ಮೂಲಕ ಮಾರ್ಗದಲ್ಲಿ ಸಂಚರಿಸಿದ ಸಿಎಂಆರ್‌ಎಸ್ ತಂಡದವರು ಪರಿಶೀಲನೆ ನಡೆಸಿದರು. ಮಾರ್ಗದ ತಿರುವು, ಪ್ರಾಯೋಗಿಕ ಸಂಚಾರದ ವೇಳೆಯಲ್ಲಿ ರೈಲಿನ ವೇಗ, ನಿಲ್ದಾಣಗಳಲ್ಲಿ ನಿಲ್ಲಬೇಕಾದಾಗ ನಿಧಾನಗತಿ, ಬ್ರೇಕ್ ಸಿಸ್ಟಂ ಹಾಗೂ ವಿದ್ಯುತ್ ಪೂರೈಕೆ ಸೇರಿ ಇತರ ಅಂಕಿ - ಅಂಶಗಳ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮದ ಅಧಿಕಾರಿಗಳಿಂದ ಮಾಹಿತಿ ಪಡೆದರು.
The Statutory Safety Inspection held today i.e 03.10.2024 on the newly constructed Line between Nagasandra to Madavara Metro Stations by the Commissioner of Metro Railway Safety (Southern Circle) and team has been successfully completed. Fki.
— ನಮ್ಮ ಮೆಟ್ರೋ (@OfficialBMRCL) October 3, 2024
Chief Public Relations Officer
BMRCL pic.twitter.com/0GsZLOdQeq
ಮಂಜುನಾಥ ನಗರ, ಚಿಕ್ಕಬಿದರಕಲ್ಲು ಹಾಗೂ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ ನಿಲ್ದಾಣಗಳನ್ನು ತಪಾಸಣೆ ಮಾಡಿದರು. ಸಿಎಂಆರ್‌ಎಸ್ ತಂಡ 15 ದಿನಗಳಲ್ಲಿ ವರದಿ ನೀಡುವ ಸಾಧ್ಯತೆಯಿದೆ. ಅವರು ಸೂಚಿಸುವ ಕೆಲ ಬದಲಾವಣೆಗಳ ಅನ್ವಯ ರೈಲು ಸಂಚಾರ ಆರಂಭಿಸಲಾಗುವುದು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದರು.
ಇದನ್ನೂ ಓದಿ: ನೈಋತ್ಯ ಮುಂಗಾರು ಮತ್ತೆ ಚುರುಕು: 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Alert
2017ರಲ್ಲಿ ಹಸಿರು ಮಾರ್ಗದ ವಿಸ್ತರಿತ ಕಾಮಗಾರಿ ಆರಂಭವಾಗಿದ್ದರೂ ಕೋವಿಡ್, ಭೂಸ್ವಾದೀನ ಸೇರಿ ಹಲವು ಕಾರಣದಿಂದ ಏಳು ವರ್ಷ ವಿಳಂಬವಾಗಿದೆ. ಇದೀಗ ಮಾದವಾರದವರೆಗೆ ವಾಣಿಜ್ಯ ಸೇವೆ ಲಭ್ಯವಾಗಲಿದ್ದು, ಇದರಿಂದ ನೆಲಮಂಗಲ ಸೇರಿ ಸುತ್ತಮುತ್ತಲ ಜನತೆಗೆ ಅನುಕೂಲವಾಗಲಿದೆ. ಸಿಎಂಆರ್‌ಎಸ್ ತಪಾಸಣೆ ಹಿನ್ನೆಲೆಯಲ್ಲಿ ನಾಗಸಂದ್ರ ಹಾಗೂ ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣಗಳ ನಡುವೆ ಗುರುವಾರ ಬೆಳಗ್ಗೆ 10 ಗಂಟೆಯಿಂದ 2 ಗಂಟೆವರೆಗೆ ರೈಲ್ವೆ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ, ಈ ಭಾಗದ ಪ್ರಯಾಣಿಕರು ತೊಂದರೆಗೆ ಒಳಗಾಗುವಂತಾಯಿತು.
ಇದನ್ನೂ ಓದಿ: ಚಾಮರಾಜನಗರ: 2,500 ಸಾವಿರ ವರ್ಷಗಳ ಹಿಂದಿನ ಸಮಾಧಿಗಳ ಉತ್ಖನನ ಶುರು - Excavation Of Tombs