ETV Bharat / state

ಬಜೆಟ್​ನಲ್ಲಿ ಘೋಷಣೆಯಾದ ಹೊಸ ಯೋಜನೆಗಳೇನು? ಇಲ್ಲಿದೆ ಮಾಹಿತಿ - ಕರ್ನಾಟಕ ಬಜೆಟ್

ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್​ನಲ್ಲಿ ಘೋಷಣೆಯಾದ ಹೊಸ ಯೋಜನೆಗಳ ವಿವರ ಇಲ್ಲಿದೆ.

new schemes announced in the budget
new schemes announced in the budget
author img

By ETV Bharat Karnataka Team

Published : Feb 16, 2024, 7:55 PM IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ಕರ್ನಾಟಕ ಬಜೆಟ್-2024 ರಲ್ಲಿ ಹಲವಾರು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಇಂದಿನ ಬಜೆಟ್​ನಲ್ಲಿ ಘೋಷಣೆಯಾದ ಹೊಸ ಯೋಜನೆಗಳ ವಿವರ ಇಲ್ಲಿದೆ.

ಕರ್ನಾಟಕ ರೈತ ಸಮೃದ್ಧಿ ಯೋಜನೆ: ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿಗೊಳಿಸುವವುದಾಗಿ ಬಜೆಟ್​ನಲ್ಲಿ ಘೋಷಿಸಲಾಗಿದೆ.

ನಮ್ಮ ಮಿಲ್ಲೆಟ್ ಯೋಜನೆ: ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ-ಟೆಕ್ ಕಂಪನಿಗಳು ಮತ್ತು ರಿಟೇಲ್ ಚೈನ್​ಗಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು.

ಕಿಸಾನ್ ಮಾಲ್​ಗಳ ಸ್ಥಾಪನೆ: ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್​ಗಳನ್ನು ಸ್ಥಾಪಿಸಲಾಗುವುದು.

ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸ್ಥಾಪನೆ: ರಾಜ್ಯದಲ್ಲಿ 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿರುವ ಪುಷ್ಪ ಬೆಳೆಗಳ ಮಾರಾಟ ಮತ್ತು ರಫ್ತನ್ನು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.

ಸ್ಪೈಸ್ ಪಾರ್ಕ್ ಸ್ಥಾಪನೆ: ರಾಜ್ಯದಲ್ಲಿ ಸಾಂಬಾರು ಪದಾರ್ಥ ಬೆಳೆಗಳನ್ನು ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಹಾಗೂ ಬೆಳೆಗಳ ರಫ್ತನ್ನು ಉತ್ತೇಜಿಸಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆ ಯೋಜನೆ: ಬೆಂಗಳೂರಿನ ದಾಸನಪುರ, ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಳಗಾವಿಯ ಮಾರುಕಟ್ಟೆಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್​ಜಿ ಪ್ಲಾಂಟ್​ ಸ್ಥಾಪಿಸುವ ಮೂಲಕ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳನ್ನಾಗಿ ಪರಿವರ್ತಿಸಲಾಗುವುದು.

ಸೋಲಾರ್​ ಪಾರ್ಕ್​ಗಳ ಸ್ಥಾಪನೆ: ಪಾವಗಡ ಸೋಲಾರ್ ಪಾರ್ಕ್ ಮಾದರಿಯಲ್ಲಿ ಜಲಸಂಪನ್ಮೂಲ ಇಲಾಖೆಯ ಮಾಲೀಕತ್ವವಿರುವ ಜಮೀನಿನಲ್ಲಿ ಮತ್ತು ಜಲಾಶಯಗಳ ಹಿನ್ನೀರಿನಲ್ಲಿ ಸೂಕ್ತ ಮಾದರಿಯ ಸೋಲಾರ್ ಪಾರ್ಕ್​ಗಳನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.

ಗಣಿತ ಗಣಕ ಕಾರ್ಯಕ್ರಮ: 3 ರಿಂದ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ ಸಾಮರ್ಥ್ಯ ಹೆಚ್ಚಿಸಲು ಜೆ-ಪಾಲ್ ಸಂಸ್ಥೆಯ ಸಹಯೋಗದಲ್ಲಿ ಗಣಿತ-ಗಣಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.

