ಬೆಂಗಳೂರು: ಹಾಸನ ಪೆನ್ಡ್ರೈವ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ.
ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಂಬಂಧ ಈಗಾಗಲೇ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿದೆ. ನಿನ್ನೆಯಷ್ಟೇ ಐವರು ಸಂತ್ರಸ್ತೆಯರ ಹೇಳಿಕೆ ದಾಖಲಿಸಿಕೊಳ್ಳಲಾಗಿತ್ತು. ಇದೀಗ ಸುಮೊಟೊ ಪ್ರಕರಣ ದಾಖಲಿಸಿಕೊಂಡಿದೆ.
ಡಿಜಿಪಿಗೆ ಪತ್ರ ಬರೆದ ಮಹಿಳಾ ಆಯೋಗ: ಹಾಸನ ಲೋಕಸಭಾಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಆಶ್ಲೀಲ ವಿಡಿಯೋ ಹರಿದಾಡುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಇನ್ನೂ ಮೂರು ದಿನಗಳಲ್ಲಿ ತನಿಖೆ ಪ್ರಗತಿ ಹಾಗೂ ಇದಕ್ಕೆ ಪೂರಕವಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ನೀಡಬೇಕೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಆಯೋಗ ಪತ್ರ ಬರೆದಿದೆ.
ಇದನ್ನೂ ಓದಿ: ಹಾಸನ ವಿಡಿಯೋ ಪ್ರಕರಣ: ಜೆಡಿಎಸ್ನಿಂದ ಪ್ರಜ್ವಲ್ ರೇವಣ್ಣ ಅಮಾನತು - JDS Suspends Prajwal Revanna