ETV Bharat / state

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ: ನಿರ್ಮಲಾ ಸೀತಾರಾಮನ್ - NIRMALA SITHARAMAN IN DHARMASTHALA

ಹೆಣ್ಮಕ್ಕಳು ನಾಯಕತ್ವ ವಹಿಸಿದರೆ ಏನಾಗುತ್ತೆ ಅನ್ನುವುದಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉತ್ತಮ ಉದಾಹರಣೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದರು.

Nirmala Sitharaman praised the work of Dharmasthala Self Help Society
ನಿರ್ಮಲಾ ಸೀತಾರಾಮನ್​ (ಈಟಿವಿ ಭಾರತ್​)
author img

By ETV Bharat Karnataka Team

Published : Nov 14, 2024, 5:37 PM IST

ಬೆಳ್ತಂಗಡಿ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ನಡೆಯುತ್ತಿದೆ. ಇಂದು ದೇಶದಲ್ಲಿ ಕೃಷಿ ಕ್ಷೇತ್ರದ ಕ್ರಾಂತಿಯಾಗಿದೆ. ದೇಶದ ಜನರಿಗೆ ಸಾಕಾಗುವಷ್ಟು ಅಕ್ಕಿ, ಧವಸ ಧಾನ್ಯ ಉತ್ಪಾದನೆಯಾಗುತ್ತಿದೆ. ರೈತರು ಸಶಕ್ತರಾಗಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಅವರು ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು, ಇದರ ಲಾಭಾಂಶ ಪಡೆದ ಎಲ್ಲರಿಗೂ ಧನ್ಯವಾದ ತಿಳಿಸಿದರು.

Nirmala Sitharaman praised the work of Dharmasthala Self Help Society
ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್​ (ಈಟಿವಿ ಭಾರತ್​​)

ಈ ರೀತಿಯ ಕಾರ್ಯಕ್ರಮಗಳಿಂದ ಇಂದು ಮಹಿಳೆಯರು ಸ್ವಯಂ ಗೌರವದಿಂದ ದುಡಿಯುತ್ತಿದ್ದಾರೆ. ನೀವು ಕೊಡುವ ಹಣ ಲಾಭದ ರೂಪದಲ್ಲಿ ಗೌರವಪೂರ್ವಕವಾಗಿ ನಿಮಗೆ ವಾಪಸ್ ಬಂದಿದೆ. ಗ್ರಾಮೀಣ ಅಭಿವೃದ್ಧಿಗೆ ಜನರ ಹಣ ಬಳಕೆಯಾಗುತ್ತಿದೆ. ಕೋವಿಡ್ ಸಮಯದಲ್ಲಿ ಆತ್ಮನಿರ್ಭರ್ ಭಾರತ್ ಘೋಷಣೆ ಮಾಡಿದ ಬಳಿಕ 5 ಮಿನಿ ಬಜೆಟ್ ಗಳನ್ನು ರಾಷ್ಟ್ರಕ್ಕೆ ಅರ್ಪಿಸಿದ್ದೇವೆ. ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಗ್ರಾಮದ ಅಭಿವೃದ್ಧಿಗೆ ಕಾರಣರಾಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಕೂಡ ಇದೇ ಆಗಿದೆ. ಹೆಣ್ಮಕ್ಕಳು ನಾಯಕತ್ವ ವಹಿಸಿದರೆ ಏನಾಗುತ್ತೆ ಅನ್ನುವುದಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉತ್ತಮ ಉದಾಹರಣೆ. ಧರ್ಮಸ್ಥಳ ಇದು ಗ್ರಾಮೀಣ ಯೋಜನೆಯ ಪ್ರಯೋಗಾಲಯ ಎಂದರೆ ತಪ್ಪಾಗಲಾರದು ಎಂದು ಸಂಘದ ಕಾರ್ಯ ಶ್ಲಾಘಿಸಿದರು.

