ಬೆಂಗಳೂರು: ನಮ್ಮ ಮೆಟ್ರೋ ರೈಲುಗಳು ಪದೇ ಪದೆ ಕೈಕೊಡುತ್ತಿರುವ ಹಿನ್ನೆೆಲೆಯಲ್ಲಿ ಹಲವು ನಿರ್ವಹಣೆ ಕಾಮಗಾರಿಗಳು ನಡೆಯಲಿದ್ದು, ಹೀಗಾಗಿ ರೈಲು ಸೇವೆ ರದ್ದು ಮಾಡಲಾಗುತ್ತಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಕೆಂಗೇರಿ ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆ ರದ್ದಾಗಲಿದ್ದು, ಜೂನ್ 17 ಸೋಮವಾರದಂದು ಬೆಳಗ್ಗೆೆ 5 ರಿಂದ ಮಧ್ಯಾಹ್ನ 1 ಗಂಟೆವರೆಗೂ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ನೇರಳೆ ಮಾರ್ಗದ ಚಲ್ಲಘಟ್ಟ ಮೆಟ್ರೋ ನಿಲ್ದಾಣದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿದೆ. ಜೂನ್ 17ರಂದು ಕೆಂಗೇರಿಯಿಂದ ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆ ಸ್ಥಗಿತವಾಗಲಿದೆ.
ಬೆಳಗ್ಗೆೆ 5ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಲಭ್ಯವಿರುವುದಿಲ್ಲ. ಮಧ್ಯಾಹ್ನ 1 ಗಂಟೆಯ ಬಳಿಕ ರೈಲು ಸೇವೆ ಚಲ್ಲಘಟ್ಟದಿಂದ ವೈಟ್‌ಫೀಲ್ಡ್ ನಡುವೆ ಸಂಪೂರ್ಣ ಸಂಚಾರ ಲಭ್ಯವಿರಲಿದೆ. ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಇರಲಿದೆ ಎಂದು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಶಾಲಾ ಮಕ್ಕಳಿಂದ 2 ಲಕ್ಷಕ್ಕೂ ಹೆಚ್ಚು ಗಿಡ ನೆಡುವ ಹಸಿರು ರಕ್ಷಕ ಕಾರ್ಯಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ - D K Shivakumar