ETV Bharat / state

ಕರ್ನಾಟಕದ ಎಲ್ಲ 28 ಕ್ಷೇತ್ರಗಳಲ್ಲೂ ಎನ್​ಡಿಎ ಮೈತ್ರಿಕೂಟ ಜಯಭೇರಿ ಬಾರಿಸಲಿದೆ: ಗೋವಾ ಸಿಎಂ - Pramod Sawant - PRAMOD SAWANT

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಎನ್​ಡಿಎ ಮೈತ್ರಿಕೂಟ ಭರ್ಜರಿ ಜಯಭೇರಿ ಬಾರಿಸಲಿದೆ ಎಂದು ಗೋವಾ ಸಿಎಂ, ಬಿಜೆಪಿ ನಾಯಕ ಪ್ರಮೋದ್​ ಸಾವಂತ್​ ಹೇಳಿದರು.

nda-alliance-will-win-all-28-constituencies-of-karnataka-says-goa-cm-pramod-sawant
ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಲ್ಲೂ ಎನ್​ಡಿಎ ಮೈತ್ರಿಕೂಟ ಜಯಭೇರಿ ಬಾರಿಸಲಿದೆ: ಗೋವಾ ಸಿಎಂ
author img

By ETV Bharat Karnataka Team

Published : Apr 17, 2024, 9:49 PM IST

Updated : Apr 17, 2024, 10:59 PM IST

ಗೋವಾ ಸಿಎಂ ಪ್ರಮೋದ್​ ಸಾವಂತ್

ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿಯೂ ಎನ್​ಡಿಎ ಮೈತ್ರಿಕೂಟ ಭರ್ಜರಿ ಜಯಭೇರಿ ಬಾರಿಸಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ನಾಮಪತ್ರ ಸಲ್ಲಿಕೆಗೆ ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿಯವರ ಆಡಳಿತವನ್ನು ಜನತೆ ನೋಡಿದ್ದಾರೆ. ಈ ಬಾರಿ ಎನ್​ಡಿಎ ಮೈತ್ರಿಕೂಟ 400 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಬೆಳಗಾವಿಯಲ್ಲಿಯೂ ಬಿಜೆಪಿ ಅಭ್ಯರ್ಥಿ ಜಗದೀಶ್​ ಶೆಟ್ಟರ್ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

ಮಹಿಳಾ ಶಕ್ತಿಗಾಗಿ, ಯುವಶಕ್ತಿಗಾಗಿ ಹಾಗೂ ರೈತರ ಶಕ್ತಿಗಾಗಿ ಪ್ರಧಾನಿಯವರು ವಿಶೇಷವಾಗಿ ಬಲ ತುಂಬಿದ್ದಾರೆ. ಪ್ರಧಾನಿ ಮೋದಿಯವರು ಈ ಮೊದಲು ಏನು ಹೇಳಿದ್ದಾರೋ ಅದನ್ನು ಮಾಡಿ ತೋರಿಸಿದ್ದಾರೆ. ನುಡಿದಂತೆ ನಡೆದಿದ್ದಾರೆ. ಇದುವೇ ಸರಿಯಾದ ಸಮಯ. ಪ್ರಧಾನಿ ಮೋದಿಯವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದಾರೋ ಅದನ್ನು ಮುಂದಿನ 25 ವರ್ಷಗಳವರೆಗೆ ತೆಗೆದುಕೊಂಡು ಹೋಗಬೇಕೆಂದು ಕರ್ನಾಟಕದ ಜನತೆಗೆ ಕರೆ ನೀಡುತ್ತೇನೆ. ಕಾಂಗ್ರೆಸ್ ಸುಳ್ಳಿನ ಕಂತೆಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಭರವಸೆಗಳೊಂದಿಗೆ ಅಧಿಕಾರಕ್ಕೆ ಬಂದಿದೆ ಎಂದು ವಿರುದ್ಧ ವಾಗ್ದಾಳಿ ನಡೆಸಿದರು.

ಅಲ್ಲದೇ, ಸುಳ್ಳು ಭರವಸೆಗಳ ಮೂಲಕ ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಲೋಕಸಭಾ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಬೇಕು. ಕಾಂಗ್ರೆಸ್ ಪಕ್ಷ ಜನರ ವಿಶ್ವಾಸ ಕಳೆದುಕೊಂಡಿದೆ. ಕಾಂಗ್ರೆಸ್ ಪರಿವಾರವಾದ ಪಕ್ಷ. ಬಿಜೆಪಿ ರಾಷ್ಟ್ರೀಯವಾದದ ಪಕ್ಷ. ಪ್ರಧಾನಿ ಮೋದಿಯವರ ಮೇಲೆ ದೇಶದ ಎಲ್ಲ ಸಮುದಾಯದ ಜನರ ವಿಶ್ವಾಸ ಮೂಡಿದೆ. ನಾವು ಸಿಎಎ ತಂದಿದ್ದೇವೆ. ಒಂದು ದೇಶ, ಒಂದು ಚುನಾವಣೆಯನ್ನು ತರಲು ಮುಂದಾಗಿದ್ದೇವೆ ಎಂದರು.

ರಾಜ್ಯದ ಜನತೆ ಬಯಸಿದರೆ ಕರ್ನಾಟದಲ್ಲಿಯೂ ಕೂಡ ಡಬಲ್ ಇಂಜಿನ್​ ಸರ್ಕಾರ ಬರುತ್ತದೆ ಎಂದ ಪ್ರಮೋದ ಸಾವಂತ, ಲೋಕಸಭಾ ಚುನಾವಣೆ ನಂತರ ಬಹುಶಃ ರಾಜ್ಯ ಸರ್ಕಾರ ಬದಲಾಗಲಿದೆ ಎಂದು ಭವಿಷ್ಯ ನುಡಿದರು. ಹೈಕೋರ್ಟ್ ಆದೇಶದ ಮೇರೆಗೆ ಗೋವಾದಲ್ಲಿ ಮನೆಗಳನ್ನು ತೆರವು ಮಾಡಲಾಗಿದೆ. ಅವರಿಗೆ ಪರ್ಯಾಯ ಸ್ಥಳದಲ್ಲಿ ವಸತಿ ಕಲ್ಪಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಕರ್ನಾಟಕದ ಮುಖ್ಯಮಂತ್ರಿ ನನ್ನ ಜೊತೆಗೆ ಈ ಕುರಿತು ಮಾತನಾಡಿಲ್ಲ ಎಂದು ಪ್ರಮೋದ ಸಾವಂತ್ ತಿಳಿಸಿದರು.

ಇದನ್ನೂ ಓದಿ: ಜಗದೀಶ ಶೆಟ್ಟರ್ ನಾಮಪತ್ರ ಸಲ್ಲಿಕೆ: ಮಾಜಿ ಸಿಎಂ ಬಿಎಸ್​ವೈ ಸಾಥ್, ಬಿಜೆಪಿ ಬೃಹತ್ ಶಕ್ತಿ ಪ್ರದರ್ಶನ - Lok Sabha Election 2024

Last Updated : Apr 17, 2024, 10:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.