ETV Bharat / state

ಆಧುನಿಕ ಜೀವನಶೈಲಿಯ ಸಮಸ್ಯೆಗಳಿಗೆ ನ್ಯಾನೋ ಟೆಕ್ನಾಲಜಿಯಿಂದ ಪರಿಹಾರ: ಸಿಎಂ - Bengaluru India Nano

ಆಧುನಿಕ ಜೀವನಶೈಲಿಯಿಂದ ಉಂಟಾಗುವ ಸಮಸ್ಯೆಗಳಿಗೆ ನ್ಯಾನೋ ಟೆಕ್ನಾಲಜಿಯಿಂದ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

cm siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Aug 2, 2024, 8:46 PM IST

ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು: ಆಹಾರ ಭದ್ರತೆ, ಇಂಧನ ಸುರಕ್ಷತೆ, ಶುದ್ಧ ಜಲ, ಮೂಲಸೌಕರ್ಯ, ಆರೋಗ್ಯ ಸೇವೆ, ಮೆಡಿಸಿನ್‌, ತ್ಯಾಜ್ಯವಸ್ತುಗಳ ನಿರ್ವಹಣೆ, ಪರಿಸರ ನಿರ್ವಹಣೆಯಂತಹ ಕ್ಷೇತ್ರಗಳಲ್ಲಿ ಎದುರಾಗುವ ಸವಾಲುಗಳಿಗೆ ವಿನೂತನ ನ್ಯಾನೋ ಟೆಕ್ನಾಲಜಿ ಆಧರಿತ ಪರಿಹಾರಗಳನ್ನು ಕಂಡುಕೊಳ್ಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ದೇಶದ ಪ್ರತಿಷ್ಠಿತ ಹಾಗೂ ಅತಿದೊಡ್ಡ ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನವನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು, ಹೆಚ್ಚುತ್ತಿರುವ ನಗರೀಕರಣ, ಜನಸಂಖ್ಯೆ ಹೆಚ್ಚಳ ಹಾಗೂ ಬದಲಾಗುತ್ತಿರುವ ಜೀವನ ಶೈಲಿಯಿಂದ ಮುಂದಿನ ದಿನಗಳಲ್ಲಿ ಈ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಗಳಿದ್ದು, ಇವುಗಳಿಗೆ ನ್ಯಾನೋ ಟೆಕ್ನಾಲಜಿ ಆಧಾರಿತ ಪರಿಹಾರಗಳನ್ನು ಸಂಶೋಧಿಸಬೇಕಿದೆ. ಈ ನಿಟ್ಟಿನಲ್ಲಿ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳು ಹೆಚ್ಚು ಮತುವರ್ಜಿ ವಹಿಸಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದು ಅವರು ಹೇಳಿದರು.

ದೇಶ, ವಿದೇಶಗಳ ಖ್ಯಾತ ವಿಜ್ಞಾನಿಗಳು, ತಂತ್ರಜ್ಞಾನಿಗಳು, ತಾಂತ್ರಿಕ ಚಿಂತಕರು, ಉದ್ಯಮಗಳ ಖ್ಯಾತನಾಮರೊಂದಿಗೆ ಈ ಪ್ರತಿಷ್ಠಿತ ನ್ಯಾನೋ ಟೆಕ್ನಾಲಜಿ ಸಮಾವೇಶದಲ್ಲಿ ಭಾಗವಹಿಸಲು ನನಗೆ ಹೆಮ್ಮೆ ಎನಿಸುತ್ತಿದೆ. ಪ್ರತಿಷ್ಠಿತ ಪ್ರೊ.ಸಿ.ಎನ್.ಆರ್.ರಾವ್‌ ಬೆಂಗಳೂರು ಇಂಡಿಯಾ ನ್ಯಾನೋ ಸೈನ್ಸ್‌ ಪ್ರಶಸ್ತಿಗೆ ಭಾಜನರಾಗಿರುವ ಪ್ರೊ. ಅರಿಂದಮ್‌ ಘೋಷ್‌ ಅವರಿಗೆ ಕೂಡ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ರಾಜ್ಯದಲ್ಲಿ ನಡೆಯುವ ವಿಜ್ಞಾನ ಮತ್ತು ತಂತ್ರಜ್ಞಾನ ಸಮಾವೇಶಗಳಲ್ಲಿ ಭಾಗವಹಿಸುವುದು ನನಗೆ ಯಾವತ್ತೂ ಸ್ಪೂರ್ತಿದಾಯಕ ಹಾಗೂ ಸಂತಸದ ವಿಚಾರವಾಗಿದೆ. ಕರ್ನಾಟಕ ತನ್ನ ಶ್ರೀಮಂತ ಸಾಂಸ್ಕೃತಿಕ ಪರಂಪರೆಗಳಿಗೆ ಮಾತ್ರವಲ್ಲದೆ, ಶೈಕ್ಷಣಿಕ ಮತ್ತು ಸಂಶೋಧನೆ ಚಟುವಟಿಕೆಗಳಿಗೆ ಭದ್ರ ತಳಹದಿಯನ್ನು ಕಲ್ಪಿಸಿ ಹೆಸರುವಾಸಿಯಾಗಿದೆ. ತಾಂತ್ರಿಕತೆ ಆಧಾರಿತ ಅನ್ವೇಷಣೆ ಕ್ಷೇತ್ರದಲ್ಲಿ ನಮ್ಮ ರಾಜ್ಯ ಎಂದಿಗೂ ಮುಂಚೂಣಿಯಲ್ಲಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಐಐಎಸ್ಸಿ, ಜೆಎನ್‌ಸಿಎಎಸ್‌ಆರ್‌, ಎನ್‌ಸಿಬಿಎಸ್‌, ಸಿಇಎನ್‌ಎಸ್​ನಂತಹ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ನೆರವಿನೊಂದಿಗೆ, ಬೆಂಗಳೂರು ದೇಶದ ನ್ಯಾನೋ ಟೆಕ್‌ ಹಬ್‌ ಆಗಿ ರೂಪುಗೊಳ್ಳುವ ಪೂರ್ಣ ವಿಶ್ವಾಸ ನನಗಿದೆ. ಮುಂಬರುವ ವರ್ಷಗಳಲ್ಲಿ ಬೆಂಗಳೂರು ಈ ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಪ್ರಮುಖ ಪಾತ್ರವನ್ನು ನಿಭಾಯಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

