ETV Bharat / state

ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ: ರಾಜ್ಯಾಧ್ಯಕ್ಷರಿಂದ ಅಭಿನಂದನೆ - New in charge appointed for BJP - NEW IN CHARGE APPOINTED FOR BJP

ಚುನಾವಣಾ ಉಸ್ತುವಾರಿಯನ್ನೇ ರಾಜ್ಯ ಉಸ್ತುವಾರಿಯನ್ನಾಗಿ ಬಿಜೆಪಿ ಹೈಕಮಾಂಡ್​ ನೇಮಕ ಮಾಡಿದೆ.

ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ
ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ (IANS)
author img

By ETV Bharat Karnataka Team

Published : Jul 5, 2024, 7:26 PM IST

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕಗೊಳಿಸಿ ಬಿಜೆಪಿ ಹೈಕಮಾಂಡ್​ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆ ಮುಕ್ತಾಯಗೊಂಡು ಸರ್ಕಾರ ರಚನಾ ಕಾರ್ಯ ಎಲ್ಲವೂ ಸುಗಮವಾದ ಹಿನ್ನೆಲೆಯಲ್ಲಿ ಸಂಘಟನೆಗೆ ಮತ್ತೊಮ್ಮೆ ಚುರುಕು ನೀಡಿದ್ದು, ಚುನಾವಣಾ ಉಸ್ತುವಾರಿಯಾಗಿದ್ದ ಡಾ. ರಾಧಾಮೋಹನ್​ ದಾಸ್ ಅಗರ್ವಾಲ್ ಅವರನ್ನು ರಾಜ್ಯ ಉಸ್ತುವಾರಿಯಾಗಿ, ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಕಗೊಳಿಸಲಾಗಿದೆ.

ರಾಜ್ಯಾಧ್ಯಕ್ಷ ವಿಜಯೇಂದ್ರ ಅಭಿನಂದನೆ: ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಸಂಸದ ಡಾ.ರಾಧಾಮೋಹನ್‍ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ನೇಮಿಸಿದ್ದನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಸ್ವಾಗತಿಸಿದ್ದು, ಇಬ್ಬರನ್ನೂ ಅಭಿನಂದಿಸಿದ್ದಾರೆ.

ಡಾ. ರಾಧಾಮೋಹನ್‍ದಾಸ್​​ ಅವರು ಕರ್ನಾಟಕದ ಲೋಕಸಭಾ ಚುನಾವಣಾ ಉಸ್ತುವಾರಿಯಾಗಿ ಕೆಲಸ ಮಾಡಿದ್ದು, ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಸಮರ್ಥವಾಗಿ ಮಾರ್ಗದರ್ಶನ ನೀಡಿದ್ದಾರೆ. ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದರೂ, ಅವರ ಸಲಹೆ - ಮಾರ್ಗದರ್ಶನದೊಂದಿಗೆ ಪಕ್ಷವು 17 ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಎಂದು ವಿವರಿಸಿದ್ದಾರೆ.

ಅಗರ್ವಾಲ್ ಮತ್ತು ಸುಧಾಕರ್ ರೆಡ್ಡಿ ಅವರ ಸಲಹೆ ಮತ್ತು ಮಾರ್ಗದರ್ಶನವು ಕರ್ನಾಟಕದಲ್ಲಿ ಪಕ್ಷದ ಸಂಘಟನೆಯಲ್ಲಿ ಧನಾತ್ಮಕ ಬದಲಾವಣೆಗಳಿಗೆ ಕಾರಣವಾಗಲಿದೆ ಮತ್ತು ಮುಂದಿನ ಉಪ ಚುನಾವಣೆಗಳು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವನ್ನು ತಂದು ಕೊಡಲಿದೆ ಎಂದು .ಬಿ.ವೈ. ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾನ್ಯ ಜೆ.ಪಿ.ನಡ್ಡಾ ಅವರಿಗೆ ಧನ್ಯವಾದಗಳನ್ನು ಸಮರ್ಪಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ನೂತನ ಡಿಸಿಯಾಗಿ ಮೊಹಮ್ಮದ್ ರೋಷನ್‌ ಅಧಿಕಾರ ಸ್ವೀಕಾರ - Belagavi DC

ETV Bharat Logo

Copyright © 2024 Ushodaya Enterprises Pvt. Ltd., All Rights Reserved.