ETV Bharat / state

ಕಳೆದ ಎರಡು ಬಾರಿ ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದೆ: ನಿಖಿಲ್ ಕುಮಾರಸ್ವಾಮಿ

ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಉಪಚುನಾವಣೆ ಕುರಿತು ಮಾತನಾಡಿದ್ದಾರೆ. ಕಳೆದ ಎರಡು ಬಾರಿ ಕುತಂತ್ರದಿಂದ ಸೋಲು ಅನುಭವಿಸಿದೆ ಎಂದಿದ್ದಾರೆ.

nikhil-kumaraswamy
ನಿಖಿಲ್ ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Nov 14, 2024, 8:19 PM IST

ರಾಮನಗರ : ಕಳೆದ ಎರಡು ಬಾರಿ ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದೆ. ಈಗಲೂ ಚುನಾವಣೆಗೆ ನಿಲ್ಲುವ ಭಾವನೆ ನನ್ನಲ್ಲಿ ಇರಲಿಲ್ಲ. ಆದರೆ, ಕೊನೆ ಕ್ಷಣದಲ್ಲಿ ಆದ ರಾಜಕೀಯ ಪರಿಸ್ಥಿತಿಗೆ ಕಾರ್ಯಕರ್ತರ ಆತಂಕ, ಗೊಂದಲಕ್ಕೆ ಪರಿಹಾರ ಕೊಡಬೇಕಿತ್ತು. ಹಾಗಾಗಿ ಸ್ಪರ್ಧೆ ಅನಿವಾರ್ಯ ಆಯ್ತು ಎಂದು ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಂದು ಚನ್ನಪಟ್ಟಣ NDA ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ನಿನ್ನೆ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದೆ. ಇದರಲ್ಲಿ ಚನ್ನಪಟ್ಟಣ ಕ್ಷೇತ್ರ ಬಹಳ ಮಹತ್ವ ಪಡೆದುಕೊಂಡಿತ್ತು. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಚನ್ನಪಟ್ಟಣ ಫಲಿತಾಂಶದ ಬಗ್ಗೆ ಕುತೂಹಲ ಇದೆ. ಈ ಉಪ ಚುನಾವಣೆ ರಾಜ್ಯದ ಇತಿಹಾಸದ ಪುಟದಲ್ಲಿ ಉಳಿಯುತ್ತೆ. ಈ ಉಪಚುನಾವಣೆ ನಿಖಿಲ್ ಕುಮಾರಸ್ವಾಮಿ ಉಪಚುನಾವಣೆ ಆಗಿರಲಿಲ್ಲ. ಎರಡೂ ಪಕ್ಷದ, ಕಾರ್ಯಕರ್ತರ ಚುನಾವಣೆ ಆಗಿತ್ತು ಎಂದು ಹೇಳಿದರು.

ಕಳೆದ ಎರಡು ಬಾರಿ ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದೆ: ನಿಖಿಲ್ ಕುಮಾರಸ್ವಾಮಿ (ETV Bharat)

ಎರಡು ಬಾರಿ ಕುತಂತ್ರದಿಂದ ಸೋಲು - ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾಜಿ ಅವರು ಸ್ಪಷ್ಟ ಸಂದೇಶ ಕೊಟ್ಟಿದ್ರು. ಯುವಕನ ಪರವಾಗಿ ನಡ್ಡಾ ಅವರು ಮಾತನಾಡಿದ್ದಕ್ಕೆ ಧನ್ಯವಾದ ತಿಳಿಸುತ್ತೇನೆ. ಎರಡೂ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಚುನಾವಣೆ ಮಾಡಿದ್ದಾರೆ. ಕಳೆದ 18 ದಿನಗಳ ಹಿಂದೆ ಎನ್​ಡಿಎ ಅಭ್ಯರ್ಥಿ ಯಾರು ಆಗಬೇಕು ಎಂಬ ಪ್ರಶ್ನೆ ಉದ್ಭವ ಆಯ್ತು. ಆಗ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಕರೆದು ನನ್ನ ಹೆಸರು ಘೋಷಣೆ ಮಾಡಿದ್ರು. ಕಳೆದ ಎರಡು ಬಾರಿ ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದೆ ಎಂದು ತಿಳಿಸಿದರು.

ನನಗೆ ಜನ ಆಶೀರ್ವಾದ ಮಾಡಿದ್ದಾರೆ - ಕಳೆದ 18 ದಿನಗಳಿಂದ ಸರಿಯಾಗಿ ನಿದ್ದೆ ಮಾಡಿಲ್ಲ. ಮುಖಂಡರು, ಕಾರ್ಯಕರ್ತರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಈ ಚುನಾವಣೆಯಲ್ಲಿ ನನಗೆ ಪೂರಕವಾಗಿ ಜನ ಆಶೀರ್ವಾದ ಮಾಡಿದ್ದಾರೆ. ಹಿರಿಯ ನಾಗರೀಕರು, ಯುವಕರು ಹೆಚ್ಚು ಬೆಂಬಲ ನೀಡಿದ್ದಾರೆ. ಹಾಗಾಗಿ, ನಿಮ್ಮ ಜೊತೆಯಲ್ಲಿ ನಾನು ಶಾಶ್ವತವಾಗಿ ಇರುತ್ತೇನೆ ಎಂದು ಹೇಳಿದರು.

ಈ ಚುನಾವಣೆ ನನಗೆ ಅಗ್ನಿ ಪರೀಕ್ಷೆ - ಈ ಉಪಚುನಾವಣೆ ನನಗೆ ಅಗ್ನಿ ಪರೀಕ್ಷೆ ಅಂತ ಹೇಳಿದ್ದೆ. ನಿನ್ನೆ ಶೇ. 88.80 ರಷ್ಟು ಮತದಾನ ಆಗಿದೆ. ಚನ್ನಪಟ್ಟಣ ಇತಿಹಾಸದಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾನ ಆಗಿದೆ. ತಾಲೂಕಿನ ಜನತೆ ಒಂದು ದೊಡ್ಡ ಸಂದೇಶ ಕೊಟ್ಟಿದ್ದಾರೆ ಎಂದರು.

ಚನ್ನಪಟ್ಟಣದಿಂದ ಹೊರಗಡೆ ನೆಲೆಸಿರುವ ಕ್ಷೇತ್ರದ ಮತದಾರರು ಬಂದು ಮತದಾನ ಮಾಡಿ ಹೋಗಿದ್ದಾರೆ. ಜೆಡಿಎಸ್ - ಬಿಜೆಪಿ ಎಂಬ ತಾರತಮ್ಯ ಬಿಟ್ಟು ಎರಡೂ ಪಕ್ಷದ ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಕ್ಷೇತ್ರದ ಎಲ್ಲ ಮತದಾರರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಯುವಕನಿಗೆ ಈ ಬಾರಿ ಅವಕಾಶ ಕೊಡುವ ತೀರ್ಮಾನ ಮಾಡಿದ್ದೀರಿ ಅನ್ನೋ ವಿಶ್ವಾಸ ಇದೆ ಎಂದು ಹೇಳಿದರು.

ಇದನ್ನೂ ಓದಿ : ಉಪ ಚುನಾವಣೆ: ಬೊಂಬೆನಗರಿಯಲ್ಲಿ ಶಾಂತಿಯುತ ವೋಟಿಂಗ್​​: ಅತಿ ಹೆಚ್ಚು ಶೇ 88.80 ರಷ್ಟು ಮತದಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.