cm siddaramaih
ಪ್ರೊ.ಸಿ.ಎನ್.ಆರ್.ರಾವ್‌ ಅವರನ್ನು ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ (ETV Bharat)

ಈ ಹೊಸ ತಾಂತ್ರಿಕ ಕ್ಷೇತ್ರದ ಸಾಧ್ಯತೆಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಅಂತಾರಾಷ್ಟ್ರೀಯ ಸಂಶೋಧನಾ ಸಹಭಾಗಿತ್ವದ ಅತ್ಯಗತ್ಯವಿದೆ. ಇದಕ್ಕಾಗಿ ಮಾಹಿತಿಗಳ ಹಾಗೂ ತಾಂತ್ರಿಕತೆಗಳ ಪರಸ್ಪರ ವಿನಿಮಯ, ಈ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳು, ಅವುಗಳ ಪರಿಹಾರ ಸಾಧ್ಯತೆಗಳು ಮತ್ತು ಅಂತಿಮವಾಗಿ ಸಮಾಜದ ಶ್ರೇಯೋಭಿವೃದ್ಧಿಗೆ ಪೂರಕವಾಗಿ ಪ್ರತಿಭೆಗಳನ್ನು ಬೆಳೆಸುವ ಅಗತ್ಯಗಳು ಕಂಡುಬರುತ್ತಿದೆ. ಅದಕ್ಕೆ ಪೂರಕವಾಗಿ ಇಂತಹ ಅಂತಾರಾಷ್ಟ್ರೀಯ ಸಮಾವೇಶಗಳು ಪರಸ್ಪರ ಸಂಪರ್ಕ ಸಾಧಿಸಲು, ಜ್ಞಾನವನ್ನು ಹಂಚಿಕೊಳ್ಳಲು, ತಾಂತ್ರಿಕತೆಗಳ ವಿನಿಮಯಕ್ಕೆ, ಕೌಶಲ್ಯ ಅಭಿವೃದ್ಧಿಗೆ ಹಾಗೂ ಉದ್ಯಮ ಸಹಭಾಗಿತ್ವಕ್ಕೆ ಸಾಕಷ್ಟು ಅವಕಾಶವನ್ನು ಕಲ್ಪಿಸಲಿದೆ.

ಈ ಕ್ಷೇತ್ರದ ತಜ್ಞರ ಮತ್ತು ದಿಗ್ಗಜರ ಸಹಕಾರ ಮತ್ತು ಸಹಭಾಗಿತ್ವದ ಸದುಪಯೋಗಪಡೆದುಕೊಂಡು ನಮ್ಮ ರಾಜ್ಯದಲ್ಲಿ ಯುವ ಉದ್ಯಮಿಗಳಿಗೆ ಹೊಸ ಉದ್ಯಮಗಳನ್ನು ಆರಂಭಿಸಲು ಆಹ್ವಾನಿಸುತ್ತೇನೆ. ಕರ್ನಾಟಕದಲ್ಲಿ ಈ ವಿನೂತನ ಉದ್ಯಮ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲು ಸಾಧ್ಯವಿರುವ ಸಂಪೂರ್ಣ ಸಹಕಾರವನ್ನು ನಮ್ಮ ಸರ್ಕಾರ ಒದಗಿಸಲಿದೆ. ಮುಖ್ಯವಾಗಿ ಸಮಾವೇಶವನ್ನು 2007ರಿಂದ ನಿರಂತರವಾಗಿ ಆಯೋಜಿಸಿಕೊಂಡು ಬರಲು ಮಾರ್ಗದರ್ಶನ ನೀಡುತ್ತಿರುವ ಭಾರತ ರತ್ನ ಪ್ರೊ.ಸಿ.ಎನ್.ಆರ್.ರಾವ್ ಅವರಿಗೆ ಆಭಾರಿಯಾಗಿದ್ದೇನೆ ಎಂದು ಸಿಎಂ ಹೇಳಿದರು.

ಇದನ್ನೂ ಓದಿ: ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನದಲ್ಲಿ ಗಮನ ಸೆಳೆದ ಸ್ಮಾರ್ಟ್ ಕಿಟಕಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.