ETV Bharat / state

ಕರ್ನಾಟಕದಲ್ಲಿ ಗ್ರೀನ್ ಹೈಡ್ರೋಜನ್​ ವಿದ್ಯುತ್ ಉತ್ಪಾದನೆಗೆ ಹೊಸ ನೀತಿ ಜಾರಿ: ಇಂಧನ ಸಚಿವ ಕೆ.ಜೆ.ಜಾರ್ಜ್ - ಪೈಲಟ್ ಯೋಜನೆ

ಗುಜರಾತ್, ರಾಜಸ್ಥಾನದಲ್ಲಿ ಗ್ರೀನ್ ಹೈಡ್ರೋಜನ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ವಿದ್ಯುತ್ ಬೇಡಿಕೆಯನ್ನು ಗ್ರೀನ್ ಹೈಡ್ರೋಜನ್ ಪೂರೈಸಲಿದೆ. ಅದನ್ನು ರಫ್ತು ಕೂಡ ಮಾಡಬಹುದು. ಈ ಹಿನ್ನೆಲೆ ಹೊಸ ನೀತಿ ಜಾರಿಗೆ ತರಲಾಗುತ್ತದೆ‌ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದರು.

Minister KJ George spoke at a press conference.
ಇಂಧನ ಸಚಿವ ಕೆ ಜೆ ಜಾರ್ಜ್ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
author img

By ETV Bharat Karnataka Team

Published : Feb 5, 2024, 7:38 PM IST

Updated : Feb 5, 2024, 9:16 PM IST

ಇಂಧನ ಸಚಿವ ಕೆ ಜೆ ಜಾರ್ಜ್ ಮಾಧ್ಯಮದವರ ಜೊತೆ ಮಾತನಾಡಿದರು.

ಮಂಗಳೂರು(ದಕ್ಷಿಣಕನ್ನಡ): ಗ್ರೀನ್ ಹೈಡ್ರೋಜನ್ ಎಂಬ ಹೊಸತಂತ್ರಜ್ಞಾನದ ವಿದ್ಯುತ್ ಉತ್ಪಾದನೆಗೆ ರಾಜ್ಯದಲ್ಲಿ ಹೊಸ ನೀತಿ ಜಾರಿಗೆ ತರಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಗ್ರೀನ್ ಹೈಡ್ರೋಜನ್ ವಿದ್ಯುತ್​ ಉತ್ಪಾದನೆ: ದಕ್ಷಿಣ ಕನ್ನಡ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳೊಂದಿಗೆ ನಡೆದ ಮೆಸ್ಕಾಂ ಕೆಪಿಟಿಸಿಎಲ್​ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಗುಜರಾತ್ ಹಾಗೂ ರಾಜಸ್ಥಾನದಲ್ಲಿ ಗ್ರೀನ್ ಹೈಡ್ರೋಜನ್ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದಾರೆ. ಈ ಶಕ್ತಿಯನ್ನು ಸರಕು ರೂಪದಲ್ಲಿ ಕಂಟೈನರ್​ಗಳಲ್ಲಿ ಒಂದೆಡೆಯಿಂದ ಇನ್ನೊಂದೆಡೆಗೆ ಸುಲಭವಾಗಿ ಕೊಂಡೊಯ್ಯಬಹುದು. ರಾಜ್ಯದಲ್ಲಿ ವಿದ್ಯುತ್ ಗೆ ಬೇಡಿಕೆ ಹೆಚ್ಚಾಗಿದೆ. ಗ್ರೀನ್ ಹೈಡ್ರೋಜನ್ ಈ ಬೇಡಿಕೆಗಳನ್ನು ಪೂರೈಸಲಿದೆ. ಅಲ್ಲದೆ ರಫ್ತು ಕೂಡ ಮಾಡಬಹುದು. ಈ ಹಿನ್ನೆಲೆಯಲ್ಲಿ ಹೊಸ ನೀತಿ ತರಲಾಗುತ್ತದೆ‌ ಎಂದು ತಿಳಿಸಿದರು.