ಸ್ವಸಹಾಯ ಸಂಘದ ಸದಸ್ಯರಿಗೆ ಲಾಭಾಂಶದ ಚೆಕ್ ವಿತರಣೆ (ಈಟಿವಿ ಭಾರತ್​)

ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ದೇಶದ ಆರ್ಥಿಕ ಮಂತ್ರಿಯಾದರೆ ನಾವು ನಮ್ಮ ಸಂಘದ ಮಹಿಳೆಯರನ್ನು ಆರ್ಥಿಕ ಮಂತ್ರಿಯನ್ನಾಗಿ ಮಾಡಿದ್ದೇವೆ. ಯೋಜನೆಯಲ್ಲಿ ಶೇ 62ರಷ್ಟು ಮಹಿಳೆಯರು ಇದ್ದರೆ ಶೇ. 38 ಮಂದಿ ಪುರುಷರು ಇದ್ದಾರೆ. ಮಹಿಳೆಯರನ್ನು ಮಾತ್ರವಲ್ಲದೆ ಪುರುಷರನ್ನು ನಂಬಿ ಸಾಲ ಕೊಟ್ಟವರು ನಾವು. ಎಲ್ಲ ಸಂಘಗಳು ಶಿಸ್ತುಬದ್ಧವಾಗಿ ಕೆಲಸ ಮಾಡಿದರೆ ಏನು ಪ್ರಯೋಜನವಾಗುತ್ತದೆ ಅನ್ನುವುದಕ್ಕೆ ಲಾಭಾಂಶ ವಿತರಣೆ ಕಾರ್ಯಕ್ರಮ ಸಾಕ್ಷಿ. ಬ್ಯಾಂಕ್ ನಿಮ್ಮನ್ನು ನಂಬಿ ನಮಗೆ ಸಾಲ ಕೊಟ್ಟಿದೆ. ನಾವು ನಿಮ್ಮನ್ನು ನಂಬಿ ಸಾಲ ಕೊಟ್ಟಿದ್ದೇವೆ. ಹೆಣ್ಮಕ್ಕಳ ಕೈಗೆ ಹಣ ಕೊಟ್ಟಲ್ಲಿ ಹಣದ ಸರಿಯಾದ ಬಳಕೆಯಾಗುತ್ತದೆ. ನೀವು ಗೃಹಲಕ್ಷ್ಮಿಯಾಗಿದ್ದೀರಿ. ನಿಮ್ಮಿಂದ ಸಂಸ್ಥೆಗೆ ಕೀರ್ತಿ ಬಂದಿದೆ ಎಂದರು. ಬಳಿಕ ಸಂಘಗಳ ಸದಸ್ಯರಿಗೆ ಲಾಭಾಂಶದ ಚೆಕ್ ಅನ್ನು ವಿತರಣೆ ಮಾಡಲಾಯಿತು.

ನಬಾರ್ಡ್ ಬ್ಯಾಂಕ್ ಅಧ್ಯಕ್ಷ ಶಾಜಿ ಕೆ. ವಿ. ಮಾತಾಡಿ, 1992ರಲ್ಲಿ ನಬಾರ್ಡ್ ಪ್ರಾರಂಭಗೊಂಡಿದ್ದು ಅಂದಿನಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜೊತೆಗೂಡಿ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತ ಬಂದಿದೆ. ಈಗ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿ ನಡೆಯುತ್ತಿರುವುದು ಖುಷಿಯ ವಿಚಾರ. ಸಣ್ಣ ಮಧ್ಯಮ ಉದ್ಯಮಗಳಿಗೆ ಸ್ವ-ಸಹಾಯ ಸಂಘಗಳು ಬೆಂಬಲ ನೀಡುತ್ತಿರುವ ಕಾರಣ ಗ್ರಾಮೀಣ ಮಟ್ಟದಲ್ಲಿ ಬಹಳಷ್ಟು ಅಭಿವೃದ್ಧಿಯಾಗಿದೆ. 600 ಕೋಟಿಯಷ್ಟು ದೊಡ್ಡ ಮೊತ್ತ ಲಾಭವನ್ನು ಸ್ವ-ಸಹಾಯ ಸಂಘದ ಸದಸ್ಯರಿಗೆ ಹಂಚುವ ಸಂಘದ ಕ್ರಮ ಮೆಚ್ಚುಗೆ ಅರ್ಹವಾಗಿದೆ ಎಂದರು.

ಇದನ್ನೂ ಓದಿ: ಉಡುಪಿ : ಕೃಷ್ಣ ಮಠದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.