ನಾವು-ಮನುಜರು ಸಂವಾದ ಕಾರ್ಯಕ್ರಮ: ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾಕೇಂದ್ರಗಳನ್ನಾಗಿ ರೂಪಿಸಲು ನಾವು-ಮನುಜರು ಎಂಬ ಹೆಸರಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಾರಕ್ಕೆ ಎರಡು ಗಂಟೆಗಳ ಕಾಲ ವಿಚಾರ-ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು.

ಡೇ-ಕೇರ್ ಕಿಮೋಥೆರಪಿ ಕೇಂದ್ರಗಳ ಸ್ಥಾಪನೆ: ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ ಕಿಮೋಥೆರಪಿ ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ ಸರ್ಕಾರವು 20 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪಿಸಲಾಗುವುದು.

ಹೆಲ್ತ್​ ರಿಪಾಸಿಟರಿ ಆರಂಭ: ಸಾರ್ವಜನಿಕರ ಎಲ್ಲಾ ಆರೋಗ್ಯ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಸಂಬಂಧ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು ಆರಂಭಿಸಲು ಈಗಾಗಲೇ ಕ್ರಮವಹಿಸಲಾಗಿರುತ್ತದೆ. ಇದರಡಿಯಲ್ಲಿ ಒಂದು ಹೆಲ್ತ್​ ರಿಪಾಸಿಟರಿಯನ್ನು ಸೃಜಿಸಿ ಸಾರ್ವಜನಿಕರ ಚಿಕಿತ್ಸಾ ಮಾಹಿತಿಯು ಒಂದೇ ಮೂಲದಿಂದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯರಿಗೆ ಲಭ್ಯವಾಗುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡುವುದನ್ನು ಮತ್ತು ಚಿಕಿತ್ಸಾ ಸಮಯವನ್ನು ಸ್ವಯಂಚಾಲಿತವಾಗಿ ನಿಗದಿಪಡಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು.

ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.

ಉಚಿತ JEE- NEET ತರಬೇತಿ: ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಎರಡು ವರ್ಷಗಳ JEE- NEET ತರಬೇತಿ ಉಚಿತವಾಗಿ ನೀಡಲಾಗುವುದು.

ಅನ್ನ ಸುವಿಧಾ ಯೋಜನೆ: ಈ ಹೊಸ ಯೋಜನೆಯಡಿಯಲ್ಲಿ ಹೋಂ ಡೆಲಿವರಿ ಆ್ಯಪ್ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ಸಾಮಾಜಿಕ ಭದ್ರತಾ ಯೋಜನೆಯನ್ನು ಜಾರಿಗೆ ತರಲಾಗುವುದು.

ಪ್ರಗತಿ ಪಥ ಯೋಜನೆ: ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿಪಡಿಸಲು ಪ್ರಗತಿ ಪಥ ಯೋಜನೆಯನ್ನು ಬಾಹ್ಯ ನೆರವಿನೊಂದಿಗೆ ಪ್ರಾರಂಭಿಸಲಾಗುವುದು.

ಕಲ್ಯಾಣ ಪಥ ಯೋಜನೆ: ಈ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಮಾದರಿಯಲ್ಲಿ ಒಟ್ಟು 1150 ಕಿಮೀ ರಸ್ತೆಗಳನ್ನು 1000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಹೊಂಬೆಳಕು ಸೋಲಾರ್ ದೀಪ ಯೋಜನೆ: 50 ಗ್ರಾಮ ಪಂಚಾಯಿತಿಗಳಲ್ಲಿ ಹೊಂಬೆಳಕು ಕಾರ್ಯಕ್ರಮದಡಿ 25 ಕೋಟಿ ರೂ.ಗಳ ವೆಚ್ಚದಲ್ಲಿ ಸೋಲಾರ್ ದೀಪಗಳನ್ನು ಅಳವಡಿಸಲಾಗುವುದು.

ಆರೈಕೆ - ಉಪಶಮನ ಕೇಂದ್ರಗಳ ಆರಂಭ: ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸ್ಥರ ಸಹಭಾಗಿತ್ವದೊಂದಿಗೆ ಹಿರಿಯ ನಾಗರಿಕರ ಆರೈಕೆ ಮತ್ತು ಚಿಕಿತ್ಸೆಯನ್ನು ನಿರ್ವಹಿಸಲು ಆರೈಕೆ-ಉಪಶಮನ ಕೇಂದ್ರಗಳನ್ನು ಆರಂಭಿಸಲಾಗುವುದು.

