ETV Bharat / state

ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ; ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಸಲು ನಡೆದಿದೆಯೇ ತಯಾರಿ?

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯವರನ್ನ ಕಣಕ್ಕಿಳಿಸಲು ಕೇಂದ್ರ ಸಚಿವ ಹೆಚ್​. ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎಂಬುದು ತಿಳಿದುಬಂದಿದೆ.

author img

By ETV Bharat Karnataka Team

Published : 3 hours ago

HDK and Nikhil Kumaraswamy
ಹೆಚ್​ಡಿಕೆ ಹಾಗೂ ನಿಖಿಲ್ ಕುಮಾರಸ್ವಾಮಿ (ETV Bharat)

ಬೆಂಗಳೂರು : ಹೆಚ್. ಡಿ‌ ಕುಮಾರಸ್ವಾಮಿ ಅವರು ಸಂಸದರಾಗಿ ಕೇಂದ್ರದ ಮಂತ್ರಿಯಾದ ಹಿನ್ನೆಲೆ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಉಪ ಚುನಾವಣಾ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ತಯಾರಿ ನಡೆಯುತ್ತಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಹೆಚ್. ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎಂಬುದು ತಿಳಿದುಬಂದಿದೆ.

ಇದರಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ. ಪಿ ಯೋಗೇಶ್ವರ್​ಗೆ ಹಿನ್ನೆಡೆಯಾಗುವ ಸಾಧ್ಯತೆಯಿದೆ. ಹಾಗೊಂದು ವೇಳೆ ಟಿಕೆಟ್ ದೊರೆಯದಿದ್ದರೆ ಅವರ ಮುಂದಿನ ನಡೆ ಏನು? ಎನ್ನುವ ಕುರಿತು ಚನ್ನಪಟ್ಟಣ ಕ್ಷೇತ್ರದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಹಿಂದಿನಿಂದಲೂ ಚನ್ನಪಟ್ಟಣ ಜೆಡಿಎಸ್​ನ ಭದ್ರಕೋಟೆ. ಕಳೆದ ಎರಡು ಬಾರಿ ಜೆಡಿಎಸ್ ಗೆದ್ದಿದೆ. 2013 ರಲ್ಲೂ ಜೆಡಿಎಸ್​ಗೆ ಈ ಕ್ಷೇತ್ರದಲ್ಲಿ ಹೆಚ್ಚಿನ ಮತಗಳು ಬಂದಿದ್ದವು.

ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮದೇ ಕುಟುಂಬದ ಡಾ. ಸಿ. ಎನ್ ಮಂಜುನಾಥ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿ ಸೇಡು ತೀರಿಸಿಕೊಂಡಿರುವ ಕುಮಾರಸ್ವಾಮಿ, ಇದೀಗ ಚನ್ನಪಟ್ಟಣದಲ್ಲಿ ತಮ್ಮ ಅಸ್ತಿತ್ವವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಪುತ್ರನನ್ನು ಕಣಕ್ಕಿಳಿಸಲು ಹೆಚ್​ಡಿಕೆ ಕಾರ್ಯತಂತ್ರ ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರು ಮೂರು ದಿನಗಳ ಹಿಂದೆ ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಭೆ ಕರೆದು ಸಮಾಲೋಚನೆ ನಡೆಸಿದ್ದರು.

ಈ ವೇಳೆ ಉಪ ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು. ಅಭ್ಯರ್ಥಿ ಯಾರಾಗಬೇಕು ಎನ್ನುವ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಜೆಡಿಎಸ್- ಬಿಜೆಪಿ ಎರಡು ಪಕ್ಷಗಳು ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಮಿತ್ರಪಕ್ಷ, ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಕೆಲಸ ಮಾಡಬೇಕು ಎಂದು ಮುಖಂಡರಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಅವರು ಜೆಡಿಎಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗಬೇಕು ಎಂಬ ಒತ್ತಾಯ ಇದೆ: ನಿಖಿಲ್ ಕುಮಾರಸ್ವಾಮಿ ಅವರು ಉಪ ಚುನಾವಣೆಯ ಅಭ್ಯರ್ಥಿ ಆಗಬೇಕು ಎಂಬ ಒತ್ತಡ, ಒತ್ತಾಯ ಇರುವುದು ನಿಜ. ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಅಂತ 95% ನಾಯಕರು, ಮುಖಂಡರ ಅಭಿಪ್ರಾಯವಿದೆ. ಆದರೆ‌, ನಾವು ಈಗ ಇರುವ ಸನ್ನಿವೇಶ ನೋಡಿಕೊಂಡು ನಿರ್ಧಾರ ಕೈಗೊಳ್ಳಬೇಕು. ಏನೇನು ಬೆಳವಣಿಗೆಗಳು ಇವೆ ಅಂತ ನೋಡಬೇಕು ಎಂದಿದ್ದಾರೆ.

