ETV Bharat / state

2024ರ ಅಂತ್ಯಕ್ಕೆ ಕರ್ನಾಟಕ ರಸ್ತೆಗಳು ಅಮೆರಿಕದ ರಸ್ತೆಗಳಿಗೆ ಸಮ: ನಿತಿನ್ ಗಡ್ಕರಿ

ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ 4,000 ಕೋಟಿ ರೂ.ಗೂ ಅಧಿಕ ವೆಚ್ಚದ 266 ಕಿ.ಮೀ ಉದ್ದದ 22 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ನೆರವೇರಿಸಿದರು.

Nitin Gadkari speaks on National Highway Projects
ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ
author img

By ETV Bharat Karnataka Team

Published : Mar 10, 2024, 6:27 PM IST

ಮೈಸೂರು: "ಕರ್ನಾಟಕದ ಅಭಿವೃದ್ಧಿ ಉತ್ತಮವಾಗಿದೆ. 4,000 ಕೋಟಿಯ ಕಾಮಗಾರಿ ನಡೆಯುತ್ತಿದೆ. 2024ರ ಅಂತ್ಯಕ್ಕೆ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳುತ್ತವೆ" ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇದೇ ವೇಳೆ, 2024ರ ಅಂತ್ಯಕ್ಕೆ ಕರ್ನಾಟಕ ರಸ್ತೆಗಳ ಚಿತ್ರಣ ಬದಲಾಗಲಿದ್ದು, ಅಮೆರಿಕದ ರಸ್ತೆಗಳಿಗೆ ಸಮನಾಗಿ ಇರಲಿವೆ ಎಂದರು.

ರಾಜ್ಯ ಸರ್ಕಾರದಿಂದ ಇತರೆ ರಸ್ತೆ ಕಾಮಗಾರಿಗಳ ಪ್ರಸ್ತಾವನೆ ಬಂದಿದೆ. ಇನ್ನಾವುದೇ ಪ್ರಸ್ತಾವನೆಗಳಿದ್ದಲ್ಲಿ ಅವುಗಳನ್ನು ನೀಡಿದರೆ ಎಲ್ಲವನ್ನೂ ಪರಿಶೀಲಿಸಿ ಡಿಪಿಆರ್ ಮಾಡಲು ಒಪ್ಪಿಗೆ ನೀಡಲಾಗುವುದು ಎಂದು ತಿಳಿಸಿದರು.

Nitin Gadkari speaks on National Highway Projects
ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ

ಕರ್ನಾಟಕ ಸಾಂಸ್ಕೃತಿಕ ನೆಲೆಬೀಡು. ಇಲ್ಲಿನ ಸಾಹಿತ್ಯ, ಸಂಸ್ಕೃತಿ ರಾಜ್ಯದ ಇತಿಹಾಸವನ್ನು ಬಿಂಬಿಸುತ್ತವೆ. ಇದೇ ಡಿಸೆಂಬರ್ ವೇಳೆಗೆ ಬೆಂಗಳೂರು ರಿಂಗ್ ರೋಡ್ ಕಾಮಗಾರಿ ಪೂರ್ಣಗೊಳ್ಳಲಿದ್ದು, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರ ಆಗಲಿದೆ. ಮುಂದಿನ ವರ್ಷದ ಜನವರಿ ಆರಂಭದಲ್ಲಿ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಹೈವೇ ಕಾಮಗಾರಿ ಆರಂಭವಾಗಲಿದ್ದು, ಮೈಸೂರು-ಹಾಸನಕ್ಕೆ ರಿಂಗ್ ರಸ್ತೆ, ಕುಶಾಲನಗರ-ಮಾಣಿ ರಸ್ತೆಗೆ ಡಿಪಿಆರ್, ಮೈಸೂರು-ನಂಜನಗೂಡಿಗೆ ಆರು ಪಥದ ರಸ್ತೆ ನಿರ್ಮಾಣ ಮಾಡುವುದಾಗಿ ಸಚಿವರು ತಿಳಿಸಿದರು.

ಹುಳಿಯಾರ್-ಕೆಬಿ ಕ್ರಾಸ್-ಚುಂಚನಹಳ್ಳಿ-ನೆಲ್ಲಿಗೆರೆ ರಸ್ತೆಯಂತಹ ಯೋಜನೆ ಮೈಸೂರು ಮತ್ತು ಉತ್ತರ ಕರ್ನಾಟಕದ ನಡುವೆ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಮೈಸೂರು ರಿಂಗ್​ ರೋಡ್​​, ಸರ್ವಿಸ್ ರೋಡ್​ ಸಂಚಾರ ದಟ್ಟಣೆ ನಿವಾರಿಸಲು ಸಹಕಾರಿಯಾಗಲಿದೆ. ಬೇಲೂರು-ಹಾಸನ ಮತ್ತು ಯಡೇಗೌಡನಹಳ್ಳಿ-ಬಿಳಿಕೆರೆ ರಸ್ತೆಯ 4-ಲೇನ್ ವಿಸ್ತರಣೆ, ಹಂಗರಹಳ್ಳಿ ಮತ್ತು ಹೊಳೆನರಸೀಪುರ ಬೈಪಾಸ್‌ನಲ್ಲಿ ಆರ್​.ಒ.ಬಿಗಳ (Road Over Bridge) ನಿರ್ಮಾಣದಿಂದ ಪ್ರಯಾಣದಲ್ಲಿ 2-ಗಂಟೆಗಳ ಕಡಿತವನ್ನು ನಿರೀಕ್ಷಿಸಲಾಗಿದೆ. ಇನ್ನು, ಲಕ್ಷ್ಮಣತೀರ್ಥ ನದಿ ಮೇಲೆ ಸೇತುವೆಯ ನಿರ್ಮಾಣವು ಹುಣಸೂರು ಪಟ್ಟಣದ ಜನದಟ್ಟಣೆಯನ್ನು ನಿಯಂತ್ರಿಸಲು ಸಹಕಾರಿಯಾಗಲಿದೆ. ಶ್ರೀನಿವಾಸಪುರ ಮತ್ತು ಚಿಂತಾಮಣಿ ಬೈಪಾಸ್‌ಗಳ ಅಭಿವೃದ್ಧಿಯು ಎರಡೂ ನಗರಗಳಲ್ಲಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶ ಹೊಂದಿದೆ.

ಇದನ್ನೂ ಓದಿ: ಸಮುದ್ರಕ್ಕೆ ಧುಮುಕಿ ಶವಾಸನ ಮಾಡಿದ ಸಚಿವ ಮಂಕಾಳ ವೈದ್ಯ: ವಿಡಿಯೋ ನೋಡಿ

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಮುನಿಸ್ವಾಮಿ, ಶಾಸಕರಾದ ಹೆಚ್.ಡಿ.ರೇವಣ್ಣ, ಹೆಚ್.ವಿಶ್ವನಾಥ್, ಸಿ.ಎನ್.ಮಂಜೇಗೌಡ, ಶ್ರೀವತ್ಸ, ಜಿ.ಡಿ.ಹರೀಶ್ ಗೌಡ ಉಪಸ್ಥಿತರಿದ್ದರು.

ಇದನ್ನೂ ಓದಿ: ಕೊರಗಜ್ಜನ ಆದಿಸ್ಥಳಕ್ಕೆ ದರ್ಶನ್ ​ಭೇಟಿ: 'ಸುಮಲತಾ ಹೆತ್ತತಾಯಿ' ಎಂದ ನಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.