ETV Bharat / state

ಸರ್ಕಾರದ ಹಗರಣ ಮುಚ್ಚಿಕೊಳ್ಳಲು ಗಲಾಟೆ ಮಾಡಿಸುತ್ತಿದ್ದಾರೆ: ನಿಖಿಲ್​ ಕುಮಾರಸ್ವಾಮಿ - Nikhil Kumaraswamy - NIKHIL KUMARASWAMY

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಮೈಸೂರಿನ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ, ಪೂಜೆ ನೆರವೇರಿಸಿದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಪ್ರವಾಸ ಮಾಡಿ ಸದಸ್ಯತ್ವ ನೊಂದಣಿ ಹಾಗೂ ಪಕ್ಷದ ಬಲವರ್ಧನೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

Nikhil kumaraswamy
ಚಾಮುಂಡೇಶ್ವರಿ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Sep 18, 2024, 5:47 PM IST

Updated : Sep 18, 2024, 7:37 PM IST

ಚಾಮುಂಡೇಶ್ವರಿ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ (ETV Bharat)

ಮೈಸೂರು: ''ರಾಜ್ಯ ಸರ್ಕಾರ ಯಾವ ರೀತಿ ನಡೆದುಕೊಳ್ಳುತ್ತಿದೆ ಎಂದು ಜನರಿಗೆ ಗೊತ್ತಾಗುತ್ತಿದೆ. ಸರ್ಕಾರ ಹಗರಣದಲ್ಲಿ ನಿರತವಾಗಿದ್ದು, ಅದನ್ನು ಮುಚ್ಚಿಕೊಳ್ಳಲು ಗಲಾಟೆ ಮಾಡಿಸುತ್ತಿದ್ದಾರೆ'' ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ''ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಒಂದು ಸಮುದಾಯದ ಓಲೈಕೆಗಾಗಿ ಇನ್ನೊಂದು ಸಮುದಾಯವನ್ನು ಕೈ ಬಿಟ್ಟಿದ್ದಾರೆ. ಮಂಡ್ಯದ ಜನ ಪ್ರಬುದ್ಧರಿದ್ದಾರೆ. ಎಲ್ಲವನ್ನೂ ಗಮನಿಸುತ್ತಿದ್ದಾರೆ'' ಎಂದು ಹೇಳಿದರು.

''ರಾಜ್ಯದಲ್ಲಿ ಮೂರು ಉಪಚುನಾವಣೆಗಳು ನಡೆಯಲಿವೆ. ಸಂಡೂರು, ಶಿಗ್ಗಾವಿ ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಜೊತೆಗೆ ಸ್ಥಳೀಯ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯತಿ ಚುನಾವಣೆಗಳು ಅತೀ ಶೀಘ್ರದಲ್ಲಿ ಬರುತ್ತಿದ್ದು, ನಾವು ಪೂರ್ವ ಸಿದ್ಧತೆಗಳನ್ನು ಮಾಡುತ್ತಿದ್ದೇವೆ'' ಎಂದು ತಿಳಿಸಿದರು.

ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿ ಕಣಕ್ಕೆ: ಚನ್ನಪಟ್ಟಣ ಉಪ ಚುನಾವಣೆ ವಿಚಾರ ಮಾತನಾಡಿ, ''ಈಗಾಗಲೇ ಸಿ.ಪಿ.ಯೋಗೇಶ್ವರ್ ಕೂಡ ಸಭೆಗಳನ್ನು ಮಾಡುತ್ತಿದ್ದಾರೆ. ನಾವು ಕೂಡ ನಮ್ಮ ಕಾರ್ಯಕರ್ತರ ಜೊತೆ ಸಭೆ ನಡೆಸುತ್ತಿದ್ದೇವೆ. ಒಟ್ಟಾರೆ ಎನ್​ಡಿಎ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ. ನಾನು ನಿಲ್ಲುತ್ತೇನೋ, ಇನ್ಯಾರೋ ನಿಲ್ಲುತ್ತಾರೆ ಎಂಬುದು ಸದ್ಯಕ್ಕೆ ಪ್ರಶ್ನೆ ಇಲ್ಲ. ಇನ್ನೂ ಚುನಾವಣೆ ದಿನಾಂಕವೂ ಪ್ರಕಟವಾಗಿಲ್ಲ. ಕಾರ್ಯಕರ್ತರ ಭಾವನೆಗೆ ತಕ್ಕಂತೆ ಕೆಲಸ ಮಾಡುತ್ತಿದ್ದೇವೆ'' ಎಂದು ತಿಳಿಸಿದರು.

ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ: ಶಾಸಕ ಮುನಿರತ್ನ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ''ತನಿಖೆ ನಡೆಯುತ್ತಿದೆ. ಎಫ್​ಎಸ್​ಎಲ್​ ವರದಿ ಬರಬೇಕಿದೆ. ಬಂದ ನಂತರ ಸತ್ಯಾಸತ್ಯತೆ ಹೊರಬರಲಿದೆ. ರಾಜ್ಯ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಪಿಎಸ್ಐ ಪರಶುರಾಮ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯ ಸರ್ಕಾರ ಯಾವ ರೀತಿ ಕ್ರಮ ಜರುಗಿಸಿದೆ ಎಂಬುದನ್ನು ನೋಡಿದ್ದೇವೆ'' ಎಂದು ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.

''ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ವಿಚಾರ ಪ್ರಕರಣ ಕೋರ್ಟ್​​ನಲ್ಲಿದೆ. ಕೋರ್ಟ್ ತೀರ್ಪು ಕಾಯ್ದಿರಿಸಿದೆ. ಸದ್ಯಕ್ಕೆ ಆ ಬಗ್ಗೆ ಮಾತನಾಡಲ್ಲ'' ಎಂದು ಪ್ರತಿಕ್ರಿಯಿಸಿದರು.

''ಪಕ್ಷದ ವರಿಷ್ಠ ದೇವೇಗೌಡರು ಮತ್ತು ಕುಮಾರಣ್ಣನ ಸೂಚನೆ ಮೇರೆಗೆ ರಾಜ್ಯದ 31 ಜಿಲ್ಲೆಗಳಲ್ಲಿಯೂ ಪ್ರವಾಸ ಮಾಡಿ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಬಲವರ್ಧನೆ ಮಾಡುತ್ತೇವೆ'' ಎಂದು ನಿಖಿಲ್​ ಇದೇ ವೇಳೆ, ತಿಳಿಸಿದರು.

ಇದನ್ನೂ ಓದಿ: ಚೀನಾ ಉಕ್ಕಿನ ಮೇಲೆ ಆಮದು ಸುಂಕದ ಬಗ್ಗೆ ಹಣಕಾಸು ಸಚಿವರೊಂದಿಗೆ ಚರ್ಚಿಸಿ ನಿರ್ಧಾರ: ಹೆಚ್.ಡಿ‌.ಕುಮಾರಸ್ವಾಮಿ - Import Duty On Chinese Steel

Last Updated : Sep 18, 2024, 7:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.