ETV Bharat / state

ಇಂದಿರಾ ಕ್ಯಾಂಟೀನ್​ಗಳಿಗೆ ಆಹಾರ ಪೂರೈಕೆ ಟೆಂಡರ್​ ವಿಳಂಬ: ಏಪ್ರಿಲ್​ ಬಳಿಕವೇ ಹೊಸ ಮೆನು ಲಭ್ಯ - ಬೆಂಗಳೂರು ಇಂದಿರಾ ಕ್ಯಾಂಟೀನ್​

ಆಹಾರ ಪೂರೈಕೆ ಮಾಡುವ ಕುರಿತಂತೆ ಕರೆಯಲಾಗುವ ಟೆಂಡರ್​ ವಿಳಂಬವಾಗಿರುವುದರಿಂದ ಏಪ್ರಿಲ್​ ಬಳಿಕ ಇಂದಿರಾ ಕ್ಯಾಂಟೀನ್​ಗಳಲ್ಲಿ ಹೊಸ ಮೆನು ಲಭ್ಯವಾಗಲಿದೆ.

INDIRA CANTEEN
ಇಂದಿರಾ ಕ್ಯಾಂಟೀನ್
author img

By ETV Bharat Karnataka Team

Published : Feb 8, 2024, 12:57 PM IST

ಬೆಂಗಳೂರು: ನಗರದ ಇಂದಿರಾ ಕ್ಯಾಂಟೀನ್​ಗಳಲ್ಲಿ ಆಹಾರ ಪೂರೈಕೆ ಮಾಡುವ ಕುರಿತಂತೆ ಕರೆಯಲಾಗುವ ಟೆಂಡರ್​ ವಿಳಂಬವಾಗಿರುವುದರಿಂದ ಏಪ್ರಿಲ್​ ಬಳಿಕವೇ ಇಂದಿರಾ ಕ್ಯಾಂಟೀನ್​ಗಳಲ್ಲಿ ಮುದ್ದೆೆ, ಸಾರು ದೊರೆಯುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಈ ಹಿಂದೆ ಇಂದಿರಾ ಕ್ಯಾಂಟೀನ್​ಗಳಲ್ಲಿ ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆೆ ಕೇವಲ ರೈಸ್ ಬಾತ್​, ಅನ್ನ ಸಾಂಬಾರ್​, ಮೊಸರನ್ನವನ್ನು ನೀಡಲಾಗುತ್ತಿತ್ತು. ಆದರೆ, ಹಿರಿಯ ನಾಗರಿಕರು ಹಾಗೂ ಸಕ್ಕರೆ ಕಾಯಿಲೆ ಇರುವವರು ಸೇರಿದಂತೆ ಇತರರು ರೈಸ್ ಪದಾರ್ಥದ ಊಟ ಮಾತ್ರ ಬೇಡ ಮುದ್ದೆೆ ಚಪಾತಿ ನೀಡುವಂತೆ ಮನವಿ ಸಲ್ಲಿಸಿದ ಹಿನ್ನೆೆಲೆಯಲ್ಲಿ ಊಟದ ಮೆನು ಬದಲಾವಣೆ ಮಾಡಿ ಮುದ್ದೆೆ, ಸಾರು, ಚಪಾತಿ ನೀಡಲು ರಾಜ್ಯ ಸರ್ಕಾರ ಹಾಗೂ ಪಾಲಿಕೆ ಮುಂದಾಗಿತ್ತು.

