ETV Bharat / state

ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ:ಡಿ.ಕೆ.ಶಿವಕುಮಾರ್ - Compromise Politics

author img

By ETV Bharat Karnataka Team

Published : Jul 12, 2024, 5:32 PM IST

ಲೋಕಸಭಾ ಚುನಾವಣೆಯಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ. ಒಂದಷ್ಟು ಜನ ಸೋತಿದ್ದಾರೆ. ಮುಂದಕ್ಕೆ ಇವರುಗಳು ಪಕ್ಷಕ್ಕೆ ದೊಡ್ಡ ಆಸ್ತಿಯಾಗಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

DKS REACT ON COMPROMISE POLITICS
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)
ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ:ಡಿ.ಕೆ.ಶಿವಕುಮಾರ್ (ETV Bharat)

ಬೆಂಗಳೂರು: ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ. ಎಲ್ಲವೂ ಸುಳ್ಳು. ರಾಜ್ಯದಲ್ಲಿ ಎಲ್ಲ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಉತ್ತರಿಸಿದ ಅವರು, ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ. ಎಲ್ಲ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ. ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಒಂದಷ್ಟು ಜನ ಮಂತ್ರಿಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು. ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ. ಒಂದಷ್ಟು ಜನ ಸೋತಿದ್ದಾರೆ. ಮುಂದಕ್ಕೆ ಇವರುಗಳು ಪಕ್ಷಕ್ಕೆ ದೊಡ್ಡ ಆಸ್ತಿಯಾಗಲಿದ್ದಾರೆ, ಬೆಳೆಯುತ್ತಾರೆ ಎಂದರು.

ಎಲ್ಲ ಕಾರ್ಯಕರ್ತರು, ಮುಖಂಡರು, ಗೆದ್ದವರು, ಸೋತವರು ಎಲ್ಲರೂ ಸೇರಿ ಎಐಸಿಸಿ ಸತ್ಯಶೋದನಾ ಸಮಿತಿಗೆ ಪರಿಸ್ಥಿತಿ ಅರಿಯಲು ಅಹವಾಲು ಸಲ್ಲಿಸಿದ್ದೆವು. ಅದರಂತೆ ಎಲ್ಲರು ಸಮಿತಿಯ ಮುಂದೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಮುಂದಕ್ಕೆ ಯಾವ ರೀತಿ ಕಾರ್ಯನಿರ್ವಹಿಸಬೇಕು ಎನ್ನುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಅವರ ದರಿದ್ರವನ್ನು ಅವರೇ ಬಯಲು ಮಾಡುತ್ತಿದ್ದಾರೆ: ಮುಡಾ ಹಗರಣದ ವಿರುದ್ಧ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಕೇಳಿದಾಗ, ವಿಧಾನಸಭಾ ಕಲಾಪ ಬರುತ್ತಿರುವ ಕಾರಣ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಮಾಡಿರುವ ದರಿದ್ರವನ್ನು ಅವರೇ ಬಯಲು ಮಾಡುತ್ತಿದ್ದಾರೆ. ಇದಕ್ಕೆ ಸದನದಲ್ಲಿ ಏನು ಉತ್ತರ ಕೊಡಬೇಕೊ ಅದನ್ನು ಕೊಡುತ್ತೇವೆ ಎಂದು ಖಾರವಾಗಿ ಉತ್ತರಿಸಿದರು.

ಇದನ್ನೂ ಓದಿ: ಮುಡಾ ಹಗರಣ ವಿರುದ್ಧ ಬಿಜೆಪಿ ಪ್ರತಿಭಟನೆ: ಮೈಸೂರಿಗೆ ತೆರಳುವ ಮುನ್ನವೇ ವಿಜಯೇಂದ್ರ ಸೇರಿ ಹಲವರು ವಶಕ್ಕೆ - BJP Leaders Detained

ETV Bharat Logo

Copyright © 2024 Ushodaya Enterprises Pvt. Ltd., All Rights Reserved.