ETV Bharat / state

ಪಾರಂಪರಿಕ ತಾಣಗಳ ಸಂರಕ್ಷಣೆಗೆ "ನಮ್ಮ ಸ್ಮಾರಕ ದತ್ತು ಯೋಜನೆ": ಸಚಿವ ಎಚ್.ಕೆ. ಪಾಟೀಲ - NAMMA SMARAKA DATTU YOJANE

ಪ್ರವಾಸೋದ್ಯಮವನ್ನು ಉತ್ತೇಜಿಸಿ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಕರ್ನಾಟಕ ಸರ್ಕಾರವು "ನಮ್ಮ ಸ್ಮಾರಕ ದತ್ತು ಯೋಜನೆ" ಯನ್ನು ಪ್ರಾರಂಭಿಸಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಅವರು ತಿಳಿಸಿದ್ದಾರೆ.

H K PATIL BELAGAVI WINTER SESSION 2024 BELAGAVI  ನಮ್ಮ ಸ್ಮಾರಕ ದತ್ತು ಯೋಜನೆ
ವಿಧಾನಪರಿಷತ್​​ನಲ್ಲಿ ಸಚಿವ ಎಚ್.ಕೆ. ಪಾಟೀಲ. (ETV Bharat)
author img

By ETV Bharat Karnataka Team

Published : Dec 14, 2024, 11:40 AM IST

ಬೆಳಗಾವಿ: "ಕರ್ನಾಟಕ ರಾಜ್ಯದಲ್ಲಿ 25 ಸಾವಿರ ಪಾರಂಪರಿಕ ತಾಣಗಳ ಪೈಕಿ 810 ತಾಣಗಳನ್ನು ಮಾತ್ರ ಸಂರಕ್ಷಿಸಲು ಸಾಧ್ಯವಾಗಿದೆ. ಉಳ್ಳವರ ಸಹಕಾರ ಮತ್ತು ಸಾಮುದಾಯಿಕ ಸಹಕಾರದಿಂದ ಪಾರಂಪರಿಕ ತಾಣಗಳನ್ನು ಅಭಿವೃದ್ಧಿಪಡಿಸಲು ಸಾಧ್ಯ. ಆದ್ದರಿಂದ ಕರ್ನಾಟಕ ಸರ್ಕಾರವು "ನಮ್ಮ ಸ್ಮಾರಕ ದತ್ತು ಯೋಜನೆಯನ್ನು ಪ್ರಾರಂಭಿಸಿದೆ ಮತ್ತು ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ" ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ವಿಧಾನಪರಿಷತ್​​ನಲ್ಲಿ ಬಿಜೆಪಿ ಸದಸ್ಯ ಹಣಮಂತ ನಿರಾಣಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, "ಪ್ರವಾಸೋದ್ಯಮವನ್ನು ಉತ್ತೇಜಿಸಿ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ವಿಜಯಪುರ ಪೂರ್ಣ ಜಿಲ್ಲೆಯನ್ನು ಹಾಗೂ ಬಾಗಲಕೋಟೆ ಜಿಲ್ಲೆಯ ಐಹೊಳೆ, ಬಾದಾಮಿ, ಪಟ್ಟದಕಲ್ಲು, ಕೂಡಲಸಂಗಮ, ಬೀಳಗಿ ತಾಣಗಳನ್ನು ಆದ್ಯತಾ ಪ್ರವಾಸಿ ತಾಣಗಳಾಗಿ ಗುರುತಿಸಿ, ಈ ತಾಣಗಳ ತಾಲೂಕುಗಳಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಖಾಸಗಿ ಹೂಡಿಕೆದಾರರಿಗೆ ಸಹಾಯಧನ, ರಿಯಾಯಿತಿ ಮತ್ತು ಉತ್ತೇಜನಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿತ್ತು ಎಂದು ತಿಳಿಸಿದರು.

