ETV Bharat / state

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಆರೋಪಿಯ ಸುಳಿವು ನೀಡಿದ್ರೆ ₹ 10 ಲಕ್ಷ ನಗದು ಬಹುಮಾನ - ಎನ್ಐಎ ಘೋಷಣೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿಯ ಬಂಧನಕ್ಕೆ ಸಹಕಾರಿಯಾಗುವಂಥಹ ಸುಳಿವು ನೀಡಿದರೆ 10 ಲಕ್ಷ ರೂ. ನಗದು ಬಹುಮಾನ ನೀಡಲಾಗುವುದೆಂದು ಎನ್ಐಎ ಘೋಷಿಸಿದೆ.

NIA announces cash reward  Rameshwaram Cafe blast case  information about bomber  cash reward of 10 lakh rupees
ಎನ್ಐಎದಿಂದ ಘೋಷಣೆ
author img

By ETV Bharat Karnataka Team

Published : Mar 6, 2024, 4:05 PM IST

Updated : Mar 6, 2024, 4:22 PM IST

ಬೆಂಗಳೂರು : ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿಯ ಬಂಧನಕ್ಕೆ ಸಹಕಾರಿಯಾಗುವಂಥಹ ಸುಳಿವು ನೀಡಿದವರಿಗೆ ಎನ್ಐಎ (ರಾಷ್ಟ್ರೀಯ ತನಿಖಾ ದಳ) 10 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ. ಪ್ರಕರಣದ ತನಿಖೆ ಆರಂಭಿಸಿರುವ ಎನ್ಐಎ ಅಧಿಕಾರಿಗಳು ಇಂದು ಆರೋಪಿಯ ಫೋಟೋ ಬಿಡುಗಡೆಗೊಳಿಸಿದ್ದು, ಆರೋಪಿಯ ಕುರಿತು ಯಾವುದೇ ಸುಳಿವಿದ್ದಲ್ಲಿ ಹಂಚಿಕೊಳ್ಳುವಂತೆ ಹಾಗೂ ಮಾಹಿತಿ ನೀಡಿದವರ ವಿವರಗಳನ್ನ ಗೌಪ್ಯವಾಗಿರಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಸಂಪರ್ಕಿಸಬೇಕಿರುವ ವಿವರ: Tel :- 080-29510900, 8904241100, Mail: info.blr.nia.gov.in

ಘಟನೆಯ ಹಿನ್ನೆಲೆ: ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಭಾರೀ ಸ್ಫೋಟ ಸಂಭವಿಸಿತ್ತು. 9 ಮಂದಿ ಗ್ರಾಹಕರು ಗಾಯಗೊಂಡಿದ್ದರು. ಸುಧಾರಿತ ಕಡಿಮೆ ತೀವ್ರತೆಯ ಬಾಂಬ್​ ಇದಾಗಿದ್ದರಿಂದ ದೊಡ್ಡ ಹಾನಿ ಸಂಭವಿಸಿರಲಿಲ್ಲ.

ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿ ಬ್ಯಾಗ್ ಸಮೇತ ಕೆಫೆಗೆ ಆಗಮಿಸಿ, ಬಳಿಕ ಒಬ್ಬನೇ ತೆರಳುತ್ತಿರುವುದು ಪತ್ತೆಯಾಗಿದೆ. ಈತನ ಚಹರೆಯನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದು ಹೀಗೆ: "ರಾಮೇಶ್ವರಂ ಕೆಫೆಯಲ್ಲಿ ಇತ್ತೀಚೆಗೆ ನಡೆದ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಸುಳಿವು ದೊರತಿದ್ದು, ತನಿಖೆಯನ್ನು ರಾಜ್ಯ ಸಿಸಿಬಿ ಹಾಗೂ ಎನ್ಐಎ ತಂಡಗಳು ಜಂಟಿಯಾಗಿ ನಡೆಸುತ್ತಿವೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

6 ಮಾರ್ಚ್​​ 2024ರಂದು (ಇಂದು) ಸೈಬರ್ ಅಪರಾಧ ತನಿಖಾ ಶೃಂಗಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದ ಅವರು, "ಮಂಗಳವಾರ ಎನ್ಐಎ ಅಧಿಕಾರಿಗಳ ತಂಡ ಸ್ಫೋಟ ನಡೆದ ಸ್ಥಳಕ್ಕೆ ಭೇಟಿ ನೀಡಿ, ತನಿಖೆ ಆರಂಭಿಸಿದೆ. ರಾಜ್ಯ ಸಿಸಿಬಿ ಸಹ ತನಿಖೆಯಲ್ಲಿದ್ದಾರೆ. ಆದ್ದರಿಂದ ಎರಡೂ ತನಿಖಾ ಸಂಸ್ಥೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ" ಎಂದರು.

ಎನ್​ಐಎ ಅಧಿಕಾರಿಗಳಿಂದ ತನಿಖೆ ಚುರುಕು: ಬಾಂಬ್‌ ಸ್ಫೋಟ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳ ತಂಡ 5 ಮಾರ್ಚ್​ 2024ರಂದು ರಾಮೇಶ್ವರಂ ಕೆಫೆಗೆ ಭೇಟಿ ನೀಡಿ‌ ತನಿಖೆ ಆರಂಭಿಸಿತ್ತು. ಎನ್ಐಎ ಎಸ್.ಪಿ ನೇತೃತ್ವದ ಮೂವರು ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದು, ಕೆಫೆ ಸಿಬ್ಬಂದಿಯಿಂದ ಘಟನಾ ದಿನದ ವಿವರ ಪಡೆದುಕೊಂಡಿದ್ದರು. ಈ ತನಿಖೆ ಇನ್ನು ಮುಂದುವರಿದಿದ್ದು, ಈಗ ಆರೋಪಿ ಸುಳಿವು ನೀಡಿದವರಿಗೆ ಎನ್​ಐಎ 10 ಲಕ್ಷ ನಗದು ಬಹುಮಾನ ಘೋಷಿಸಿದೆ.

ಓದಿ: ಕೆಫೆ ಸ್ಫೋಟ ಪ್ರಕರಣದಲ್ಲಿ ಮಹತ್ವದ ಸುಳಿವು ಸಿಕ್ಕಿದೆ: ಗೃಹ ಸಚಿವ ಜಿ.ಪರಮೇಶ್ವರ್

Last Updated : Mar 6, 2024, 4:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.