ETV Bharat / state

ವಿಜಯ್​ ಟಾಟಾಗೆ ಬೆದರಿಕೆ ಆರೋಪ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಬೇಡ - ಹೈಕೋರ್ಟ್ - HIGH COURT

ಜೆಡಿಎಸ್​ ಮಾಜಿ ಮುಖಂಡ ವಿಜಯ್​ ಟಾಟಾಗೆ ಬೆದರಿಕೆ ಆರೋಪ ಸಂಬಂಧ ಕೇಂದ್ರ ಸಚಿವ ಹೆಚ್​. ಡಿ ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್​ ಮಧ್ಯಂತರ ಆದೇಶ ಮಾಡಿದೆ.

high-court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Nov 7, 2024, 10:40 PM IST

ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗಾಗಿ 50 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟು, ಬೆದರಿಕೆ ಹಾಕಿದ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್‌. ಡಿ ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

ಜೆಡಿಎಸ್‌ ಮಾಜಿ ಮುಖಂಡ ವಿಜಯ್‌ ಟಾಟಾ ದೂರಿನ ಮೇರೆಗೆ ಅಮೃತಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಹೆಚ್‌. ಡಿ ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಇದೇ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಜೆಡಿಎಸ್‌ ನಗರದ ಘಟಕದ ಅಧ್ಯಕ್ಷ ರಮೇಶ್‌ ಗೌಡ ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಆದೇಶ ಮಾಡಲಾಗಿದೆ ಎಂದು ಪೀಠಕ್ಕೆ ವಿವರಿಸಿದರು.

ವಾದ ಆಲಿಸಿದ ಪೀಠ, ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಆದೇಶ ಅನ್ವಯಿಸಲಿದೆ ಎಂದು ತಿಳಿಸಿ ವಿಚಾರಣೆಯನ್ನು ನವೆಂಬರ್​ 29ಕ್ಕೆ ಮುಂದೂಡಿತು.

ಇದೇ ಆರೋಪ ಸಂಬಂಧ ರಮೇಶ್‌ ಗೌಡ ಅರ್ಜಿ ವಿಚಾರಣೆ ನಡೆಸಿದ್ದ ಪೀಠ, ಅಮೃತಹಳ್ಳಿ ಠಾಣಾಧಿಕಾರಿಯು ಕುಮಾರಸ್ವಾಮಿ ಅವರು 50 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾರೆ ಎಂಬ ದೂರಿಗೆ ಸಂಬಂಧಿಸಿದಂತೆ ಮೊದಲಿಗೆ ಎನ್‌ಸಿಆರ್‌ ದಾಖಲಿಸಿ, ಆನಂತರ ಎಫ್‌ಐಆರ್‌ ಮಾಡಿರುವುದು ಏಕೆ? ಎಂಬುದಕ್ಕೆ ಮುಂದಿನ ವಿಚಾರಣೆ ವೇಳೆಗೆ ವಿವರಣೆ ಸಲ್ಲಿಸಬೇಕು. ಇಲ್ಲಿ ಠಾಣಾಧಿಕಾರಿಯು ಚಂಚಲವಾಗಿ ನಡೆದುಕೊಂಡಿರುವಂತಿದೆ. ಅಲ್ಲಿಯವರೆಗೆ ಅರ್ಜಿದಾರರ ವಿರುದ್ಧ ಯಾವುದೇ ದುರುದ್ದೇಶಪೂರಿತ ಕ್ರಮಕೈಗೊಳ್ಳಬಾರದು ಎಂದು ಪೀಠ ಹೇಳಿತ್ತು.

ಇದನ್ನೂ ಓದಿ : ಎಡಿಜಿಪಿ ಚಂದ್ರಶೇಖರ್‌ಗೆ ಬೆದರಿಕೆ ಆರೋಪ: ಹೆಚ್‌ಡಿಕೆ ವಿರುದ್ಧ ಆತುರದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.