ಹಿನ್ನೀರಿನಲ್ಲಿರುವ ಪಕ್ಷಿಧಾಮ ಪ್ರಮುಖ ಪ್ರೇಕ್ಷಣೀಯ ಸ್ಥಳಗಳು: ಬಾಗಲಕೋಟೆ ಮತ್ತು ವಿಜಯಪುರ ಅವಳಿ ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳಾದ ಬದಾಮಿ, ಬನಶಂಕರಿ, ಐಹೂಳೆ, ಪಟ್ಟದಕಲ್ಲು, ಗೋಲಗುಂಬಜ್, ಶಿವನ ಮಂದಿರ, ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿರುವ ಪಕ್ಷಿಧಾಮ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಾಗಿವೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಗುಹಾಂತರ ದೇವಾಲಯ, ಐಹೊಳೆ ದುರ್ಗಾ ದೇವಾಲಯ ಸಂಕಿರ್ಣ ಮತ್ತು ವಿಶ್ವ ಪರಂಪರೆ ಸ್ಮಾರಕ ಪಟ್ಟದಕಲ್ಲು ದೇವಾಲಯಗಳ ಸಮೂಹ ಹಾಗೂ ವಿಜಯಪುರ ಜಿಲ್ಲೆಯ ಗೋಲಗುಂಬಜ್, ಈ ಸ್ಥಳಗಳ ಸ್ಮಾರಕಗಳ ನಿರ್ವಹಣೆ ಹಾಗೂ ಉಸ್ತುವಾರಿಯನ್ನು ಭಾರತೀಯ ಪುರಾತತ್ವ ಸಂರಕ್ಷಣಾ (ASI) ರವರ ವ್ಯಾಪ್ತಿಗೆ ಒಳಪಡುತ್ತದೆ.

ಬನಶಂಕರಿ ದೇವಾಲಯವು ಶ್ರೀ ಬನಶಂಕರಿ ದೇವಸ್ಥಾನ ಟ್ರಸ್ಟ್ ಸಮಿತಿ ಅವರ ಹಾಗೂ ವಿಜಯಪುರ ಜಿಲ್ಲೆಯ ಶಿವನ ಮಂದಿರವು ಖಾಸಗಿ ಟ್ರಸ್ಟ್​ನವರ ಅಧೀನದಲ್ಲಿರುತ್ತದೆ. ಆಲಮಟ್ಟಿ ಹಿನ್ನೀರಿನಲ್ಲಿರುವ ಪಕ್ಷಿ ಮೀಸಲು ಧಾಮವು ಅರಣ್ಯ ಇಲಾಖೆ ಅವರ ಅಧೀನದಲ್ಲಿರುತ್ತದೆ. ಆದ್ದರಿಂದ, ಪಕ್ಷಿ ತಾಣಗಳನ್ನು ನಿರ್ಮಿಸುವುದು ಇಲಾಖೆಯ ವ್ಯಾಪ್ತಿಯಲ್ಲಿರುವುದಿಲ್ಲ. ಆದರೂ ಅರಣ್ಯ ಇಲಾಖೆ ಜೊತೆಗೆ ಸಮಾಲೋಚಿಸಿ ಪಕ್ಷಿಧಾಮ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಪ್ರಸ್ತುತ, ಜಾರಿಗೆ ತಂದಿರುವ 2024 - 29ರ ನೂತನ ಕರ್ನಾಟಕ ಪ್ರವಾಸೋದ್ಯಮ ನೀತಿಯಲ್ಲಿ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರವಾಸೋದ್ಯಮ ಕ್ಷೇತ್ರದ ಯೋಜನೆಗಳಲ್ಲಿ ಹೂಡಿಕೆ ಮಾಡಲು ಮುಂದೆ ಬರುವ ಖಾಸಗಿ ಉದ್ಯಮಿಗಳಿಗೆ ಶೇ.5 ರಷ್ಟು ಹೆಚ್ಚುವರಿ ಸಹಾಯಧನ ಸೌಲಭ್ಯಗಳನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಇದಲ್ಲದೇ, ಈ ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳನ್ನು ನೂತನ ಆದ್ಯತಾ ಪ್ರವಾಸಿ ತಾಣಗಳಾಗಿ ಗುರುತಿಸಲು ಕ್ರಮವಹಿಸಲಾಗುವುದು ಎಂದು ಎಚ್.ಕೆ.ಪಾಟೀಲ ತಿಳಿಸಿದರು.

ಇದನ್ನೂ ಓದಿ: ನರ್ಸಿಂಗ್ ಕಾಲೇಜುಗಳಲ್ಲಿ ಹೆಚ್ಚುವರಿ ಶುಲ್ಕ ಆಕ್ಷೇಪಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.