ETV Bharat / state

ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ: ಉಡುಪಿ ಜಿ.‍ಪಂಗೆ ರಾಷ್ಟ್ರೀಯ ಪ್ರಶಸ್ತಿ - UDUPI ZILLA PANCHAYAT

ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ವಿಶೇಷ ಸಾಧನೆಗಾಗಿ ಕೇಂದ್ರ ಸರ್ಕಾರದ ಪಂಚಾಯತ್‌ರಾಜ್‌ ಸಚಿವಾಲಯ ಕೊಡಮಾಡುವ ರಾಷ್ಟ್ರೀಯ ಪ್ರಶಸ್ತಿ ಉಡುಪಿ ಜಿಲ್ಲಾ ಪಂಚಾಯಿತಿಗೆ ಸಿಕ್ಕಿದೆ.

ಉಡುಪಿ ಜಿ.‍ಪಂಗೆ ರಾಷ್ಟ್ರೀಯ ಪ್ರಶಸ್ತಿ
ಉಡುಪಿ ಜಿ.‍ಪಂಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ (ETV Bharat)
author img

By ETV Bharat Karnataka Team

Published : 3 hours ago

ಉಡುಪಿ: ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು 'ರಾಷ್ಟ್ರೀಯ ನಾನಾಜಿ ದೇಶ್‌ಮುಖ್ ಸರ್ವೋತ್ತಮ್ ಪಂಚಾಯತ್ ಸತತ್ ವಿಕಾಸ್ ಪ್ರಶಸ್ತಿ'ಯನ್ನು ಬುಧವಾರ ನವದೆಹಲಿಯಲ್ಲಿ ಸ್ವೀಕರಿಸಿದರು.

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್‌ ಬಾಯಲ್‌ ಮತ್ತು ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್​ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಪ್ರಶಸ್ತಿಯು ಪ್ರಶಂಸಾ ಪತ್ರಗಳೊಂದಿಗೆ ಎರಡು ಕೋಟಿ ರೂ. ನಗದು ಬಹುಮಾನವನ್ನು ಒಳಗೊಂಡಿದೆ.

ಉಡುಪಿ ಜಿಲ್ಲಾ ಪಂಚಾಯಿತಿ ಸಂಪನ್ಮೂಲಗಳ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಅಧಿಕ ತೆರಿಗೆ ವಸೂಲಿ, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ, ಗುಣಮಟ್ಟ ಪರಿಶೀಲನೆ, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆ, ಶಿಶು, ಗರ್ಭಿಣಿ ಮರಣ ಸಂಭವಿಸದಂತೆ ವಿಶೇಷ ನಿಗಾ, ಅಪೌಷ್ಠಿಕತೆ ನಿವಾರಣೆಗೆ ಕ್ರಮ, ಆನ್‌ಲೈನ್ ತೆರಿಗೆ ಪಾವತಿಗೆ ಕ್ರಮ, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ಕೋಚಿಂಗ್‌ ಮೂಲಕ ಎಸ್​ಎಸ್​ಎಲ್​ಲಿ ಹಾಗೂ ಪಿಯುಸಿಯಲ್ಲಿ ಅಗ್ರಸ್ಥಾನ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿಯಲ್ಲಿ ಕೃಷಿ, ಗ್ರಾಮೀಣ ಭಾಗದಲ್ಲಿ ತ್ಯಾಜ್ಯಗಳ ನಿರ್ವಹಣೆಗೆ ಎಂಆರ್‌ಎಫ್‌ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೋರಿದ ಉತ್ತಮ ಕಾರ್ಯಗಳಿಗಾಗಿ ಈ ಪ್ರಶಸ್ತಿ ಲಭಿಸಿದೆ.

ಕೊಡಗಿನ ಗಾಳಿಬೀಡು ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಪ್ರಶಸ್ತಿ: ಮತ್ತೊಂದೆಡೆ, ಕೊಡಗು ಜಿಲ್ಲೆಯ ಗಾಳಿಬೀಡು ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ಒಂದು ಕೋಟಿ ರೂ. ನಗದು ಬಹುಮಾನ ಒಳಗೊಂಡಿದೆ.

ಕಾರ್ಕಳ ತಾಲೂಕು ಸಾಣೂರು ಗ್ರಾ.ಪಂ, ಕಾಪು ತಾಲೂಕಿನ ಕುರ್ಕಾಲು, ಇನ್ನಂಜೆ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಿಡಿಒಗಳೂ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿನ 50 ಗ್ರಾಪಂ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೆ: ಸಚಿವ ಭೈರತಿ ಸುರೇಶ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.