ಮಂಗಳೂರು ಪೈಲಟ್ ಯೋಜನೆಗೆ ಸೂಕ್ತ ಸ್ಥಳ: ಮಂಗಳೂರಿನಲ್ಲಿ ಅದಕ್ಕೆ ಸೂಕ್ತವಾದ ಸಮುದ್ರ, ಬಂದರು ವ್ಯವಸ್ಥೆ ಇದೆ. ಹಾಗಾಗಿ ಇಲ್ಲಿ ಪೈಲಟ್ ಯೋಜನೆ ಕೈಗೆತ್ತಿಕೊಳ್ಳುವುದು ಸೂಕ್ತವಾಗಿದೆ. ಇದಕ್ಕೆ ದೊಡ್ಡ ಕೈಗಾರಿಕೆಗಳು ಮುಂದೆ ಬರಬೇಕಾಗಿದೆ. ಜಾಗತಿಕ ಹೂಡಿಕೆ ಸಮಾವೇಶದಲ್ಲಿಯೂ ಬಹಳಷ್ಟು ಕೈಗಾರಿಕೋದ್ಯಮಿಗಳು ಆಸಕ್ತಿ ತೋರಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂನಲ್ಲಿಯೂ ಈ ಬಗ್ಗೆ ಚರ್ಚೆಯಾಗಿದೆ. ಇದಕ್ಕಾಗಿ ಮುಂದೆ ಬರುವ ಕೈಗಾರಿಕೆಗಳಿಗೆ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕಾಗಿದೆ. 300 ಕೆ ವಿ ಸಾಮರ್ಥ್ಯದಲ್ಲಿ ಪೈಲಟ್ ಪ್ರಾಜೆಕ್ಟ್ ಗೆ ಚಿಂತಿಸಲಾಗಿದೆ. ಪ್ರಸಕ್ತ ಈ ಬಗೆಗಿನ ಪ್ರಕ್ರಿಯೆಗಳು ಪ್ರಾಥಮಿಕ ಹಂತದಲ್ಲಿವೆ ಎಂದು ಸಚಿವರು ಮಾಹಿತಿ ನೀಡಿದರು.

ರಾಜ್ಯದಲ್ಲಿ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಮಗ್ರ ಕ್ರಮ ಕೈಗೊಂಡಿದ್ದು, ಅಗತ್ಯವಿದ್ದಲ್ಲಿ ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಗೂ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ 3 ಸಾವಿರ ಲೈನ್ ಮ್ಯಾನ್​ಗಳ ನೇಮಕ ಶೀಘ್ರ: ರಾಜ್ಯದಲ್ಲಿ 6 ಸಾವಿರ ಲೈನ್ ಮ್ಯಾನ್ ಗಳ ಬೇಡಿಕೆಯಿದ್ದು, ಶೀಘ್ರದಲ್ಲಿ 3 ಸಾವಿರ ಲೈನ್ ಮ್ಯಾನ್ ಗಳನ್ನು ನೇಮಕ ಮಾಡಲಾಗುತ್ತದೆ. ಈ ನೇಮಕಾತಿ ಪ್ರಕ್ರಿಯೆ ರಾಜ್ಯದಲ್ಲಿ ಏಕಕಾಲದಲ್ಲಿ ಮಾಡಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯರಿಗೂ ಲೈನ್ ಮ್ಯಾನ್ ಹುದ್ದೆ ಸಿಗುವಂತೆ ಮಾಡುತ್ತೇವೆ ಎಂದರು. ಸ್ಥಳೀಯ ಯುವಕರಿಗೆ ತರಬೇತಿಗೆ ವ್ಯವಸ್ಥೆ ಮಾಡುವಂತೆ ಮೆಸ್ಕಾಂ ಎಂಡಿ ಪದ್ಮಾವತಿ ಅವರಿಗೆ ಇದೇ ವೇಳೆ ಸಚಿವರು ಸೂಚಿಸಿದರು.

ಇದನ್ನೂಓದಿ:ಕೇಂದ್ರದ ಬಜೆಟ್​ ಡಬಲ್​ ಆದರೂ ರಾಜ್ಯಕ್ಕೆ ಸಿಗಬೇಕಾದ ತೆರಿಗೆ ಪಾಲಿನಲ್ಲಿ ಅನ್ಯಾಯವಾಗುತ್ತಿದೆ: ಸಚಿವ ಕೃಷ್ಣ ಬೈರೇಗೌಡ

Last Updated : Feb 5, 2024, 9:16 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.