ETV Bharat / state

ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್​ ಸ್ಪರ್ಧೆಗೆ ಅವಕಾಶ ಸಿಕ್ಕರೆ ಕಾರ್ಯಕರ್ತರಿಗೆ ಟಿಕೆಟ್ - ನಿಖಿಲ್​ ಕುಮಾರಸ್ವಾಮಿ - Nikhil Kumaraswamy - NIKHIL KUMARASWAMY

ಜನತಾದಳದ ಚಿನ್ಹೆ ಅಡಿ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಬೇಕು ಎನ್ನುವ ಸಂದರ್ಭ ಬಂದರೆ ನೂರಕ್ಕೆ ನೂರರಷ್ಟು ನಮ್ಮ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

JDS Youth Unit state president Nikhil Kumaraswamy
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Aug 24, 2024, 9:57 AM IST

Updated : Aug 24, 2024, 3:02 PM IST

ರಾಮನಗರ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಹೊಂಗನೂರು ಜಿಲ್ಲಾ ಪಂಚಾಯತ್​ ವ್ಯಾಪ್ತಿಯ ಗ್ರಾಮಗಳಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಸ್ಥಳೀಯ ಜನರ ಮತ್ತು ರೈತರ ಸಮಸ್ಯೆಗಳನ್ನು ಆಲಿಸಿದರು.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (ETV Bharat)

ಇದೇ ವೇಳೆ ಮಾತನಾಡಿದ ಅವರು, "ನಾನು ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ, ಆಕಾಂಕ್ಷಿಯೂ ನಾನಲ್ಲ. ನಾನು ಜನರ ಸಮಸ್ಯೆಯನ್ನು ಆಲಿಸಿ, ಉಪ ಚುನಾವಣೆಗೆ ಬಗ್ಗೆ ಮುಖಂಡರ ಜೊತೆ ಚರ್ಚೆ ಮಾಡಲು ಬಂದಿದ್ದೇನೆ. ಚನ್ನಪಟ್ಟಣ, ಶಿಂಗ್ಗಾವಿ, ಸಂಡೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್ ನಡೆಯಬೇಕಿದೆ. ರಾಜ್ಯದಲ್ಲಿ ಮೂರು ಕ್ಷೇತ್ರದಲ್ಲಿ ಉಪಚುನಾವಣೆ ಬಗ್ಗೆ ಶೀಘ್ರವೇ ದಿನಾಂಕ ಘೋಷಣೆಯಾಗಲಿದೆ" ಎಂದರು.

ನಾನು ಚುನಾವಣೆಗೆ ಸ್ಪರ್ಧೆ ಮಾಡಲು ಇದು ಸೂಕ್ತ ಸಮಯ ಅಲ್ಲ. ರಾಜ್ಯಾದ್ಯಂತ ಕಾರ್ಯಕರ್ತರ ಜೊತೆ ಒಡನಾಟ ಬೆಳೆಸಿಕೊಳ್ಳಬೇಕು ಅಂತ ಕೆಲಸ ಆರಂಭಿಸಿದ್ದೇನೆ ಅಷ್ಟೇ. ಏನಾದರೂ ಜನತಾದಳದ ಚಿನ್ಹೆ ಅಡಿ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಬೇಕು ಎನ್ನುವ ಸಂದರ್ಭ ಬಂದರೆ ನೂರಕ್ಕೆ ನೂರರಷ್ಟು ನಮ್ಮ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಜನರ ಸಮಸ್ಯೆ ಆಲಿಸಲು ಬಂದಿದ್ದೇನೆ: "ಹೆಚ್‌ಡಿ ಕುಮಾರಸ್ವಾಮಿ ಅವರ ಸ್ವ ಕ್ಷೇತ್ರದಲ್ಲಿ ಕೆರೆಗಳು ಖಾಲಿ ಇವೆ. ಜತೆಗೆ ಹಲವಾರು ಸಮಸ್ಯೆಗಳಿವೆ. ಹೀಗಾಗಿ ಜನರ ಸಮಸ್ಯೆ ಆಲಿಸಲು ನಾನು ಬಂದಿದ್ದೇನೆ. ಚನ್ನಪಟ್ಟಣದಲ್ಲಿ NDA ಅಭ್ಯರ್ಥಿಗೆ ಗೆಲುವಾಗಬೇಕು. ಹೀಗಾಗಿ ತಳಮಟ್ಟದಿಂದ ಎರಡೂ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ. ಈಗಾಗಲೇ ಚನ್ನಪಟ್ಟಣ ಕ್ಚೇತ್ರಕ್ಕೆ ಸಂಬಂಧಿಸಿದಂತೆ ವರದಿ ಸಿದ್ಧಪಡಿಸಿದ್ದೇವೆ. ಆ ವರದಿಯನ್ನು ಬಿಜೆಪಿ ರಾಷ್ಟ್ರೀಯ ನಾಯಕರ ಗಮನಕ್ಕೆ ಕುಮಾರಸ್ವಾಮಿ ತರುತ್ತಾರೆ‌" ಎಂದು ತಿಳಿಸಿದರು.