ನವೆಂಬರ್ ಒಳಗೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಅದೇ ಸಮಯದಲ್ಲಿ ಚನ್ನಪಟ್ಟಣ ಉಪ ಚುನಾವಣೆ ನಡೆಯಬಹುದು. ಇನ್ನು ಒಂದು ವಾರದಲ್ಲಿ ಚುನಾವಣೆ ಘೋಷಣೆಯಾಗಬಹುದು. ಅಂತಿಮವಾಗಿ ದೆಹಲಿ ಮಟ್ಟದಲ್ಲಿ ಬಿಜೆಪಿಯ ಹೈಕಮಾಂಡ್ ಹಾಗೂ ನಾವು ಕುಳಿತು ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ನಾಯಕರು ವರಿಷ್ಠರಿಗೆ ಹೇಳಿದ್ದೇನು? : ರಾಜ್ಯ ಬಿಜೆಪಿಯ ಕೆಲವು ನಾಯಕರು ದೆಹಲಿಗೆ ತೆರಳಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಟಿಕೆಟನ್ನು ನಮ್ಮ ಪಕ್ಷದವರಿಗೆ ಕೊಡಬೇಕು. ಅಲ್ಲಿ ಮಿತ್ರಕೂಟದ ಅಭ್ಯರ್ಥಿಯಾಗಿ ಗೆಲ್ಲುವ ಚಾನ್ಸ್ ನಮಗಿದೆ ಎಂದು ವರಿಷ್ಠರಿಗೆ ಮನವರಿಕೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಕ್ಷೇತ್ರದ ಟಿಕೆಟ್ ಬಿಜೆಪಿಗೆ ದಕ್ಕದಿದ್ದರೆ ಹಳೆ ಮೈಸೂರಿನ ಜಿಲ್ಲೆಗಳಲ್ಲಿ ಜೆಡಿಎಸ್​ನದ್ದೇ ಏಕಸ್ವಾಮ್ಯವಾಗಿ ಬಿಜೆಪಿಯ ಶಕ್ತಿ ಕುಸಿದು ಹೋಗುತ್ತದೆ. ಇದನ್ನು ತಡೆಯುವುದಕ್ಕಾದರೂ ಚನ್ನಪಟ್ಟಣದ ಟಿಕೆಟ್ ಅನ್ನು ಬಿಜೆಪಿ ಅಭ್ಯರ್ಥಿಗೆ ಕೊಡಬೇಕು. ನಮ್ಮ ಪಕ್ಷಕ್ಕೆ ಟಿಕೆಟ್ ಸಿಕ್ಕರೆ ಜೆಡಿಎಸ್ ಕಳೆದುಕೊಳ್ಳುವುದೇನೂ ಇಲ್ಲ. ಚನ್ನಪಟ್ಟಣದಲ್ಲಿ ಈ ಸಲ ಮಿತ್ರಕೂಟದ ಟಿಕೆಟ್ ಜೆಡಿಎಸ್​ಗೆ ಸಿಕ್ಕರೆ ಅದರ ಅಭ್ಯರ್ಥಿ ಗೆಲ್ಲುವುದಿಲ್ಲ. ಹಾಗೇನಾದರೂ ಆದರೆ ಅದು ಕುಮಾರಸ್ವಾಮಿ ಅವರಿಗೆ ಡ್ರಾ ಬ್ಯಾಕ್ ಆಗುತ್ತದೆ. ಮುಖ್ಯವಾಗಿ ಬಿಜೆಪಿಗೆ ಟಿಕೆಟ್ ಸಿಗದಿದ್ದರೆ ಬಿಜೆಪಿ-ಜೆಡಿಎಸ್ ಮಿತ್ರಕೂಟದಲ್ಲಿ ಒಡಕುಂಟಾಗುವುದು ನಿಶ್ಚಿತ. ಹಾಗಾಗಿ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬುದು ರಾಜ್ಯ ಬಿಜೆಪಿಯ ಹಲವು ನಾಯಕರ ಆತಂಕ. ಹೀಗಾಗಿ, ಈ ಕುರಿತ ವಸ್ತುಸ್ಥಿತಿಯ ವಿವರವನ್ನು ಹೈಕಮಾಂಡ್ ಬಯಸುತ್ತದೆ ಅಂತ ಜೆ. ಪಿ ನಡ್ಡಾ ಅವರು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನದಾಸ್ ಅಗರ್ವಾಲ್ ಅವರಿಗೆ ಸೂಚಿಸಿದ್ದಾರೆ ಎಂಬುದು ತಿಳಿದುಬಂದಿದೆ.