ಬೆಂಗಳೂರು ಬಿಸಿನೆಸ್ ಕಾರಿಡಾರ್: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದರ ಜೊತೆಗೆ ಬೆಂಗಳೂರಿನ ಆರ್ಥಿಕ ಚಟುವಟಿಕೆಗಳು ದೊಡ್ಡ ಪ್ರಮಾಣದಲ್ಲಿ ವೃದ್ಧಿಸಲು ಸಹಕಾರಿಯಾಗುವಂತೆ ಪೆರಿಫೆರಲ್ ರಿಂಗ್ ರೋಡ್ ಅನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಪರಿಚಯಿಸಲಾಗುವುದು.

ನಮ್ಮ ಮೆಟ್ರೊ ಹಂತ-3ಎ: ನಮ್ಮ ಮೆಟ್ರೊ ಹಂತ-3ಎ ಅಡಿಯಲ್ಲಿ ಸರ್ಜಾಪುರದಿಂದ ಅಗರ, ಕೋರಮಂಗಲ ಡೈರಿ ವೃತ್ತ, ಮೇಖ್ರಿ ವೃತ್ತ ಮೂಲಕ ಹೆಬ್ಬಾಳವನ್ನು ಸಂಪರ್ಕಿಸುವ ಮಾರ್ಗ ನಿರ್ಮಾಣ ಕುರಿತು ಡಿಪಿಆರ್ ಕರಡು ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗುವುದು.

ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ: ಬಸವಣ್ಣನವರ ಜನ್ಮಸ್ಥಳವಾದ ಬಸವನ ಬಾಗೇವಾಡಿಯ ಅಭಿವೃದ್ಧಿಗೆ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು.

ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯ: ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಎಲ್ಲಾ ಕಚೇರಿಗಳು, ಅಂಗಡಿ ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಕಗಳಲ್ಲಿ ಶೇ 60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಅಳವಡಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಡಿ ಜಾರಿಗೆ ತರಲಾಗುವುದು.

ಬೆಳಗಾವಿ ಕಾಂಗ್ರೆಸ್ ಅಧಿವೇಶನ ಸ್ಮರಣೆಗಾಗಿ ವಿಶೇಷ ಕಾರ್ಯಕ್ರಮ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಈ ವರ್ಷ ಶತಮಾನದ ಮೈಲಿಗಲ್ಲನ್ನು ಪೂರ್ಣಗೊಳಿಸುತ್ತಿದೆ. ಮಹಾತ್ಮಾ ಗಾಂಧಿಜಿಯವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಇದಾಗಿದೆ. ಈ ಅಧಿವೇಶನದ ಕೊಡುಗೆಯನ್ನು ಸ್ಮರಿಸಲು 2 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು. ಅಲ್ಲದೇ ಮಹಾತ್ಮಾ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮರಣಾರ್ಥ ಫಲಕಗಳನ್ನು ಅಳವಡಿಸಲಾಗುವುದು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಉಚಿತ ಬಸ್ ಪಾಸ್ ಸೌಲಭ್ಯವನ್ನು ಪ್ರಾರಂಭಿಸಲಾಗುವುದು.

ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ: ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ರಕರ್ತರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಸ್ಥಾಪಿಸಿ, ಪ್ರತಿ ವರ್ಷ ನೀಡಲಾಗುವುದು.

ಕಾರಾಗೃಹಗಳ ಭದ್ರತೆಗೆ ಕೃತಕ ಬುದ್ಧಿಮತ್ತೆ: ರಾಜ್ಯದ ಎಲ್ಲ ಕಾರಾಗೃಹಗಳ ಸುಗಮ ಆಡಳಿತ ಮತ್ತು ಭದ್ರತೆಗಾಗಿ 5 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಾಂಶ, ಬ್ಯಾಗೇಕ್ ಸ್ಕ್ಯಾನರ್ ಮುಂತಾದ ಆಧುನಿಕ ಉಪಕರಣಗಳನ್ನು ಖರೀದಿಸಲಾಗುವುದು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.