ETV Bharat / state

ಕೆಫೆ ಸ್ಫೋಟ ಪ್ರಕರಣ: ನ್ಯಾಯಾಧೀಶರೆದುರು ಬಂಧಿತ ಉಗ್ರರ ಹಾಜರುಪಡಿಸಲಿರುವ ಎನ್​​​ಐಎ - Cafe Blast Case - CAFE BLAST CASE

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ಕೋಲ್ಕತ್ತಾದಲ್ಲಿ ಬಂಧಿತರಾಗಿರುವ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.

nia-to-present-bengaluru-cafe-blast-case-accused-before-judge
ಕೆಫೆ ಸ್ಫೋಟ ಪ್ರಕರಣ: ನ್ಯಾಯಾಧೀಶರೆದುರು ಬಂಧಿತ ಉಗ್ರರ ಹಾಜರುಪಡಿಸಲಿರುವ ಎನ್​​​ಐಎ
author img

By ETV Bharat Karnataka Team

Published : Apr 13, 2024, 9:57 AM IST

ಬೆಂಗಳೂರು: ಕುಂದಲಹಳ್ಳಿಯಲ್ಲಿನ ದಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ಮಾಸ್ಟರ್​ಮೈಂಡ್​​ ಹಾಗೂ ಸ್ಫೋಟಕ ಇರಿಸಿದ್ದ ಉಗ್ರನನ್ನು ಕೋಲ್ಕತ್ತಾದಲ್ಲಿ ಬಂಧಿಸಿರುವ ಎನ್​ಐಎ ಅಧಿಕಾರಿಗಳು ನಗರಕ್ಕೆ ಕರೆತಂದಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಶುಕ್ರವಾರ ತಡರಾತ್ರಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ಬಂಧಿತರನ್ನು ಕರೆ ತಂದ ಅಧಿಕಾರಿಗಳು, ಮಡಿವಾಳದ ಟೆಕ್ನಿಕಲ್ ಸೆಂಟರ್​​ನಲ್ಲಿ ಇರಿಸಿದ್ದಾರೆ. ಎರಡನೇ ಶನಿವಾರ ಹಿನ್ನೆಲೆಯಲ್ಲಿ ಎನ್ಐಎ ವಿಶೇಷ ನ್ಯಾಯಾಲಯ ಕಾರ್ಯನಿರ್ವಹಿಸದ ಕಾರಣ ಕೋರಮಂಗಲದ ಎನ್​​ಜಿವಿ ಬಡಾವಣೆಯಲ್ಲಿರುವ ನ್ಯಾಯಾಧೀಶರ ಮನೆಗೆ ಬೆಳಗ್ಗೆ 10.30 ರ ಬಳಿಕ ಕರೆದೊಯ್ದು, ಹೆಚ್ಚಿನ ವಿಚಾರಣೆಗೊಳಪಡಿಸಲು ರಿಮ್ಯಾಂಡ್ ಅರ್ಜಿ ಸಲ್ಲಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ‌. ನ್ಯಾಯಾಧೀಶರ ನಿವಾಸಕ್ಕೆ ಕರೆದೊಯ್ಯುವ ಮುನ್ನ ಉಗ್ರರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಸೆಂಟ್ ಜಾನ್ಸ್ ಆಸ್ಪತ್ರೆಗೆ‌ ಕರೆದೊಯ್ಯಲಾಗುತ್ತದೆ.

ಇದನ್ನೂ ಓದಿ: ಕೆಫೆ ಸ್ಫೋಟ ಪ್ರಕರಣ: ಕೋಲ್ಕತ್ತಾದ ಲಾಡ್ಜ್‌ನಲ್ಲಿ ಗುರುತು ಬದಲಿಸಿಕೊಂಡು ಅಡಗಿದ್ದ ಉಗ್ರರು - Cafe Blast Case

ಪ್ರಕರಣದ ಸೂತ್ರಧಾರಿ ಶಿವಮೊಗ್ಗ ಐಸಿಸ್ ಮ್ಯಾಡುಲ್​ನ ಮಾಸ್ಟರ್ ಮೈಂಡ್ ಆಗಿರುವ ಅಬ್ದುಲ್ ಮತೀನ್ ತಾಹ ಹಾಗೂ ಬಾಂಬ್ ಇಟ್ಟಿದ್ದ ಶಿವಮೊಗ್ಗ ಮುಸಾವೀರ್ ಹುಸೇನ್​ನನ್ನು ಶುಕ್ರವಾರ ಬೆಳಗ್ಗೆ ಕೊಲ್ಕತ್ತಾದ‌ ಮೇದಿನಿಪುರ ಹೋಟೆಲ್​​ನಲ್ಲಿ ಬಂಧಿಸಲಾಗಿತ್ತು. ಆರೋಪಿಗಳು ನಕಲಿ ಗುರುತು ನೀಡಿ ರೂಮಿನಲ್ಲಿ ಉಳಿದುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರ ನೆರವಿನಿಂದ ಇಬ್ಬರನ್ನೂ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು.

ಇದನ್ನೂ ಓದಿ: ಕೆಫೆ ಸ್ಫೋಟ ಪ್ರಕರಣ: ಶಂಕಿತ ಉಗ್ರರು ವಿಮಾನದ ಮೂಲಕ ಬೆಂಗಳೂರಿಗೆ - Cafe Bomb Blast Case

ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಐದಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಎನ್​ಐಎ ಅಧಿಕಾರಿಗಳು ಸುಮಾರು 43 ದಿನಗಳ ಬಳಿಕ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಆರೋಪಿಗಳಿಗೆ ಲಾಜಿಸ್ಟಿಕ್ ಬೆಂಬಲ ನೀಡಿದ ಆರೋಪದ ಮೇಲೆ ಮಾರ್ಚ್ 26ರಂದು ಚಿಕ್ಕಮಗಳೂರಿನ ಕಳಸ ಮೂಲದ ಮುಜಾಮಿಲ್ ಶರೀಫ್ ಎಂಬಾತನನ್ನು ಬಂಧಿಸಲಾಗಿತ್ತು. ಮಾರ್ಚ್ 29 ರಂದು ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಎನ್ಐಎ ಅಧಿಕಾರಿಗಳು ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದರು. ಜೊತೆಗೆ ಆರೋಪಿಗಳ ಬಂಧನಕ್ಕೆ ಸಹಾಯವಾಗಬಲ್ಲ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್​ಐಎ ಘೋಷಿಸಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.