ETV Bharat / state

ರಿವರ್ ಮೊಬಿಲಿಟಿ ಕಂಪನಿಗೆ ಅಗತ್ಯ ಜಮೀನು ಮಂಜೂರು: ಸಚಿವ ಎಂ‌.ಬಿ.ಪಾಟೀಲ್ - Minister M B Patil - MINISTER M B PATIL

ರಿವರ್ ಮೊಬಿಲಿಟಿ ಕಂಪನಿಗೆ ಅಗತ್ಯ ಭೂಮಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

Minister M B patil
ರಿವರ್ ಮೊಬಿಲಿಟಿ ಕಂಪನಿ ತಯಾರಿಸಿದ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ (ETV Bharat)
author img

By ETV Bharat Karnataka Team

Published : Aug 9, 2024, 4:31 PM IST

Updated : Aug 9, 2024, 4:44 PM IST

ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ಚಲಾಯಿಸಿದ ಸಚಿವ ಎಂ.ಬಿ.ಪಾಟೀಲ್ (ETV Bharat)

ಬೆಂಗಳೂರು: ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ ಪ್ರಮಾಣವನ್ನು ಏರಿಸಲು ಬಯಸಿರುವ ರಿವರ್ ಮೊಬಿಲಿಟಿ ಕಂಪನಿಗೆ ಅಗತ್ಯ ಭೂಮಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಇಂದು ತಮ್ಮನ್ನು ಭೇಟಿಯಾದ ಕಂಪನಿಯ ಸಿಇಒ ಅರವಿಂದ್ ಮಣಿ ಮತ್ತು ಉಪಾಧ್ಯಕ್ಷೆ ಮಯೂರಿ ಮೋಹಿಡೇಕರ್ ಜೊತೆ ಸಚಿವರು ಭವಿಷ್ಯದ ಸಂಪರ್ಕ ವ್ಯವಸ್ಥೆ ಕುರಿತು ಮಾತುಕತೆ ನಡೆಸಿದರು.

ಸದ್ಯಕ್ಕೆ ರಿವರ್ ಮೊಬಿಲಿಟಿ ಕಂಪನಿ ಹೊಸಕೋಟೆ ಬಳಿ ಇರುವ ತನ್ನ ಉತ್ಪಾದನಾ ಘಟಕದಲ್ಲಿ ವರ್ಷಕ್ಕೆ 1.20 ಲಕ್ಷ ಇ.ವಿ ದ್ವಿಚಕ್ರ ವಾಹನಗಳನ್ನು ತಯಾರಿಸುತ್ತಿದೆ. ಇದನ್ನು ವರ್ಷಕ್ಕೆ 5 ಲಕ್ಷಕ್ಕೆ ಕೊಂಡೊಯ್ಯಲು ಕಂಪನಿ ಬಯಸಿದ್ದು, ಅದಕ್ಕಾಗಿ ಜಮೀನಿಗೆ ಬೇಡಿಕೆ ಇಟ್ಟಿದೆ. ಗೌರಿಬಿದನೂರು, ಕೋಲಾರದ ನರಸಾಪುರ, ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಭೂಮಿ ತೋರಿಸಿದ್ದು, ಬಯಸಿದ ಪ್ರಕಾರ ಜಮೀನು ಹಂಚಿಕೆ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಕಂಪನಿಯು ಇ.ವಿ ಬ್ಯಾಟರಿಯನ್ನು ಕೂಡ ಇಲ್ಲೇ ತಯಾರಿಸುತ್ತಿದ್ದು, 400 ಕೋಟಿ ರೂಪಾಯಿ ಹೂಡಿಕೆ ಮಾಡಿದೆ. ಇ.ವಿ ವಾಹನವು ಒಂದು ಸಲ ಚಾರ್ಜ್ ಮಾಡಿದರೆ 120 ಕಿ.ಮೀ ಓಡಲಿದೆ ಎಂದು ಅವರು ಮಾಹಿತಿ ನೀಡಿದರು. ರಾಜ್ಯದಲ್ಲಿ ಇ.ವಿ ಕ್ಷೇತ್ರದಲ್ಲಿ ಹೂಡಿಕೆಗೆ ಯಥೇಚ್ಛ ಅವಕಾಶಗಳಿವೆ. ಸರ್ಕಾರ ಕೂಡ ನಾನಾ ಬಗೆಯ ಉತ್ತೇಜನವನ್ನು ಕೈಗಾರಿಕಾ ನೀತಿಯಲ್ಲಿ ಅಳವಡಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಅಸಾಂಪ್ರದಾಯಿಕ ವಾಹನಗಳು ಜನಪ್ರಿಯವಾಗಲಿವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿದ್ಯುತ್ ಚಾಲಿತ ದ್ವಿಚಕ್ರ ವಾಹನವನ್ನು ಒಂದು ಸುತ್ತು ಚಲಾಯಿಸಿದ ಸಚಿವ ಎಂ.ಬಿ.ಪಾಟೀಲ್, ಮಾಹಿತಿ ಪಡೆದುಕೊಂಡರು. ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಇದ್ದರು.

ಇದನ್ನೂ ಓದಿ : ಇವಿ ಕರಡು ನೀತಿ ಸಿದ್ಧ, 5 ವರ್ಷಗಳಲ್ಲಿ 50 ಸಾವಿರ ಕೋಟಿ ಹೂಡಿಕೆ: ಸಚಿವ ಎಂ.ಬಿ.ಪಾಟೀಲ್

Last Updated : Aug 9, 2024, 4:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.