ETV Bharat / state

ಪ್ರಧಾನಿ ಮೋದಿ - ದೇವೇಗೌಡರ ಜೋಡಿ ರಾಜ್ಯಕ್ಕೆ ಒಳಿತು ಮಾಡಲಿದೆ: ಡಾ.ಸಿ.ಎನ್.ಮಂಜುನಾಥ್ - C N Manjunath - C N MANJUNATH

ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟವು 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದರಲ್ಲಿ ಅನುಮಾನ ಇಲ್ಲ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

manjunath
ಪ್ರಧಾನಿ ಮೋದಿ - ಹೆಚ್.ಡಿ.ದೇವೆಗೌಡರ ಜೋಡಿ ರಾಜ್ಯಕ್ಕೆ ಒಳಿತು ಮಾಡಲಿದೆ: ಡಾ.ಸಿ.ಎನ್.ಮಂಜುನಾಥ್
author img

By ETV Bharat Karnataka Team

Published : Apr 3, 2024, 7:06 AM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಜೋಡಿಯು ರಾಜ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಲಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹಾಲು ಜೇನಿನಂತೆ ಸಮ್ಮಿಳಿತವಾಗಿ ಕೆಲಸ ಮಾಡುತ್ತಿವೆ ಎಂದು ಮೈತ್ರಿಕೂಟದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ.

Meeting
ಜೆಡಿಎಸ್ ಸಭೆ

ಬೆಂಗಳೂರು ಸೆಂಟ್ರಲ್ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪಿ.ಸಿ. ಮೋಹನ್ ಅವರೊಂದಿಗೆ ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳಾ ಮೀಸಲು ಮಸೂದೆಯನ್ನು ಅಂದು ಪ್ರಧಾನಿ ಆಗಿದ್ದ ದೇವೇಗೌಡರು ಸಂಸತ್ತಿನಲ್ಲಿ ಮಂಡಿಸಿದರು. ಇಂದಿನ ಪ್ರಧಾನಿಗಳಾದ ಮೋದಿ ಅವರು ಅದೇ ಸಂಸತ್ತಿನಲ್ಲಿ ಮಸೂದೆಗೆ ಅಂಗೀಕಾರ ಪಡೆದು ಜಾರಿಗೂ ತಂದರು. ಇಂತಹ ಜೋಡಿ ದೇಶ ಹಾಗೂ ರಾಜ್ಯಕ್ಕೆ ಒಳ್ಳೆಯದು. ಇವರಿಬ್ಬರ ಮಾರ್ಗದರ್ಶನದಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಗೀತಾ ಶಿವರಾಜ್ ಕುಮಾರ್ ಗೆಲುವು ಸಮೀಪಿಸುತ್ತಿದೆ: ಆಯನೂರು ಮಂಜುನಾಥ್ - Ayanur Manjunath

ಮೋದಿ ಪ್ರಭಾವಶಾಲಿ ನಾಯಕರು. ಅವರ ನಾಯಕತ್ವದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಅತ್ಯಂತ ಬಲಿಷ್ಠ ದೇಶವಾಗಿ ಹೊರಹೊಮ್ಮಿದೆ. ಇಡೀ ಜಗತ್ತಿನಲ್ಲಿ ಭಾರತಕ್ಕೆ ಬಹು ಮಹತ್ವದ ಸ್ಥಾನ ಲಭಿಸಿದೆ ಎಂದ ಅವರು, ಎನ್​ಡಿಎ ಮೈತ್ರಿಕೂಟವು ದೇಶಾದ್ಯಂತ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದರಲ್ಲಿ ಅನುಮಾನ ಇಲ್ಲ. ಆ 400 ಸಂಸದರಲ್ಲಿ ನಾನೂ ಇರುತ್ತೇನೆ, ಪಿಸಿ ಮೋಹನ್ ಅವರೂ ಇರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಸದ ಪಿಸಿ ಮೋಹನ್ ಅವರು ಮಾತನಾಡಿ, ಕರ್ನಾಟಕದ ಆಮೂಲಾಗ್ರ ಅಭಿವೃದ್ಧಿಗೆ ಜೆಡಿಎಸ್ - ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನತೆಗೆ ನಾವೆಲ್ಲರೂ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಕೆ.ಎ. ತಿಪ್ಪೇಸ್ವಾಮಿ, ಟಿ.ಎ. ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ. ರಮೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ: ಬಿಜೆಪಿಗೆ ಎಚ್ಚರಿಸಿದ ಸಿಎಂ - Siddaramayya

ETV Bharat Logo

Copyright © 2025 Ushodaya Enterprises Pvt. Ltd., All Rights Reserved.