ಬಿಜೆಪಿ ಉಸ್ತುವಾರಿ ಅಗರ್ವಾಲ್ ವರದಿ ಏನು? : ವರಿಷ್ಠರ ಈ ಸೂಚನೆ ಹಿನ್ನೆಲೆ ರಾಧಾಮೋಹನದಾಸ್ ಅಗರ್ವಾಲ್ ವಿವರವಾದ ವರದಿಯೊಂದನ್ನು ಇತ್ತೀಚೆಗೆ ದೆಹಲಿಗೆ ರವಾನಿಸಿದ್ದಾರೆ. ಮೂಲಗಳ ಪ್ರಕಾರ, ಈ ವರದಿಯಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿರುವ ಅಗರ್ವಾಲ್, ಚನ್ನಪಟ್ಟಣದ ಟಿಕೆಟ್ ಜೆಡಿಎಸ್​ಗೆ ಹೋದರೆ ಮಿತ್ರಕೂಟಕ್ಕೇನೂ ಹಾನಿಯಿಲ್ಲ. ಆದರೆ ಅದು ಜೆಡಿಎಸ್ ಪಕ್ಷದ ಕೈ ತಪ್ಪಿದರೆ ಮಿತ್ರಕೂಟಕ್ಕೆ ತೊಂದರೆಯಾಗುವುದು ನಿಶ್ಚಿತ ಎಂದಿದ್ದಾರೆ.

ಕರ್ನಾಟಕದ ನೆಲೆಯಲ್ಲಿ ದಿನದಿಂದ ದಿನಕ್ಕೆ ಜೆಡಿಎಸ್ ಜತೆಗಿನ‌ ಮೈತ್ರಿ ಬಿಜೆಪಿಗೇ ಹೆಚ್ಚು ಅನಿವಾರ್ಯವಾಗುತ್ತಿದೆ. ಏಕೆಂದರೆ ಇತ್ತೀಚಿನ ಬೆಳವಣಿಗೆಗಳು ಕರ್ನಾಟಕದಲ್ಲಿ ಬಿಜೆಪಿಯ ಶಕ್ತಿಯನ್ನು ಕುಗ್ಗಿಸುತ್ತಿದೆಯೇ ವಿನಃ ಜೆಡಿಎಸ್​ನ ಶಕ್ತಿಯನ್ನಲ್ಲ. ಇವತ್ತಿನ ಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ. ಕೆ‌ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಅನ್ನು ಬಿಜೆಪಿಯ ಫ್ರಂಟ್ ಲೈನ್ ನಾಯಕರಿಗಿಂತ ಪರಿಣಾಮಕಾರಿಯಾಗಿ ಎದುರಿಸುತ್ತಿರುವವರು ಹೆಚ್. ಡಿ ಕುಮಾರಸ್ವಾಮಿ ಮಾತ್ರ ಎಂದಿದ್ದಾರೆ.