"ಚನ್ನಪಟಣದಲ್ಲಿ ನಾನು ಸ್ಪರ್ಧೆ ಮಾಡೋ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಿಲ್ಲ. ಸಾರ್ವತ್ರಿಕ ಚುನಾವಣೆಗೆ ಮೂರು ಮುಕ್ಕಾಲು ವರ್ಷ ಬಾಕಿ ಇದೆ. ಪಕ್ಷದ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಲು ನಾನು ಕೆಲಸ ಮಾಡಲು ಬಂದಿದ್ದೇನೆ. ಮುಂದಿನ ವಾರ ಬೇರೆ ಜಿಲ್ಲಾ ಪ್ರವಾಸದ ಸಮಯ ನಿಗದಿ ಮಾಡಿದ್ದೇನೆ. ಸದ್ಯ ಚನ್ನಪಟ್ಟಣ ಕಾರ್ಯಕರ್ತರ ಭಾವನೆಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ" ಎಂದರು.

ದೆಹಲಿ‌ ಮಟ್ಟದಲ್ಲಿ ತೀರ್ಮಾನ ಆಗುತ್ತೆ: ಇನ್ನು CP ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿ, "ಯೋಗೇಶ್ವರ್ ಬಿಜೆಪಿಯಲ್ಲಿ ಎಂಎಲ್‌ಸಿಯಾಗಿದ್ದಾರೆ. ಯೋಗೇಶ್ವರ್ ಅಥವಾ ಕುಮಾರಸ್ವಾಮಿ ಆಗಲಿ ಯಾವುದೇ ಅಪಸ್ವರಕ್ಕೆ ದಾರಿ ಮಾಡಿಕೊಟ್ಟಿಲ್ಲ. ಅಂತಿಮ ತೀರ್ಮಾನ ದೆಹಲಿ‌ ಮಟ್ಟದಲ್ಲಿ ಆಗುತ್ತೆ. ಎಲ್ಲಾ ವಿಚಾರಗಳಿಗೂ ತಲೆ ಬಾಗಿ ಒಳ್ಳೆಯ ತೀರ್ಮಾನಕ್ಕೆ ಬರುತ್ತೇವೆ. ಯೋಗೇಶ್ವರ್ ಅವರನ್ನೂ ಕೂಡ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ" ಎಂದು ಪ್ರತಿಕ್ರಿಯೆ ನೀಡಿದರು.

ನನ್ನ ಕೆಲಸ ಆರಂಭಿಸಿದ್ದೇನೆ: "ಶಾಸಕನಾಗಬೇಕು, ವಿಧಾನಸೌಧದ ಮೆಟ್ಟಿಲು ಹತ್ತಬೇಕು ಎಂಬ ನಿರೀಕ್ಷೆ ಇಟ್ಟುಕೊಂಡು‌ ಕೆಲಸ ಮಾಡುತ್ತಿಲ್ಲ. ದೇವೇಗೌಡರು ಪ್ರಾದೇಶಿಕ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಇದನ್ನು ಕುಮಾರಣ್ಣ ಉಳಿಸಿಕೊಂಡು ಬೆಳೆಸಿಕೊಂಡು ಹೋಗುತ್ತಿದ್ದಾರೆ. ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಆಗಬೇಕು. ಅದು ನನ್ನ ಕೆಲಸ ಅಂತ ಆರಂಭಿಸಿದ್ದೇನೆ" ಎಂದರು.

ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ: 'ನನಗೆ ಟಕೆಟ್ ಸಿಗುವುದು ಬಹುತೇಕ ಖಚಿತ'- ಸಿ.ಪಿ.ಯೋಗೇಶ್ವರ್ - Channapatna By Election

Last Updated : Aug 24, 2024, 3:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.