ETV Bharat / state

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಎನ್​ಡಿಎ ಅಭ್ಯರ್ಥಿ ಎ ಪಿ ರಂಗನಾಥ್ ನಾಮಪತ್ರ ಸಲ್ಲಿಕೆ

ಎರಡು ಪಕ್ಷದ ನಾಯಕರು ರಂಗನಾಥ್ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಎ ಪಿ ರಂಗನಾಥ್
ಎ ಪಿ ರಂಗನಾಥ್
author img

By ETV Bharat Karnataka Team

Published : Jan 29, 2024, 3:38 PM IST

ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ

ಬೆಂಗಳೂರು : ವಿಧಾನ ಪರಿಷತ್​ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ - ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ ಪಿ ರಂಗನಾಥ್ ಅವರು ಇಂದು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರು, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥ ನಾರಾಯಣ್ ಅವರು, ಬಿಜೆಪಿ ಕೋರ್ ಕಮಿಟಿ ಅಧ್ಯಕ್ಷರಾದ ಜಿ. ಟಿ ದೇವೇಗೌಡರು ಮತ್ತಿತರ ನಾಯಕರು ಉಪಸ್ಥಿತರಿದ್ದರು.

ನಂತರ ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಎರಡೂ ಪಕ್ಷದ ನಾಯಕರು ರಂಗನಾಥ್ ಅವರನ್ನು ಆಯ್ಕೆ ಮಾಡಿದ್ದಾರೆ. ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ರಂಗನಾಥ್ ಅವರು ಅಶ್ವತ್ಥ ನಾರಾಯಣ ಹಾಗೂ ಜಿ. ಟಿ ದೇವೇಗೌಡರ ಆಶೀರ್ವಾದದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದು ಮುಂದಿನ ರಾಜಕೀಯ ತಿರುವು ಪಡೆದುಕೊಳ್ಳಲಿದೆ. ಶಿಕ್ಷಕರಿಗೆ ಮನವಿ ಮಾಡ್ತೇವೆ. ಈ ಸರ್ಕಾರ ಶಿಕ್ಷಣ ಇಲಾಖೆಯಲ್ಲಿರುವ ಲೋಪದೋಷಗಳನ್ನು ಪರಿಹರಿಸುವಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ. ಆಡಳಿತ ಪಕ್ಷದ ಶಾಸಕ ಗಣರಾಜ್ಯೋತ್ಸವ ಸಂದರ್ಭದಲ್ಲಿ ಮಹಿಳಾ ಶಿಕ್ಷಕಿ ಜೊತೆ ಹೇಗೆ ವರ್ತಿಸಿದ್ದಾರೆ ಎಂದು ನೋಡಿದ್ದೇವೆ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. 2006 -7ರಲ್ಲಿ ನಡೆದ ಪರ್ವ ಮತ್ತೆ ರಾಜ್ಯದಲ್ಲಿ ಆರಂಭವಾಗಲಿದೆ. ಕರ್ನಾಟಕದ ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ: ರಾಷ್ಟ್ರಪತಿಯವರಿಗೆ ಏಕವಚನ ಬಳಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್​ಡಿಕೆ, ಅವರನ್ನು ಸಂವಿಧಾನ ತಜ್ಞ ಅಂತಾರೆ. ಶೋಷಿತ ವರ್ಗದವರ ಸಮಾವೇಶದಲ್ಲಿ ಶೋಷಿತ ವರ್ಗದ ರಾಷ್ಟ್ರಪತಿಗಳಿಗೆ ಏಕವಚನ ಬಳಕೆ ಮಾಡಿದ್ದಾರೆ. ಹಳ್ಳಿಯ ಭಾಷೆಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ್ದೇನೆ ಎಂದಿದ್ದಾರೆ. ಯಾವ ಹಳ್ಳಿ ಭಾಷೆ? ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲು ಅವಕಾಶ ನೀಡಿಲ್ಲ. ಇದು ಹಿಂದೂ ವಿರೋಧಿ ನೀತಿಯಲ್ಲ. ಇದು ಸಮಾಜವನ್ನು ಒಡೆಯುವ ನೀತಿ ಎಂದು ಕಿಡಿ ಕಾರಿದ ಅವರು, ಮಂಡ್ಯ ವಿಚಾರ ಅಲ್ಲೇ ಹೋಗಿ ಮಾತನಾಡುತ್ತೇನೆ ಎಂದಿದ್ದಾರೆ.

ರಂಗನಾಥ್ ಅವರಿಗೆ ಗೆಲುವು ಖಚಿತ: ಮಾಜಿ ಡಿಸಿಎಂ ಡಾ. ಸಿ ಎನ್ ಅಶ್ವತ್ಥನಾರಾಯಣ ಮಾತನಾಡಿ, ಇವತ್ತು ಮೈತ್ರಿ ಅಭ್ಯರ್ಥಿಯಾಗಿ ರಂಗನಾಥ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಒಮ್ಮತದ ಅಭ್ಯರ್ಥಿಯಾಗಿರುವ ರಂಗನಾಥ್ ಅವರಿಗೆ ಗೆಲುವು ಖಚಿತ. ಹಿಂದೆ ಪುಟ್ಟಣ್ಣ ಅವರು ಪಲಾಯನ ಮಾಡಿದ್ದಾರೆ. ಶಿಕ್ಷಕರ ಕ್ಷೇತ್ರ ಬೇಡ ಅಂತಾ ಹೋದವರು ಪುಟ್ಟಣ್ಣ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : 'ಸಿದ್ದರಾಮಯ್ಯಗೆ ಆಚಾರ ಹತ್ತಿರಕ್ಕೂ ಸುಳಿಯದ ವಿಚಾರ': ಸಿಎಂ ವಜಾಗೆ ಹೆಚ್​ಡಿಕೆ ಆಗ್ರಹಿಸಿದ್ದೇಕೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.