ಒಂದು ಕಡೆಯಿಂದ ಸಿದ್ದರಾಮಯ್ಯ ಮತ್ತು ಡಿಕೆಶಿ ಪ್ರಯೋಗಿಸುತ್ತಿರುವ ಅಸ್ತ್ರಗಳಿಂದ ಬಿಜೆಪಿಯ ಬಹುತೇಕ ನಾಯಕರು ಅಸಹಾಯಕರಾಗಿದ್ದಾರೆ. ಆದರೆ, ಕಾಂಗ್ರೆಸ್ ಅದೆಷ್ಟೇ ದಾಳಿ ಮಾಡಿದರೂ ಕುಮಾರಸ್ವಾಮಿ ಮಾತ್ರ ಜಗ್ಗುತ್ತಿಲ್ಲ. ಮಿತ್ರಕೂಟದ ಮುಂಚೂಣಿಯಲ್ಲಿ ನಿಂತು ಕಾಂಗ್ರೆಸ್ ವಿರುದ್ಧ ಹೋರಾಡುವ ವಿಷಯದಲ್ಲಿ ಕುಮಾರಸ್ವಾಮಿ ಅವರೇ ಪವರ್ ಫುಲ್ ನಾಯಕ. ಹೀಗಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ವಿರುದ್ಧ ಮಿತ್ರಕೂಟವನ್ನು ಮುನ್ನಡೆಸಲು ಕುಮಾರಸ್ವಾಮಿ ಅವರ ಶಕ್ತಿ ಅನಿವಾರ್ಯ. ಹೀಗಿರುವಾಗ, ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಟಿಕೆಟ್ ಬಿಜೆಪಿಯ ಕೈ ತಪ್ಪಿದರೆ ಮಿತ್ರಕೂಟದಲ್ಲಿ ಬಿರುಕುಂಟಾಗುತ್ತದೆ ಎಂಬುದು ಸುಳ್ಳು.

ಜೆಡಿಎಸ್ ಪಕ್ಷ ಮೈತ್ರಿ ಧರ್ಮವನ್ನು ಉಲ್ಲಂಘಿಸಿಲ್ಲ: ಇದೇ ರೀತಿ ಚನ್ನಪಟ್ಟಣ ಕ್ಷೇತ್ರದಲ್ಲಿ ಕಳೆದ ಬಾರಿ ಗೆದ್ದಿರುವುದು ಜೆಡಿಎಸ್. ಹೀಗಾಗಿ ಅದು ಜೆಡಿಎಸ್​ನ ಕ್ಷೇತ್ರ. ನಮ್ಮ ಪವರ್ ಬೆಳೆಸಿಕೊಳ್ಳಲು ಆ ಕ್ಷೇತ್ರವನ್ನು ನಮಗೆ ಬಿಟ್ಟುಕೊಡಿ ಎಂದು ಹೇಳುವುದು ಮೈತ್ರಿಧರ್ಮಕ್ಕೆ ವಿರುದ್ಧವಾದುದು. ವಸ್ತುಸ್ಥಿತಿ ಎಂದರೆ ಬಿಜೆಪಿ ಜತೆಗಿನ ಹೊಂದಾಣಿಕೆಯ ನಂತರ ಜೆಡಿಎಸ್ ಪಕ್ಷ ಮೈತ್ರಿ ಧರ್ಮವನ್ನು ಉಲ್ಲಂಘಿಸಿಲ್ಲ.

ಲೋಕಸಭಾ ಚುನಾವಣೆಯಲ್ಲಿ ಅದು ಮೈತ್ರಿಧರ್ಮವನ್ನು ಉಲ್ಲಂಘಿಸಿದ್ದರೆ ಮಿತ್ರಕೂಟಕ್ಕೆ 19 ಸೀಟು ದಕ್ಕಲು ಸಾಧ್ಯವೇ ಇರಲಿಲ್ಲ. ನಮ್ಮ ಶಕ್ತಿ ಹೆಚ್ಚಿರುವ ಉತ್ತರ ಕರ್ನಾಟಕದ ಕ್ಷೇತ್ರಗಳಲ್ಲಿ ನಾವು ಕಳೆದುಕೊಂಡಿದ್ದೇ ಹೆಚ್ಚು. ಆದರೆ ಜೆಡಿಎಸ್ ಪ್ರಾಬಲ್ಯ ಹೆಚ್ಚಿರುವ ಹಳೆ ಮೈಸೂರಿನ ಕ್ಷೇತ್ರಗಳಲ್ಲಿ ನಾವು ಪಡೆದುಕೊಂಡಿದ್ದು ಹೆಚ್ಚು ಎಂಬ ಮಾಹಿತಿಯನ್ನು ರಾಧಾಮೋಹನದಾಸ್ ಅಗರ್ವಾಲ್ ಅವರು ದೆಹಲಿ ವರಿಷ್ಠರಿಗೆ ರವಾನಿಸಿದ್ದಾರೆ ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ : ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ; ಕಾರ್ಯಕರ್ತರು, ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಹೆಚ್​ಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.