ETV Bharat / state

ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯ: ಇಲ್ಲಿ ಬಳಕೆಯಾಗುತ್ತಿರುವ ನೀರಿನ ಪ್ರಮಾಣದ ವಿವರ ಕೇಳಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ - NGT Asked Water Usage Report - NGT ASKED WATER USAGE REPORT

ಐಪಿಎಲ್​ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಳಕೆಯಾಗುತ್ತಿರುವ ನೀರಿನ ಪ್ರಮಾಣದ ವಿವರ ನೀಡುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕೇಳಿದೆ.

ಐಪಿಎಲ್ ಪಂದ್ಯಗಳ ವೇಳೆ ಬಳಕೆಯಾಗುತ್ತಿರುವ ನೀರಿನ ಪ್ರಮಾಣದ ವಿವರ ಕೇಳಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ

author img

By ETV Bharat Karnataka Team

Published : Apr 6, 2024, 7:37 AM IST

ಬೆಂಗಳೂರು: ನಗರದಲ್ಲಿ ನೀರಿನ ಕೊರತೆ ನಡುವೆಯೂ ಐಪಿಎಲ್ ಪಂದ್ಯಗಳ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಳಸುತ್ತಿರುವ ನೀರಿನ ಪ್ರಮಾಣದ ವಿವರಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಮತ್ತಿತರ ಸಂಬಂಧಿತ ಅಧಿಕಾರಿಗಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಕೇಳಿದೆ.

ಐಪಿಎಲ್ ಆರಂಭಕ್ಕೂ ಮುನ್ನವೇ ನೀರಿನ ಅಭಾವ ಇರುವ ಕಾರಣ ಬೆಂಗಳೂರಿನಿಂದ ಐಪಿಎಲ್ ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ನಂತರದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಐಪಿಎಲ್ ಪಂದ್ಯಗಳಿಗಾಗಿ ಶುದ್ಧೀಕರಿಸಿದ ನೀರನ್ನು ಪೂರೈಸಲಾಗುತ್ತಿದೆ ಎಂಬ ವರದಿಗಳು ಹೊರಬಿದ್ದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಿರುವ ಹಸಿರು ನ್ಯಾಯಮಂಡಳಿಯ ಅಧ್ಯಕ್ಷ, ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಮತ್ತು ತಜ್ಞ ಸದಸ್ಯ ಡಾ.ಎ. ಸೆಂಥಿಲ್ ವೆಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಳಕೆಯಾಗುತ್ತಿರುವ ನೀರಿನ ಕುರಿತು ಮೇ 2ರ ಒಳಗೆ ಸಮಗ್ರ ವರದಿ ನೀಡುವಂತೆ ರಾಜ್ಯ ಕ್ರಿಕೆಟ್ ಸಂಸ್ಥೆ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB)ಗೆ ಕೇಳಲಾಗಿದೆ.

ಐಪಿಎಲ್ ಪಂದ್ಯಗಳ ವೇಳೆ ಸರಿಸುಮಾರು 75,000 ಲೀಟರ್ ನೀರಿನ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ರಾಜ್ಯ ರಾಜಧಾನಿಯಲ್ಲಿ ದಿನವೊಂದಕ್ಕೆ ಸುಮಾರು 500 ಮಿಲಿಯನ್ ಲೀಟರ್ ನೀರಿನ ಕೊರತೆಯಿದೆ. ಅಲ್ಲದೇ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾರು ತೊಳೆಯಲು, ತೋಟಗಾರಿಕೆ, ನಿರ್ಮಾಣ ಮತ್ತು ನಿರ್ವಹಣಾ ಕಾರ್ಯಗಳಿಗೆ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಿದ್ದರೂ ಸಹ ಪಂದ್ಯಗಳನ್ನು ನಡೆಸಲು ಕ್ರೀಡಾಂಗಣದಲ್ಲಿ ಇಷ್ಟು ದೊಡ್ಡ ಪ್ರಮಾಣದ ನೀರನ್ನು ಬಳಸಲಾಗಿದೆಯೇ ಎಂಬುದನ್ನ ನ್ಯಾಯಮಂಡಳಿ ಪ್ರಶ್ನಿಸಿದೆ.

ಹಸಿರು ನ್ಯಾಯಮಂಡಳಿ ಸೂಚನೆಯನ್ನು ನಾವು ಅಧ್ಯಯನ ಮಾಡುತ್ತಿದ್ದೇವೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಎನ್‌ಜಿಟಿ ಮಾನದಂಡಗಳನ್ನು ಅನುಸರಿಸುತ್ತಿದೆ. ಆದ್ದರಿಂದ ಮುಂದಿನ ಪಂದ್ಯಗಳನ್ನು ಆಯೋಜಿಸುವ ವಿಶ್ವಾಸವಿದೆ' ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಸಿಇಒ ಶುಭೇಂದು ಘೋಷ್ ತಿಳಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣವು ಈಗಾಗಲೇ ಐಪಿಎಲ್ ಟೂರ್ನಿಯ ಮೂರು ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಏಪ್ರಿಲ್ 15ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ, ಮೇ 4ರಂದು ಗುಜರಾತ್ ಟೈಟಾನ್ಸ್ ವಿರುದ್ಧ, ಮೇ 12 ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮತ್ತು ಮೇ 18 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಾಲ್ಕು ಪಂದ್ಯಗಳನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಕಾರ್ ವಾಶ್, ಗಾರ್ಡನ್‌ಗೆ ನೀರು ಬಳಸಿದ್ದಕ್ಕೆ ಜಲಮಂಡಳಿಯಿಂದ 22 ಮನೆಗಳಿಗೆ ದಂಡ - 22 Houses fined by water board

ETV Bharat Logo

Copyright © 2025 Ushodaya Enterprises Pvt. Ltd., All Rights Reserved.