ETV Bharat / state

ನಮ್ಮ ತಂದೆಗೆ 3 ಆಪರೇಷನ್ ಆಗಿದೆ, ಅನುಕಂಪದಲ್ಲಿ ಮತ ಕೇಳುವ ಪ್ರಮೇಯ ನಮಗಿಲ್ಲ: ನಿಖಿಲ್ ಕುಮಾರಸ್ವಾಮಿ - nikhil kumaraswamy - NIKHIL KUMARASWAMY

ಜೆಡಿಎಸ್​ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

nikhil-kumaraswamy-reaction-on-mla-ramesh-bandisiddegowda-statement-over-kumaraswamy
ನಮ್ಮ ತಂದೆಗೆ 6 ವರ್ಷದಲ್ಲಿ 3 ಆಪರೇಷನ್ ಆಗಿದೆ, ಅನುಕಂಪದಲ್ಲಿ ಮತ ಕೇಳುವ ಪ್ರಮೇಯ ನಮಗಿಲ್ಲ: ನಿಖಿಲ್
author img

By ETV Bharat Karnataka Team

Published : Mar 30, 2024, 8:52 PM IST

Updated : Mar 30, 2024, 9:00 PM IST

ನಿಖಿಲ್ ಕುಮಾರಸ್ವಾಮಿ

ಮಂಡ್ಯ: ರೈತನ ಮಗ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಸ್ಪರ್ಧಿಸುತ್ತಿರುವುದು ಅನಿರೀಕ್ಷಿತ ಬೆಳವಣಿಗೆ. 2019ರಲ್ಲಿ ಚುನಾವಣೆಯ ಸೋಲಿನ ಆಕ್ರೋಶ ನಮ್ಮ ಕಾರ್ಯಕರ್ತರಲ್ಲಿ ಇದೆ. ರಾಜಕೀಯ ಷಡ್ಯಂತ್ರದಿಂದ ಯುವಕ ಬಲಿಯಾಗಿದ್ದಾನೆ, ಹೀಗಾಗಿ ನಿಖಿಲ್​ ಕುಮಾರಸ್ವಾಮಿಯನ್ನು ಮಂಡ್ಯದಲ್ಲಿ ಕಣಕ್ಕಿಳಿಸಬೇಕು ಎಂದು ನಮ್ಮ ಮುಖಂಡರು ಮತ್ತು ಕಾರ್ಯಕರ್ತರು ಸಲಹೆಯನ್ನು ನೀಡಿದ್ದರು ಎಂದು ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಾಗಮಂಗಲ ಪಟ್ಟಣದ ಬಡಗೂಡಮ್ಮ ದೇವಾಲಯದ ಆವರಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರೈತರು, ಕಾವೇರಿ ನೀರು ಹಾಗೂ ಅಭಿವೃದ್ದಿಯ ವಿಚಾರದಲ್ಲಿ ಮಂಡ್ಯ ಜಿಲ್ಲೆಗೆ ಅನ್ಯಾಯವಾಗಿದೆ. ಹೀಗಾಗಿ ಕುಮಾರಸ್ವಾಮಿ ಅವರೇ ಮಂಡ್ಯದ ಅಭ್ಯರ್ಥಿಯಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಕಾರ್ಯಕರ್ತರ ಒತ್ತಡಕ್ಕೆ ಮಣಿದು ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಿದ್ದಾರೆ ಎಂದರು.

ಕಾಂಗ್ರೆಸ್ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹೇಳಿಕೆ ಬಗ್ಗೆ ಮಾತನಾಡಿ, ನಮ್ಮ ತಂದೆಗೆ ಆರು ವರ್ಷದಲ್ಲಿ ಮೂರು ಬಾರಿ ಶಸ್ತ್ರ ಚಿಕಿತ್ಸೆಯಾಗಿದೆ. ಅದನ್ನೆಲ್ಲಾ ಪ್ರೂವ್ ಮಾಡಬೇಕಾ?. ಮೊಸಳೆ ಕಣ್ಣೀರು ಸುರಿಸಿ, ಅನುಕಂಪದ ಮೇಲೆ ಮತ ಕೇಳುವ ಪ್ರಮೇಯ ನಮಗಿಲ್ಲ. ಜಿಲ್ಲೆಯ ಜನತೆ ನೋಡಿರುತ್ತಾರೆ, ಆ ರೀತಿ ಮಾತನಾಡಬೇಡಿ. ಕುಮಾರಸ್ವಾಮಿ ಬಂದು ಇಲ್ಲಿ ಸ್ಪರ್ಧೆ ಮಾಡ್ತಿರೋದು ಅವರಿಗೆ ಸಹಿಸಲಾಗುತ್ತಿಲ್ಲ. ಹಾಗಾಗಿ ಈ ರೀತಿ ಲಘುವಾದ ಹೇಳಿಕೆ‌ ನೀಡುತ್ತಿದ್ದಾರೆ. ಇದಕ್ಕೆಲ್ಲಾ ಸೂಕ್ತ ಸಮಯದಲ್ಲಿ ಸೂಕ್ತ ಉತ್ತರವನ್ನು ನೀಡುತ್ತಾರೆ ಎಂದು ತಿರುಗೇಟು ನೀಡಿದರು.

ಕುಮಾರಣ್ಣ ಎಲ್ಲೇ ಹೋಗಿ ಸ್ಪರ್ಧೆ ಮಾಡಲು ಈ ರಾಜ್ಯದ ಜನರು ಶಕ್ತಿ ಕೊಟ್ಟಿದ್ದಾರೆ. ಜನರು ಕುಮಾರಣ್ಣನ ಸ್ಪರ್ಧೆ ನಿರ್ಧಾರ ಮಾಡ್ತಾರೆ. ಬೇರೆ ಯಾರು ಅವರ ಸ್ಪರ್ಧೆ ನಿರ್ಣಯ ಮಾಡಲ್ಲ. ಜನರ ಆಶಯದಂತೆ ಕುಮಾರಣ್ಣ ಮಂಡ್ಯದಲ್ಲಿ ಸ್ಪರ್ಧೆ ಮಾಡಿದ್ದಾರೆ. ನಾವು ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಏ.4 ರಂದು ಅವರು ನಾಮಪತ್ರ ಸಲ್ಲಿಕೆ ‌ಮಾಡಲಿದ್ದಾರೆ. ಎರಡು ಪಕ್ಷದ ಕಾರ್ಯಕರ್ತರು ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ಮಾಜಿ ಸಚಿವ ನಾರಾಯಣ್ ಗೌಡ ಮಾತನಾಡಿ, ಜೆಡಿಎಸ್‌ ನಾಯಕರು ಅಣ್ಣ - ತಮ್ಮಂದಿರ ರೀತಿ ಇದ್ದೀವಿ. ಮಂಡ್ಯಗೆ ಕುಮಾರಣ್ಣ ಬಂದಿರೋದು ನಮ್ಮ ಅದೃಷ್ಟ. ಕುಮಾರಣ್ಣ ರಾಜ್ಯದ ನಾಯಕ. ಅವರು ಮಂಡ್ಯದಲ್ಲಿ ಗೆದ್ದು‌ ಕೇಂದ್ರ ಸಚಿವರಾಗಬೇಕು ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ಕೋಲಾರ ಕಗ್ಗಂಟು, ಒಳ ಜಗಳದಲ್ಲಿ ಜೆಡಿಎಸ್​ಗೆ ಒಲಿಯುವುದೇ ಅದೃಷ್ಟ? - Lok Sabha election

Last Updated : Mar 30, 2024, 9:00 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.