ETV Bharat / state

ಬೆಂಗಳೂರು: ಇನ್ಮುಂದೆ ಬೆಳಗ್ಗೆ 5 ಗಂಟೆಯಿಂದ ನಮ್ಮ ಮೆಟ್ರೋ ಸೇವೆ, ಪ್ರತಿ 3 ನಿಮಿಷಕ್ಕೊಂದು ರೈಲು ಸಂಚಾರ

ಇನ್ನು ಮುಂದೆ ಮೆಜೆಸ್ಟಿಕ್​​ನಿಂದ ಬೆಳಗ್ಗೆ 5 ಗಂಟೆಗೆ ಎಲ್ಲಾ ದಿಕ್ಕುಗಳಿಗೂ ಮೆಟ್ರೋ ಸೇವೆ ಆರಂಭಿಸಲಾಗುತ್ತಿದೆ ಎಂದು ಬಿಎಂಆರ್​ಸಿಎಲ್ ಮಾಹಿತಿ ನೀಡಿದೆ.

ಮೆಟ್ರೋ
ಮೆಟ್ರೋ
author img

By ETV Bharat Karnataka Team

Published : Feb 23, 2024, 6:01 PM IST

ಬೆಂಗಳೂರು: ಸಿಲಿಕಾನ್​ ಸಿಟಿಗೆ ಬರುವ ಪ್ರಯಾಣಿಕರು ವಾಸ ಸ್ಥಳಕ್ಕೆ ತೆರಳಲು ಅನುಕೂಲ ಆಗುವಂತೆ ಮೆಜೆಸ್ಟಿಕ್‌ನಿಂದ ಬೆಳಗ್ಗೆ 5 ಗಂಟೆಗೆ ಎಲ್ಲ ದಿಕ್ಕುಗಳಿಗೂ ಮೆಟ್ರೋ ಸೇವೆ ಆರಂಭಿಸಲಾಗುತ್ತಿದೆ ಮತ್ತು ಫೆ.26ರಿಂದ ಸೋಮವಾರದಿಂದ ಶುಕ್ರವಾರದವರೆಗೆ ಜನದಟ್ಟಣೆ ಅವಧಿಯಲ್ಲಿ ಪ್ರತಿ 3 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸಲಿವೆ ಎಂದು ನಮ್ಮ ಬಿಎಂಆರ್​ಸಿಎಲ್ ತಿಳಿಸಿದೆ.

ಪ್ರತಿದಿನ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಬೆಂಗಳೂರಿಗೆ ಬೆಳ್ಳಂಬೆಳಗ್ಗೆ ಆಗಮಿಸುವ ಪ್ರಯಾಣಿಕರು ತಮ್ಮ ವಾಸಸ್ಥಳಕ್ಕೆ ತೆರಳಲು ಅನುಕೂಲ ಆಗುವಂತೆ ಮೆಜೆಸ್ಟಿಕ್‌ನಿಂದ (ನಾಡಪ್ರಭು ಕೆಂಪೇಗೌಡ ನಿಲ್ದಾಣ) ಬೆಳಗ್ಗೆ 5 ಗಂಟೆಗೆ ಎಲ್ಲ ದಿಕ್ಕುಗಳಿಗೂ ಮೆಟ್ರೋ ರೈಲು ಸೇವೆಯನ್ನು ಆರಂಭಿಸಲಾಗುತ್ತಿದೆ. ಇದರಿಂದ ಭಾರತೀಯ ರೈಲ್ವೆ ಮತ್ತು ಇಂಟರ್‌ಸಿಟಿ ಬಸ್‌ಗಳ ಮೂಲಕ ಬೆಂಗಳೂರು ನಗರಕ್ಕೆ ಬೆಳಗ್ಗೆ ಆಗಮಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ - ಮೆಜೆಸ್ಟಿಕ್​ನಿಂದ ಎಲ್ಲಾ ದಿಕ್ಕುಗಳಿಗೆ ಮೊದಲ ರೈಲು (ಭಾನುವಾರ ಹೊರತುಪಡಿಸಿ) ವಾರದ ಎಲ್ಲಾ ದಿನಗಳಲ್ಲಿ ಬೆಳಗ್ಗೆ 5 ಗಂಟೆಗೆ ಪ್ರಾರಂಭವಾಗಲಿದೆ.

ಜೊತೆಗೆ ಫೆ. 26ರಿಂದ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 8.45ರಿಂದ ಬೆಳಗ್ಗೆ 10.20ರವರೆಗೆ ಪ್ರತಿ 3 ನಿಮಿಷಕ್ಕೊಂದರಂತೆ ಹೆಚ್ಚುವರಿ ಮೆಟ್ರೋ ರೈಲು ಸೇವೆಗಳನ್ನು ಒದಗಿಸಲಾಗುತ್ತಿದೆ. ಇದು ಟ್ರಿನಿಟಿ, ಇಂದಿರಾನಗರ, ಬೆನ್ನಿಗಾನಹಳ್ಳಿ ಮತ್ತು ಕೆಆರ್ ಪುರ ಮೆಟ್ರೋ ನಿಲ್ದಾಣಗಳ ಕಡೆಗೆ ಹೋಗುವ ಪ್ರಯಾಣಿಕರ ಅವಶ್ಯಕತೆಗಳನ್ನು ಪೂರೈಸಲು ಸಹಾಯವಾಗಲಿದೆ. ಈ ಮಾರ್ಗದಲ್ಲಿ ಬೆಳಗ್ಗೆ 8.45 ರಿಂದ 10.20 ಗಂಟೆಯವರೆಗೆ, ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ರೈಲು ಸೇವೆಗಳು ವಾರದ ಎಲ್ಲಾ ದಿನಗಳಲ್ಲಿ (ಶನಿವಾರ, ಭಾನುವಾರ ಮತ್ತು ಸಾಮಾನ್ಯ ರಜಾದಿನಗಳನ್ನು ಹೊರತುಪಡಿಸಿ) ಲಭ್ಯವಿರುತ್ತವೆ ಎಂದು ಬಿಎಂಆರ್​ಸಿಎಲ್ ಮಾಹಿತಿ ನೀಡಿದೆ.

ಇದನ್ನೂ ಓದಿ : ಎಂ.ಜಿ ರಸ್ತೆ- ಬೈಯಪ್ಪನಹಳ್ಳಿ ನಡುವೆ 'ನಮ್ಮ ಮೆಟ್ರೋ' ರೈಲು ಸಂಚಾರ ಪುನಾರಂಭ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.