ETV Bharat / state

ರಿಯಲ್​​ ಎಸ್ಟೇಟ್​​ ದಂಧೆಕೋರರಿಗೆ ರಾಮನಗರವನ್ನು ಸ್ವರ್ಗ ಮಾಡುವ ಷಡ್ಯಂತ್ರ: ನಿಖಿಲ್ ಕುಮಾರಸ್ವಾಮಿ - Nikhil Kumaraswamy

author img

By ETV Bharat Karnataka Team

Published : Jul 10, 2024, 10:46 AM IST

ರಾಮನಗರ ನಮ್ಮ ಹೆಮ್ಮೆ. ಈ ಜಿಲ್ಲೆಯ ಹೆಸರು ಬದಲಿಸಲು ಹೊರಟವರು ಮೊದಲು ಈ ಇತಿಹಾಸ ಅರಿತರೆ ಒಳ್ಳೆಯದು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ  ನಿಖಿಲ್ ಕುಮಾರಸ್ವಾಮಿ ವಿರೋಧ
ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ನಿಖಿಲ್ ಕುಮಾರಸ್ವಾಮಿ ವಿರೋಧ (ETV Bharat)
ನಿಖಿಲ್ ಕುಮಾರಸ್ವಾಮಿ ಹೇಳಿಕೆ (ETV Bharat)

ರಾಮನಗರ: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಂಗಳವಾರ ಮಾತನಾಡಿದ ಅವರು, "ಕೆಲವರ ತುಷ್ಟೀಕರಣಕ್ಕಾಗಿ ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ. ಪುರಾಣ ಪ್ರಸಿದ್ಧ ರಾಮನಗರದ ಹೆಸರನ್ನು ಕಿತ್ತು ಹಾಕಿ, ಅದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದರಲ್ಲಿ ಯಾವ ಹಿಡೆನ್ ಅಜೆಂಡಾ ಅಡಗಿದೆಯೋ ಗೊತ್ತಿಲ್ಲ. ಆದರೆ, ಯಾರನ್ನೋ ಓಲೈಸಲು ರಾಮನಗರದ ಹೆಸರಿಗೆ ಗೇಟ್ ಪಾಸ್ ನೀಡಲಾಗುತ್ತಿದೆ ಎನ್ನುವ ಒಳಗುಟ್ಟು ಮಾತ್ರ ರಟ್ಟಾಗಿದೆ" ಎಂದರು.

"ರಿಯಲ್​​ ಎಸ್ಟೇಟ್​​ ದಂಧೆಕೋರರಿಗೆ ಜಿಲ್ಲೆಯನ್ನು ಸ್ವರ್ಗವನ್ನಾಗಿ ಮಾಡುವುದು ಈ ಷಡ್ಯಂತ್ರದ ಭಾಗ. ರಾಜಕೀಯವಾಗಿ ಬಹಳ ಎತ್ತರದ ಸ್ಥಾನದಲ್ಲಿರುವ ರಾಮನಗರ ಜಿಲ್ಲೆಯ ಹೆಗ್ಗುರುತನ್ನೇ ಸರ್ವನಾಶ ಮಾಡುವ ಹುನ್ನಾರ ನಡೆಯುತ್ತಿದೆ" ಎಂದು ಟೀಕಿಸಿದರು.

"ವಿಧಾನಸೌಧದ ಶಿಲ್ಪಿ ಕೆಂಗಲ್​​ ಹನುಮಂತಯ್ಯನವರು, ಈ ದೇಶದ ಪ್ರಧಾನಿಗಳಾಗಿದ್ದ ಹೆಚ್.ಡಿ.ದೇವೇಗೌಡರು, ಎರಡು ಬಾರಿ ರಾಜ್ಯ ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ರಾಮನಗರ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದರು. ಜಿಲ್ಲೆಯ ಹೆಸರು ಬದಲಿಸಲು ಹೊರಟವರು ಮೊದಲು ಈ ಇತಿಹಾಸ ಅರಿತರೆ ಒಳ್ಳೆಯದು. ನಮ್ಮ ರಾಮನಗರ ನಮ್ಮ ಹೆಮ್ಮೆ" ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ರಾಮನಗರಕ್ಕೆ ರಾಮನ ಬ್ರ್ಯಾಂಡ್ ಇದೆ, ಬೆಂಗಳೂರು ಬ್ರ್ಯಾಂಡ್ ಅಗತ್ಯವಿಲ್ಲ: ಅಶ್ವತ್ಥ್​ ನಾರಾಯಣ್ - ASWATHNARAYAN ATTACK ON GOVT

ETV Bharat Logo

Copyright © 2024 Ushodaya Enterprises Pvt. Ltd., All Rights Reserved.