ಆದರೆ, ಬೆಂಗಳೂರು ನಗರದ ಇಂದಿರಾ ಕ್ಯಾಂಟೀನ್​ಗಳಿಗೆ ಆಹಾರ ಪೂರೈಕೆ ಟೆಂಡರ್​ ವಿಳಂಬವಾಗಿರುವುದರಿಂದ ಏಪ್ರಿಲ್ ಬಳಿಕ ಮುದ್ದೆ, ಸಾರು ದೊರೆಯಲಿದೆ ಎನ್ನಲಾಗುತ್ತಿದೆ. ಕಳೆದ ಆಗಸ್ಟ್​ನಲ್ಲಿ ಇಂದಿರಾ ಕ್ಯಾಂಟೀನ್​ಗಳಿಗೆ ಆಹಾರ ಪೂರೈಕೆ ಗುತ್ತಿಗೆ ಅವಧಿ ಮುಕ್ತಾಯಗೊಂಡಿದ್ದು, ಹೊಸ ಟೆಂಡರ್ ಪ್ರಕ್ರಿಯೆ ನಡೆಯದ ಹಿನ್ನೆೆಲೆಯಲ್ಲಿ ಹಳೆ ಗುತ್ತಿಗೆದಾರರನ್ನು ಮುಂದುವರಿಸಲಾಗಿತ್ತು. ಡಿಸೆಂಬರ್‌ನಲ್ಲಿ ಟೆಂಡರ್ ಆಹ್ವಾನಿಸುವಂತೆ ಸರ್ಕಾರ ಆದೇಶ ನೀಡಿತ್ತು. ಸದ್ಯ ಎಂಟು ವಲಯಗಳಿಗೆ ಪ್ರತ್ಯೇಕ ಟೆಂಡರ್​ ಆಹ್ವಾನಿಸುವುದಕ್ಕೆೆ ನಿರ್ಧರಿಸಿ ನಾಲ್ಕು ಪ್ಯಾಕೇಜ್‌ಗಳಲ್ಲಿ ಟೆಂಡರ್ ಆಹ್ವಾನಿಸಿದೆ.

ಇಂದಿರಾ ಕ್ಯಾಂಟೀನ್​ ಆಹಾರ ಪೂರೈಕೆ ಗುತ್ತಿಗೆದಾರರಿಗೆ ಈ ಬಾರಿ ಮುದ್ದೆ, ಸಾರು ನೀಡುವುದನ್ನು ಕಡ್ಡಾಯಗೊಳಿಸಿದ್ದು, ಟೆಂಡರ್​ ಪ್ರಕ್ರಿಯೆ ಪೂರ್ಣಗೊಂಡು ನಂತರ ಜನಸಾಮಾನ್ಯರಿಗೆ ಹೊಸ ಮೆನು ಲಭ್ಯವಾಗಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್, ಶಾಲಾ ಬಿಸಿಯೂಟದಲ್ಲಿ ಸಿರಿಧಾನ್ಯ ಬಳಕೆಗೆ ಶೀಘ್ರ ಕ್ರಮ: ಸಿಎಂ

ಕೇಂಪೇಗೌಡ ವಿಮಾನ ನಿಲ್ದಾಣದಲ್ಲೂ ಇಂದಿರಾ ಕ್ಯಾಂಟೀನ್: ಕಳೆದ ಡಿಸೆಂಬರ್​ನಲ್ಲಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಮಿಕರು ಮತ್ತು ಟ್ಯಾಕ್ಸಿ ಚಾಲಕರಿಗೆ ಕಡಿಮೆ ಬೆಲೆಯಲ್ಲಿ ಆಹಾರ ನೀಡಲು ಎರಡು ಇಂದಿರಾ ಕ್ಯಾಂಟೀನ್​ಗಳನ್ನು ತೆರೆಯಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ. ವಿಮಾನ ನಿಲ್ದಾಣದ ಸಿಬ್ಬಂದಿ, ಚಾಲಕರು ಮತ್ತು ಕಾರ್ಮಿಕರು ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವಂತೆ ಮನವಿ ಮಾಡಿದ್ದರು. ಕಾರ್ಮಿಕರ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಸರ್ಕಾರ ನಿರ್ಧರಿಸಿತ್ತು.

ಇದಕ್ಕೂ ಮುನ್ನ ಅಕ್ಟೋಬರ್​ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಾದ್ಯಂತ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್​ಗಳನ್ನು ಆರಂಭಿಸಲು ಸರ್ಕಾರ ನಿರ್ಧರಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.